Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 7:1 - ಪರಿಶುದ್ದ ಬೈಬಲ್‌

1 ಎಲೀಷನು ಅವನಿಗೆ, “ಯೆಹೋವನ ಸಂದೇಶವನ್ನು ಕೇಳು: ‘ನಾಳೆ ಇದೇ ಸಮಯಕ್ಕೆ, ಅಧಿಕವಾದ ಆಹಾರವು ಬಹಳ ಕಡಿಮೆ ಬೆಲೆಗೆ ಸಿಗುತ್ತದೆ. ಒಂದು ರೂಪಾಯಿಗೆ ಒಂದು ಬುಟ್ಟಿ ಹಿಟ್ಟನ್ನೂ ಎರಡು ಬುಟ್ಟಿ ಜವೆಗೋಧಿಯನ್ನೂ ಸಮಾರ್ಯನಗರದ ಊರ ಬಾಗಿಲಿನಲ್ಲಿರುವ ಮಾರುಕಟ್ಟೆಯಲ್ಲಿ ಮಾರಲಾಗುವುದು’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಎಲೀಷನು ಅವನಿಗೆ, “ಯೆಹೋವನ ವಾಕ್ಯವನ್ನು ಕೇಳು, ಆತನು, ‘ನಾಳೆ ಈ ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವುದು’” ಎನ್ನುತ್ತಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಗ ಎಲೀಷನು, “ಸರ್ವೇಶ್ವರಸ್ವಾಮಿಯ ಈ ವಾಕ್ಯವನ್ನು ಕೇಳು: ‘ನಾಳೆ ಇಷ್ಟೇಹೊತ್ತಿಗೆ ಸಮಾರಿಯಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ನಾಣ್ಯಕ್ಕೆ ಮೂರು ಕಿಲೋಗ್ರಾಂನಂತೆಯೂ ಜವೆಗೋದಿಯು ನಾಣ್ಯಕ್ಕೆ ಆರು ಕಿಲೋಗ್ರಾಂನಂತೆಯೂ ಮಾರಲಾಗುವುದು’ ಎನ್ನುತ್ತಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಎಲೀಷನು ಅವನಿಗೆ - ಯೆಹೋವನ ವಾಕ್ಯವನ್ನು ಕೇಳು; ಆತನು - ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವವು ಅನ್ನುತ್ತಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಎಲೀಷನು, “ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾಳೆ ಹೆಚ್ಚು ಕಡಿಮೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಿಲಲ್ಲಿ ಮೂರು ಕಿಲೋಗ್ರಾಂ ನಯವಾದ ಗೋಧಿಹಿಟ್ಟು ಒಂದು ಬೆಳ್ಳಿ ನಾಣ್ಯಕ್ಕೆ ಮತ್ತು ಆರು ಕಿಲೋಗ್ರಾಂ ಜವೆಗೋಧಿ ಒಂದು ಬೆಳ್ಳಿ ನಾಣ್ಯಕ್ಕೆ ಮಾರಲಾಗುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 7:1
19 ತಿಳಿವುಗಳ ಹೋಲಿಕೆ  

“ನಿಮ್ಮನ್ನು ನೀವು ಶುದ್ಧೀಕರಿಸಿಕೊಳ್ಳಿರಿ. ನಾಳೆ ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುತ್ತಾನೆ” ಎಂದು ಯೆಹೋಶುವನು ಜನರಿಗೆ ತಿಳಿಸಿದನು.


“ನಾನು ಇಸ್ರೇಲರ ಗೊಣಗುಟ್ಟುವಿಕೆಯನ್ನು ಕೇಳಿದ್ದೇನೆ. ಆದ್ದರಿಂದ ಅವರಿಗೆ ಹೀಗೆ ಹೇಳು: ‘ಸೂರ್ಯಾಸ್ತಮಕ್ಕಿಂತ ಮೊದಲು ನೀವು ಮಾಂಸವನ್ನು ತಿನ್ನುವಿರಿ; ಪ್ರತಿ ಮುಂಜಾನೆ ಸೂರ್ಯೋದಯಕ್ಕಿಂತ ಮೊದಲು ನಿಮಗೆ ಬೇಕಾದಷ್ಟು ರೊಟ್ಟಿಯನ್ನು ತಿನ್ನುವಿರಿ. ಆಗ ನಾನೇ ದೇವರಾದ ಯೆಹೋವನೆಂಬುದನ್ನು ನೀವು ತಿಳಿದುಕೊಳ್ಳುವಿರಿ; ನನ್ನಲ್ಲಿ ಭರವಸೆ ಇಡುವಿರಿ’” ಎಂದು ಹೇಳಿದನು.


ಆಗ ಯೆಹೋವನು, “ನನ್ನ ಪರವಾಗಿ ಆ ಎಲುಬುಗಳೊಂದಿಗೆ ಮಾತನಾಡು. ಅವುಗಳಿಗೆ ಹೀಗೆ ಹೇಳು: ‘ಒಣಗಿದ ಎಲುಬುಗಳೇ, ಯೆಹೋವನ ಮಾತನ್ನು ಕೇಳಿರಿ.


ಸೌಲನು ಮತ್ತು ಅವನ ಸೈನಿಕರು ಯಾಬೇಷಿನ ಸಂದೇಶಕರಿಗೆ, “ಗಿಲ್ಯಾದಿನ ಯಾಬೇಷ್ ಜನರಿಗೆ ನಾಳೆ ನಡುಮಧ್ಯಾಹ್ನದೊಳಗೆ ನಿಮ್ಮನ್ನು ರಕ್ಷಿಸುತ್ತೇವೆಂದು ತಿಳಿಸಿ” ಎಂಬುದಾಗಿ ಹೇಳಿದರು. ಯಾಬೇಷಿನ ಜನರಿಗೆ ಸೌಲನ ಸಂದೇಶವನ್ನು ಸಂದೇಶಕರು ತಿಳಿಸಿದರು. ಯಾಬೇಷಿನ ಜನರು ಹರ್ಷಿತರಾದರು.


ಆದರೆ ಮೋಶೆ ಆ ಜನರಿಗೆ, “ಭಯಪಡಬೇಡಿರಿ! ಓಡಿಹೋಗಬೇಡಿರಿ! ಇಲ್ಲೇ ಇದ್ದು ಯೆಹೋವನು ಈ ದಿನ ನಿಮ್ಮನ್ನು ರಕ್ಷಿಸುವುದನ್ನು ನೋಡಿರಿ. ಈ ದಿನದ ನಂತರ ನೀವು ಇನ್ನೆಂದಿಗೂ ಈ ಈಜಿಪ್ಟಿನವರನ್ನು ನೋಡುವುದಿಲ್ಲ.


ದೇವರು ಆ ಪಟ್ಟಣದಲ್ಲಿದ್ದಾನೆ, ಆದ್ದರಿಂದ ಅದೆಂದಿಗೂ ನಾಶವಾಗುವುದಿಲ್ಲ. ಸೂರ್ಯೋದಯಕ್ಕಿಂತ ಮೊದಲೇ ದೇವರು ಅದರ ಸಹಾಯಕ್ಕಾಗಿ ಬರುವನು.


ಆದ್ದರಿಂದ ನಾಳೆ ನನ್ನ ಜನಕ್ಕೂ ನಿನ್ನ ಜನಕ್ಕೂ ವ್ಯತ್ಯಾಸ ಮಾಡುವೆನು. ಅದೇ ನನ್ನ ಸಾಕ್ಷಿ’ ಎಂದು ಹೇಳಬೇಕು” ಎಂದು ಹೇಳಿದನು.


ಆಗ ಯೆಶಾಯನು ಹಿಜ್ಕೀಯನಿಗೆ, “ಯೆಹೋವನಿಂದ ಬಂದ ಈ ಸಂದೇಶವನ್ನು ಆಲಿಸು.


ಆಗ ಒಬ್ಬನ ಸ್ವರವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಆ ನಾಲ್ಕು ಜೀವಿಗಳಿದ್ದ ಸ್ಥಳದಿಂದ ಈ ಧ್ವನಿಯು ಹೊರ ಹೊಮ್ಮಿತು. ಆ ಧ್ವನಿಯು, “ಒಂದು ದಿನದ ಕೆಲಸಕ್ಕೆ ಒಂದು ಕಿಲೋಗ್ರಾಂ ಗೋಧಿ. ಒಂದು ದಿನದ ಕೆಲಸಕ್ಕೆ ಮೂರು ಕಿಲೋಗ್ರಾಂ ಬಾರ್ಲಿ. ಆದರೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಕೆಡಿಸಬೇಡಿ!” ಎಂದು ಹೇಳಿತು.


ಬಾಳ್‌ಷಾಲಿಷಾದಿಂದ ಒಬ್ಬ ಮನುಷ್ಯನು ಪ್ರಥಮ ಸುಗ್ಗಿಯ ರೊಟ್ಟಿಗಳನ್ನು ದೇವಮನುಷ್ಯನಿಗೆ (ಎಲೀಷನಿಗೆ) ತೆಗೆದುಕೊಂಡು ಬಂದನು. ಇವನು ಇಪ್ಪತ್ತು ಜವೆಗೋಧಿ ರೊಟ್ಟಿಗಳನ್ನೂ ಒಂದು ಚೀಲದಲ್ಲಿ ಹಸೀ ತೆನೆಗಳನ್ನೂ ತಂದನು. ಆಗ ಎಲೀಷನು, “ಜನರಿಗೆ ಈ ಆಹಾರವನ್ನು ಕೊಡು, ಅವರು ತಿನ್ನಲಿ” ಎಂದು ಹೇಳಿದನು.


ಅಂದ್ರೆಯನು, “ಇಲ್ಲಿರುವ ಒಬ್ಬ ಹುಡುಗನ ಬಳಿ ಜವೆಗೋಧಿಯ ಐದು ರೊಟ್ಟಿಗಳಿವೆ ಮತ್ತು ಎರಡು ಚಿಕ್ಕ ಮೀನುಗಳಿವೆ. ಆದರೆ ಅವು ಈ ಜನಸಮೂಹಕ್ಕೆ ಸಾಕಾಗುವುದಿಲ್ಲ” ಎಂದು ಹೇಳಿದನು.


ಜನರು ನಗರದೊಳಕ್ಕೆ ಆಹಾರವನ್ನು ತರಲು ಸೈನಿಕರು ಅವಕಾಶ ಕೊಡಲಿಲ್ಲ. ಆದ್ದರಿಂದ ಸಮಾರ್ಯದಲ್ಲಿ ಭೀಕರ ಬರಗಾಲವು ಆ ಕಾಲದಲ್ಲಾಯಿತು. ಸಮಾರ್ಯದಲ್ಲಿ ಒಂದು ಹೇಸರಕತ್ತೆಯ ತಲೆಯು ಎಂಭತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಾಟವಾಗುವಷ್ಟು ಕೆಟ್ಟ ಪರಿಸ್ಥಿತಿಯಿತ್ತು. ಅರ್ಧಸೇರು ಪಾರಿವಾಳದ ಮಲದ ಲದ್ದಿಯು ಐದು ಬೆಳ್ಳಿನಾಣ್ಯಗಳಿಗೆ ಮಾರಾಟವಾಗುತ್ತಿತ್ತು.


ಎಲೀಷನು ಹಿರಿಯರೊಂದಿಗೆ ಇನ್ನೂ ಮಾತನಾಡುತ್ತಿರುವಾಗ ಸಂದೇಶಕನು ಅವನ ಬಳಿಗೆ ಬಂದನು. ಅವನ ಸಂದೇಶವು ಹೀಗಿತ್ತು: “ಈ ಆಪತ್ತು ಯೆಹೋವನಿಂದಲೇ ಬಂದಿದೆ! ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು?”


ಸೊದೋಮಿನ ಅಧಿಪತಿಗಳೇ, ಯೆಹೋವನ ಸಂದೇಶವನ್ನು ಕೇಳಿರಿ. ಗೊಮೋರದ ಜನರೇ, ಆತನ ಉಪದೇಶವನ್ನು ಕೇಳಿರಿ.


ಆದರೆ ಮೀಕಾಯೆಹು ಯೆಹೋವನಿಗಾಗಿ ಮಾತನಾಡುತ್ತಲೇ ಇದ್ದನು. ಮೀಕಾಯೆಹು, “ಕೇಳಿರಿ! ಈ ಮಾತುಗಳನ್ನು ಯೆಹೋವನು ತಿಳಿಸುತ್ತಾನೆ! ಯೆಹೋವನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿರುವುದನ್ನು ನಾನು ನೋಡಿದೆನು. ಆತನ ಎಲ್ಲಾ ದೂತರು ಆತನ ಎಡಬಲಗಳಲ್ಲಿ ನಿಂತಿದ್ದರು.


ಆಗ ಜನರು ಅರಾಮ್ಯರ ಪಾಳೆಯಕ್ಕೆ ಓಡುತ್ತಾ ಹೋಗಿ, ಅಲ್ಲಿನ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡರು. ಪ್ರತಿಯೊಬ್ಬರಿಗೂ ಹೇರಳವಾಗಿ ದೊರೆಯಿತು. ಯೆಹೋವನು ಹೇಳಿದಂತೆಯೇ ಇದಾಯಿತು. ಒಬ್ಬನು ಉತ್ತಮವಾದ ಒಂದು ಬುಟ್ಟಿ ಹಿಟ್ಟನ್ನು ಮತ್ತು ಎರಡು ಬುಟ್ಟಿ ಜವೆಗೋಧಿಯನ್ನು ಕೇವಲ ಒಂದು ರೂಪಾಯಿಗೆ ಕೊಳ್ಳಬಹುದಾಗಿತ್ತು!


ಒಂದು ದಿನ ಸಮುವೇಲನು ಸೌಲನಿಗೆ, “ಯೆಹೋವನು ಇಸ್ರೇಲರ ಮೇಲೆ ನಿನ್ನನ್ನು ರಾಜನನ್ನಾಗಿ ಅಭಿಷೇಕಿಸಲು ನನ್ನನ್ನು ಕಳುಹಿಸಿದನು. ಈಗ ಯೆಹೋವನ ಸಂದೇಶವನ್ನು ಕೇಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು