Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 7:11 - ಪರಿಶುದ್ದ ಬೈಬಲ್‌

11 ಆಗ ನಗರದ ದ್ವಾರಪಾಲಕರು ಕೂಗುತ್ತಾ ರಾಜನ ಮನೆಯಲ್ಲಿದ್ದ ಜನರಿಗೆ ಈ ಸಂಗತಿಗಳನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಬಾಗಿಲು ಕಾಯುವವರು ಕೂಡಲೆ ಅರಸನ ಮನೆಯವರನ್ನು ಕೂಗಿ, ಅವರಿಗೆ ಈ ವರ್ತಮಾನವನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದ್ವಾರಪಾಲಕರು ಕೂಡಲೆ ಅರಮನೆಯವರನ್ನು ಕೂಗಿ ಅವರಿಗೆ ಈ ಸಮಾಚಾರವನ್ನು ಮುಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಬಾಗಲು ಕಾಯುವವರು ಕೂಡಲೆ ಅರಮನೆಯವರನ್ನು ಕೂಗಿ ಅವರಿಗೆ ಈ ವರ್ತಮಾನವನ್ನು ಮುಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವನು ಬಾಗಿಲು ಕಾಯುವವರನ್ನು ಕರೆದನು. ಅವರು ಒಳಗಿರುವ ಅರಸನ ಮನೆಯವರಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 7:11
2 ತಿಳಿವುಗಳ ಹೋಲಿಕೆ  

ಈ ಕುಷ್ಠರೋಗಿಗಳು ನಗರದ ಬಾಗಿಲಿಗೆ ಬಂದು ದ್ವಾರಪಾಲಕರನ್ನು ಕರೆದು, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಆದರೆ ನಾವು ಜನರ ಧ್ವನಿಯನ್ನು ಕೇಳಲೇ ಇಲ್ಲ. ಅಲ್ಲಿ ಜನರ ಸುಳಿವಿಲ್ಲ. ಕುದುರೆಗಳು ಮತ್ತು ಹೇಸರಕತ್ತೆಗಳು ಕಟ್ಟಿಹಾಕಿದಂತೆಯೇ ಇವೆ. ಗುಡಾರಗಳಿನ್ನೂ ಯಥಾಸ್ಥಿತಿಯಲ್ಲಿವೆ. ಆದರೆ ಸೈನಿಕರೆಲ್ಲರೂ ಹೊರಟುಹೋಗಿದ್ದಾರೆ” ಎಂದು ಹೇಳಿದರು.


ಆಗ ರಾತ್ರಿಯಾಗಿದ್ದರೂ ರಾಜನು ತನ್ನ ಹಾಸಿಗೆಯಿಂದ ಮೇಲಕ್ಕೆದ್ದನು. ರಾಜನು ತನ್ನ ಅಧಿಕಾರಿಗಳಿಗೆ, “ಅರಾಮ್ಯರ ಸೈನಿಕರು ಮಾಡಬೇಕೆಂದಿರುವುದನ್ನು ನಾನು ನಿಮಗೆ ಹೇಳುತ್ತೇನೆ. ನಾವು ಬಹಳ ಹಸಿದಿದ್ದೇವೆಂಬುದು ಅವರಿಗೆ ತಿಳಿದಿದೆ. ಅವರು ಹೊಲಗಳಲ್ಲಿ ಅಡಗಿಕೊಳ್ಳಲು ಪಾಳೆಯನ್ನು ಬಿಟ್ಟುಹೋಗಿದ್ದಾರೆ. ‘ಇಸ್ರೇಲರು ನಗರದಿಂದ ಹೊರಗೆ ಬಂದಾಗ, ನಾವು ಅವರನ್ನು ಜೀವಂತವಾಗಿ ಸೆರೆಹಿಡಿದು ಅವರ ನಗರವನ್ನು ಪ್ರವೇಶಿಸಬಹುದು’ ಎಂದು ಅರಾಮ್ಯರು ಆಲೋಚಿಸಿದ್ದಾರೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು