Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 7:15 - ಪರಿಶುದ್ದ ಬೈಬಲ್‌

15 ಅವರು ಅರಾಮ್ಯರ ಸೇನೆಗಾಗಿ ಹುಡುಕಿಕೊಂಡು ಜೋರ್ಡನ್ ನದಿಯವರೆಗೂ ಹೋದರು. ರಸ್ತೆಯ ದಾರಿಯಲ್ಲೆಲ್ಲಾ ಬಟ್ಟೆಗಳು ಮತ್ತು ಆಯುಧಗಳು ಬಿದ್ದಿದ್ದವು. ಅರಾಮ್ಯರು ಆತುರಾತುರವಾಗಿ ಹೋಗುವಾಗ ಅವುಗಳನ್ನೆಲ್ಲಾ ಬಿಸಾಡಿ ಹೋಗಿದ್ದರು. ಸಂದೇಶಕರು ಸಮಾರ್ಯಕ್ಕೆ ಹಿಂದಿರುಗಿ ಬಂದು ರಾಜನಿಗೆ ವಿಷಯವನ್ನು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರು ಯೊರ್ದನ್ ನದಿಯವರೆಗೂ ಹೋಗಿ, ಅವಸರದಿಂದ ಓಡಿಹೋದ ಅರಾಮ್ಯರು ದಾರಿಯಲ್ಲೆಲ್ಲಾ ತಮ್ಮ ಬಟ್ಟೆಗಳನ್ನು ಸಾಮಾನುಗಳನ್ನು ಬಿಸಾಡಿದ್ದನ್ನೂ ಕಂಡು, ಹಿಂದಿರುಗಿ ಬಂದು ಅರಸನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವರು ಜೋರ್ಡನ್ ನದಿಯವರೆಗೂ ಹೋಗಿ, ದಾರಿಯಲ್ಲೆಲ್ಲಾ ತಮ್ಮ ಬಟ್ಟೆಬರೆಗಳನ್ನೂ ಸಾಮಾನು ಸರಂಜಾಮುಗಳನ್ನೂ ಬಿಸಾಡಿರುವುದನ್ನು ಕಂಡು, ಹಿಂದಿರುಗಿ ಬಂದು ಅರಸನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರು ಯೊರ್ದನ್‍ಹೊಳೆಯವರೆಗೂ ಹೋಗಿ ಅವಸರದಿಂದ ಓಡಿಹೋದ ಅರಾಮ್ಯರು ದಾರಿಯಲ್ಲೆಲ್ಲಾ ತಮ್ಮ ಬಟ್ಟೆಗಳನ್ನೂ ಸಾಮಾನುಗಳನ್ನೂ ಬಿಸಾಡಿದ್ದನ್ನು ಕಂಡು ಹಿಂದಿರುಗಿ ಬಂದು ಅರಸನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವರು ಅವರ ಹಿಂದೆ ಯೊರ್ದನಿನವರೆಗೆ ಹೋದರು. ಮಾರ್ಗದಲ್ಲೆಲ್ಲಾ ಅರಾಮ್ಯರು ಅವಸರದಿಂದ ಬಿಸಾಡಿದ ವಸ್ತ್ರಗಳೂ, ಪಾತ್ರೆಗಳೂ ತುಂಬಿದ್ದವು. ದೂತರು ತಿರುಗಿಬಂದು ಅರಸನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 7:15
14 ತಿಳಿವುಗಳ ಹೋಲಿಕೆ  

ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.


ಒಬ್ಬನು ಪ್ರಪಂಚವನ್ನೆಲ್ಲಾ ಗಳಿಸಿಕೊಂಡು ತನ್ನ ಆತ್ಮವನ್ನೇ ಕಳೆದುಕೊಂಡರೆ ಅದರಿಂದ ಅವನಿಗೇನು ಪ್ರಯೋಜನ? ಮನುಷ್ಯನು ತನ್ನ ಆತ್ಮವನ್ನು ಕೊಂಡುಕೊಳ್ಳಲು ಏನನ್ನು ತಾನೇ ಕೊಡಬಲ್ಲನು?


ನಿಮ್ಮ ದಂಗೆಕೋರತನದ ಮಾರ್ಗಗಳನ್ನೆಲ್ಲ ತೊರೆದುಬಿಟ್ಟು ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿರಿ. ಇಸ್ರೇಲ್ ಜನರೇ, ನೀವು ಮರಣವನ್ನು ಬರಮಾಡಿಕೊಳ್ಳುವುದೇಕೆ?


ಆಗ ಜನರು ತಯಾರಿಸಿರುವ ಬೆಳ್ಳಿಬಂಗಾರದ ವಿಗ್ರಹಗಳನ್ನು ಪೂಜಿಸುವದನ್ನು ನಿಲ್ಲಿಸುವರು. ನೀವು ಆ ವಿಗ್ರಹಗಳನ್ನು ತಯಾರಿಸಿದಾಗ ನಿಜವಾಗಿಯೂ ಪಾಪಮಾಡಿದಿರಿ.


ಅವನ ತಂದೆಯ ಮನೆಯ ಎಲ್ಲಾ ವಿಶೇಷ ಸಂಗತಿಗಳನ್ನು, ವಸ್ತುಗಳನ್ನು ಅವನಿಗೆ ತೂಗುಹಾಕುವರು. ಎಲ್ಲಾ ಹಿರಿಕಿರಿಯರು ಅವನ ಮೇಲೆ ಆತುಕೊಂಡಿರುವರು. ಅವರು ಅವನಿಗೆ ತೂಗುಹಾಕಲ್ಪಟ್ಟ ಚಿಕ್ಕಚಿಕ್ಕ ಪಾತ್ರೆಗಳಂತೆಯೂ ನೀರಿನ ದೊಡ್ಡ ಸೀಸೆಗಳಂತೆಯೂ ಇರುವರು.”


ನ್ಯಾಯಶಾಸ್ತ್ರಿಗಳೇ, ನಿಮ್ಮ ಕಾರ್ಯಗಳಿಗೆ ನೀವೇ ಉತ್ತರ ಕೊಡಬೇಕು. ಆಗ ನೀವು ಏನು ಮಾಡುವಿರಿ? ದೂರದೇಶದಿಂದ ನಿಮ್ಮ ನಾಶನವು ಬರುತ್ತಲಿದೆ. ಸಹಾಯಕ್ಕಾಗಿ ಎಲ್ಲಿಗೆ ಓಡುವಿರಿ? ನಿಮ್ಮ ಐಶ್ವರ್ಯವೂ ನಿಮ್ಮ ಧನರಾಶಿಯೂ ನಿಮ್ಮನ್ನು ರಕ್ಷಿಸಲಾರವು.


ಆ ಸಮಯದಲ್ಲಿ ಜನರು ತಮ್ಮ ಬೆಳ್ಳಿಬಂಗಾರಗಳ ವಿಗ್ರಹಗಳನ್ನೆತ್ತಿ ಬಿಸಾಡಿಬಿಡುವರು. ಈ ವಿಗ್ರಹಗಳನ್ನು ಜನರು ಪೂಜಿಸುವದಕ್ಕಾಗಿ ಮಾಡಿಕೊಂಡರು. ಬಾವಲಿಗಳೂ, ಇಲಿಗಳೂ ವಾಸಿಸುವ ಸಂದುಗಳಲ್ಲಿ ಈ ವಿಗ್ರಹಗಳನ್ನು


ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ! ಎಂಬಂತೆ ಮನುಷ್ಯನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ತನ್ನ ಸರ್ವಸ್ವವನ್ನೂ ಕೊಡುವನು.


ಅತಿಥಿಗಳಿಗೆ ಬಂಗಾರದ ಪಾನಪಾತ್ರೆಯಲ್ಲಿ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಬೇರೆಬೇರೆ ವಿಧದ ಪಾತ್ರೆಗಳನ್ನು ಉಪಯೋಗಿಸಲಾಗಿತ್ತು. ರಾಜನ ಔದಾರ್ಯಕ್ಕೆ ತಕ್ಕಂತೆ ದ್ರಾಕ್ಷಾರಸವು ಧಾರಾಳವಾಗಿ ಹಂಚಲ್ಪಡುತ್ತಿತ್ತು.


ಕೂಡಲೇ ರಾಜನು ಎರಡು ರಥಗಳನ್ನು ತರಿಸಿ ಅರಾಮ್ಯರ ಸೇನೆಯು ಎಲ್ಲಿದೆ ಎಂಬುದನ್ನು ನೋಡಿಕೊಂಡು ಬರುವುದಕ್ಕಾಗಿ ಅವರನ್ನು ಕಳುಹಿಸಿದನು.


ಆಗ ಜನರು ಅರಾಮ್ಯರ ಪಾಳೆಯಕ್ಕೆ ಓಡುತ್ತಾ ಹೋಗಿ, ಅಲ್ಲಿನ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡರು. ಪ್ರತಿಯೊಬ್ಬರಿಗೂ ಹೇರಳವಾಗಿ ದೊರೆಯಿತು. ಯೆಹೋವನು ಹೇಳಿದಂತೆಯೇ ಇದಾಯಿತು. ಒಬ್ಬನು ಉತ್ತಮವಾದ ಒಂದು ಬುಟ್ಟಿ ಹಿಟ್ಟನ್ನು ಮತ್ತು ಎರಡು ಬುಟ್ಟಿ ಜವೆಗೋಧಿಯನ್ನು ಕೇವಲ ಒಂದು ರೂಪಾಯಿಗೆ ಕೊಳ್ಳಬಹುದಾಗಿತ್ತು!


ಹುಡುಕುವ ಸಮಯ, ಹುಡುಕದಿರುವ ಸಮಯ. ವಸ್ತುಗಳನ್ನು ಇಟ್ಟುಕೊಳ್ಳುವ ಸಮಯ, ವಸ್ತುಗಳನ್ನು ಬಿಸಾಡುವ ಸಮಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು