2 ಅರಸುಗಳು 7:16 - ಪರಿಶುದ್ದ ಬೈಬಲ್16 ಆಗ ಜನರು ಅರಾಮ್ಯರ ಪಾಳೆಯಕ್ಕೆ ಓಡುತ್ತಾ ಹೋಗಿ, ಅಲ್ಲಿನ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡರು. ಪ್ರತಿಯೊಬ್ಬರಿಗೂ ಹೇರಳವಾಗಿ ದೊರೆಯಿತು. ಯೆಹೋವನು ಹೇಳಿದಂತೆಯೇ ಇದಾಯಿತು. ಒಬ್ಬನು ಉತ್ತಮವಾದ ಒಂದು ಬುಟ್ಟಿ ಹಿಟ್ಟನ್ನು ಮತ್ತು ಎರಡು ಬುಟ್ಟಿ ಜವೆಗೋಧಿಯನ್ನು ಕೇವಲ ಒಂದು ರೂಪಾಯಿಗೆ ಕೊಳ್ಳಬಹುದಾಗಿತ್ತು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ಜನರು ಹೊರಗೆ ಹೋಗಿ ಅರಾಮ್ಯರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಯೆಹೋವನ ಮಾತಿನಂತೆ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆಗ ಜನರು ಹೊರಗೆ ಹೋಗಿ, ಸಿರಿಯಾದವರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಸರ್ವೇಶ್ವರನ ಮಾತಿನಂತೆ ಗೋದಿಹಿಟ್ಟು ನಾಣ್ಯಕ್ಕೆ ಮೂರು ಕಿಲೋಗ್ರಾಂನಂತೆಯೂ ಜವೆಗೋದಿಯು ನಾಣ್ಯಕ್ಕೆ ಆರು ಕಿಲೋಗ್ರಾಂನಂತೆಯೂ ಮಾರಲಾಗುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆಗ ಜನರು ಹೊರಗೆ ಹೋಗಿ ಅರಾಮ್ಯರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಯೆಹೋವನ ಮಾತಿನಂತೆ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಜನರು ಹೊರಟುಹೋಗಿ ಅರಾಮ್ಯರ ಡೇರೆಗಳನ್ನು ಸುಲಿದುಕೊಂಡರು. ಆದ್ದರಿಂದ ಯೆಹೋವ ದೇವರ ವಾಕ್ಯದ ಪ್ರಕಾರವೇ ಮೂರು ಕಿಲೋಗ್ರಾಂ ನಯವಾದ ಗೋಧಿಹಿಟ್ಟು ಒಂದು ಬೆಳ್ಳಿ ನಾಣ್ಯಕ್ಕೂ, ಆರು ಕಿಲೋಗ್ರಾಂ ಜವೆಗೋಧಿಯು ಒಂದು ಬೆಳ್ಳಿ ನಾಣ್ಯಕ್ಕೂ ಮಾರಲಾಯಿತು. ಅಧ್ಯಾಯವನ್ನು ನೋಡಿ |
ಯೆಹೋವನು ತನ್ನ ಸೇವಕರನ್ನು ಜನರಿಗೆ ಸಂದೇಶ ತಿಳಿಸುವದಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾನೆ. ಆತನ ಸಂದೇಶಗಳು ಸತ್ಯವಾದವುಗಳಾಗಿವೆ. ಜನರು ಮಾಡಬೇಕಾದ ಕಾರ್ಯಗಳ ಬಗ್ಗೆ ಯೆಹೋವನು ಸಂದೇಶಕರನ್ನು ಕಳುಹಿಸುತ್ತಾನೆ. ಅವರ ಸಲಹೆಯು ಒಳ್ಳೆಯದೆಂದು ಯೆಹೋವನು ತೋರಿಸಿಕೊಡುತ್ತಾನೆ. ಯೆಹೋವನು ಜೆರುಸಲೇಮಿಗೆ, “ಜನರು ನಿನ್ನಲ್ಲಿ ಮತ್ತೆ ವಾಸಮಾಡುವರು” ಎಂತಲೂ ಯೆಹೂದದ ನಗರಗಳಿಗೆ, “ನೀವು ತಿರುಗಿ ಕಟ್ಟಲ್ಪಡುವಿರಿ” ಎಂತಲೂ ಕೆಡವಲ್ಪಟ್ಟ ನಗರಗಳಿಗೆ, “ನಾನು ತಿರುಗಿ ನಿಮ್ಮನ್ನು ನಗರಗಳನ್ನಾಗಿ ಮಾಡುತ್ತೇನೆ” ಎಂತಲೂ ಹೇಳುತ್ತಾನೆ.
ನೀವು ಯುದ್ಧಮಾಡಿ ಇತರರಿಂದ ಸುಲಿದುಕೊಳ್ಳುತ್ತೀರಿ. ಆದರೆ ಅವರು ನಿಮ್ಮಿಂದ ಏನೂ ಕದ್ದುಕೊಳ್ಳಲಿಲ್ಲ. ನೀವು ಜನರಿಗೆ ವಿರುದ್ಧವಾಗಿ ತಿರುಗುತ್ತೀರಿ. ಆದರೆ ಅವರು ನಿಮಗೆ ವಿರುದ್ಧವಾಗಲಿಲ್ಲ. ಆದ್ದರಿಂದ ನೀವು ಕದ್ದುಕೊಳ್ಳುವದನ್ನು ಬಿಟ್ಟಾಗ ಇತರರು ನಿಮ್ಮದನ್ನು ಕದ್ದುಕೊಳ್ಳುತ್ತಾರೆ. ನೀವು ಇತರರಿಗೆ ಹಾನಿ ಮಾಡುವದನ್ನು ನಿಲ್ಲಿಸಿದಾಗ ಇತರರು ನಿಮಗೆ ಹಾನಿ ಮಾಡುವರು. ಆಗ ನೀವು ಹೀಗೆ ಹೇಳುವಿರಿ: