2 ಆಗ ರಾಜನಿಗೆ ಆಪ್ತನಾಗಿದ್ದ ಅಧಿಕಾರಿಯು ದೇವಮನುಷ್ಯನಿಗೆ, “ಯೆಹೋವನು ಪರಲೋಕಕ್ಕೆ ಕಿಟಕಿಗಳನ್ನು ಮಾಡಿಸಿದರೂ ಇದು ಸಂಭವಿಸುವುದಿಲ್ಲ!” ಎಂದು ಉತ್ತರಿಸಿದನು. ಎಲೀಷನು, “ನೀನು ನಿನ್ನ ಸ್ವಂತ ಕಣ್ಣುಗಳಿಂದಲೇ ಇದನ್ನು ನೋಡುವೆ. ಆದರೆ ಆ ಆಹಾರದಲ್ಲಿ ಯಾವುದನ್ನೂ ನೀನು ತಿನ್ನುವುದಿಲ್ಲ” ಎಂದನು.
2 ಇದನ್ನು ಕೇಳಿ ಅರಸನ ಸಮೀಪವರ್ತಿಯಾದ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ ಇದು ಸಂಭವಿಸಲಾರದು” ಎನ್ನಲು ಎಲೀಷನು ಅವನಿಗೆ, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವಿ, ಆದರೆ ನೀನು ಅದನ್ನು ಅನುಭವಿಸುವುದಿಲ್ಲ” ಎಂದು ಹೇಳಿದನು.
2 ಇದನ್ನು ಕೇಳಿ ಅರಸನ ಹಸ್ತಕನಾದ ಸರದಾರನು ದೈವಪುರುಷನಿಗೆ, “ಸರ್ವೇಶ್ವರ ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು,” ಎಂದನು. ಅದಕ್ಕೆ ಎಲೀಷನು, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವೆ; ಆದರೆ ಅದನ್ನು ಅನುಭವಿಸಲಾರೆ,” ಎಂದು ಹೇಳಿದನು.
2 ಇದನ್ನು ಕೇಳಿ ಅರಸನ ಹಸ್ತಕನಾದ ಸರದಾರನು ದೇವರ ಮನುಷ್ಯನಿಗೆ - ಯೆಹೋವನು ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ - ಅದು ಸಂಭವಿಸುವದನ್ನು ನೀನು ಕಣ್ಣಾರೆ ಕಾಣುವಿ, ಆದರೆ ಅದನ್ನು ಅನುಭವಿಸುವದಿಲ್ಲ ಎಂದು ಹೇಳಿದನು.
2 ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಉತ್ತರವಾಗಿ, “ಇಗೋ, ಯೆಹೋವ ದೇವರು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೆ, ಈ ಕಾರ್ಯ ಸಂಭವಿಸುವುದೋ?” ಎಂದನು. ಅದಕ್ಕವನು, “ನೀನು ನಿನ್ನ ಕಣ್ಣುಗಳಿಂದ ಅದನ್ನು ನೋಡುವೆ, ಆದರೆ ಅದರಲ್ಲಿ ಯಾವುದನ್ನೂ ತಿನ್ನುವುದಿಲ್ಲ,” ಎಂದನು.
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ಈ ಪರೀಕ್ಷೆ ಮಾಡಿನೋಡಿ. ನಿಮ್ಮ ವಸ್ತುಗಳ ಹತ್ತನೇ ಒಂದು ಅಂಶವನ್ನು ನನಗೆ ತೆಗೆದುಕೊಂಡು ಬನ್ನಿರಿ. ಅವುಗಳನ್ನು ಆಲಯದ ಬಂಡಾರದೊಳಗೆ ಹಾಕಿರಿ. ನನ್ನ ಮನೆಗೆ ನೀವು ಆಹಾರ ವಸ್ತುಗಳನ್ನು ತನ್ನಿರಿ. ನನ್ನನ್ನು ಪರೀಕ್ಷಿಸಿರಿ. ನೀವು ಹೀಗೆ ಮಾಡುವುದಾದರೆ ಖಂಡಿತವಾಗಿಯೂ ನಾನು ನಿಮ್ಮನ್ನು ಆಶೀರ್ವದಿಸುವೆನು. ಆಕಾಶದಿಂದ ಮಳೆ ಸುರಿಯುವ ಹಾಗೆ ನಿಮಗೆ ಶುಭವು ಸುರಿಯುವವು. ನಿಮ್ಮ ಮನೆಯಲ್ಲಿ ಬೇಕಾಗಿರುವದಕ್ಕಿಂತ ಹೆಚ್ಚು ಯಾವಾಗಲೂ ಇರುವದು.
ಎರಡನೆ ತಿಂಗಳಿನ ಹದಿನೇಳನೆಯ ದಿನದಂದು ಭೂಮಿಯ ಕೆಳಗಿರುವ ಸಾಗರದ ಸೆಲೆಗಳು ಒಡೆದು ಭೂಮಿಯೊಳಗಿಂದ ನೀರು ಮೇಲೇರತೊಡಗಿತು; ಭೂಮಿಯ ಮೇಲೆ ಭಾರಿಮಳೆ ಸುರಿಯತೊಡಗಿತು. ಆಕಾಶದ ಕಿಟಕಿ ತೆರೆದಿದೆಯೋ ಎಂಬಂತೆ ನಲವತ್ತು ದಿವಸ ಹಗಲಿರುಳು ಮಳೆ ಸುರಿಯಿತು. ಆ ದಿನದಂದು ನೋಹ ಮತ್ತು ಅವನ ಹೆಂಡತಿ, ಅವನ ಗಂಡುಮಕ್ಕಳಾದ ಶೇಮ್, ಹಾಮ್, ಯೆಫೆತ್ ಮತ್ತು ಅವನ ಸೊಸೆಯಂದಿರು ನಾವೆಯೊಳಗೆ ಹೋದರು. ಆಗ ನೋಹನು ಆರುನೂರು ವರ್ಷವಾಗಿತ್ತು.
ಸಮಾರ್ಯವು ಎಫ್ರಾಯೀಮಿನ ರಾಜಧಾನಿಯಾಗಿರುವಷ್ಟು ಕಾಲ ಮತ್ತು ರೆಮಲ್ಯನ ಮಗನು ಸಮಾರ್ಯದಲ್ಲಿ ಅರಸನಾಗಿರುವಷ್ಟು ಕಾಲ ಅವರ ಯೋಜನೆಗಳು ಕೈಗೂಡುವುದಿಲ್ಲ. ನೀನು ಈ ವಾರ್ತೆಯನ್ನು ನಂಬದಿದ್ದರೆ ಜನರು ನಿನ್ನ ಮಾತನ್ನು ನಂಬದಿರಲಿ.”
ಮರುದಿನ ಮುಂಜಾನೆ ಯೆಹೋಷಾಫಾಟನ ಸೈನ್ಯವು ತೆಕೋವದ ಅರಣ್ಯಕ್ಕೆ ಹೊರಟಿತು. ಅವರು ಹೊರಡುವ ಮುಂಚೆ ಯೆಹೋಷಾಫಾಟನು ಎದ್ದುನಿಂತು, “ಜೆರುಸಲೇಮಿನವರೇ, ಯೆಹೂದ ಪ್ರಾಂತ್ಯದವರೇ, ನನ್ನ ಮಾತನ್ನು ಕೇಳಿರಿ. ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಡಿರಿ. ಆಗ ನೀವು ಸ್ಥಿರಗೊಳ್ಳುವಿರಿ. ಯೆಹೋವನ ಪ್ರವಾದಿಗಳ ಮೇಲೆ ಭರವಸವಿಡಿರಿ; ಆಗ ನೀವು ಜಯಗಳಿಸುವಿರಿ” ಎಂದು ಹೇಳಿದನು.
ಆದರೆ ಈ ವಿಷಯದಲ್ಲಿ ಯೆಹೋವನು ನನ್ನನ್ನು ಕ್ಷಮಿಸಲಿ. ನನ್ನ ಒಡೆಯನಾದ ಅರಾಮ್ಯರ ರಾಜನು ಸುಳ್ಳುದೇವರಾದ ರಿಮ್ಮೋನನನ್ನು ಪೂಜಿಸಲು ಅವನ ಆಲಯಕ್ಕೆ ಹೋಗಿ ನನ್ನ ಕೈಹಿಡಿದು ಆ ದೇವರಿಗೆ ನಮಸ್ಕಾರ ಮಾಡುವಾಗ ನಾನೂ ನಮಸ್ಕಾರ ಮಾಡಬೇಕಾಗುವುದು. ಈ ಒಂದು ವಿಷಯದಲ್ಲಿ ಯೆಹೋವನು ನನಗೆ ಕ್ಷಮೆಯನ್ನು ಅನುಗ್ರಹಿಸಬೇಕು” ಎಂದು ಹೇಳಿದನು.
ನೀನು ಪಿಸ್ಗಾ ಬೆಟ್ಟವನ್ನು ಹತ್ತಿ ಉತ್ತರ, ಪಶ್ಚಿಮ, ಪೂರ್ವ, ದಕ್ಷಿಣ ದಿಕ್ಕುಗಳ ಕಡೆಗೆ ನೋಡು ಮತ್ತು ಆನಂದಿಸು. ಆದರೆ ನೀನು ಜೋರ್ಡನ್ ನದಿ ದಾಟಿ ಆ ಪ್ರದೇಶಗಳನ್ನು ಪ್ರವೇಶಿಸುವುದಿಲ್ಲ.
ಆದ್ದರಿಂದ ಅವನನ್ನು ನಾನು ತಕ್ಷಣ ದಂಡಿಸುತ್ತೇನೆ. ನಾನು ಅವನ ಕುಟುಂಬವನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ನಾನು ನನ್ನ ಜನರಿಗಾಗಿ ಮಾಡುವ ಒಳ್ಳೆಯವುಗಳಲ್ಲಿ ಅವನು ಪಾಲು ಹೊಂದುವುದಿಲ್ಲ.’” ಇದು ಯೆಹೋವನ ನುಡಿ. “‘ಶೆಮಾಯನು, ಜನರನ್ನು ಯೆಹೋವನಾದ ನನ್ನ ವಿರುದ್ಧ ತಿರುಗುವಂತೆ ಮಾಡಿದ್ದರಿಂದ ನಾನು ಅವನನ್ನು ದಂಡಿಸುವೆನು.’”
ದೇವರು ಮನುಷ್ಯನಲ್ಲ; ಆತನು ಸುಳ್ಳಾಡುವುದಿಲ್ಲ. ದೇವರು ಮಾನವನಲ್ಲ; ಆತನ ಉದ್ದೇಶಗಳು ಬದಲಾಗುವುದಿಲ್ಲ. ಯೆಹೋವನು ತಾನು ಮಾಡುತ್ತೇನೆಂದು ಹೇಳಿದರೆ, ಅದನ್ನು ಮಾಡಿಯೇ ಮಾಡುತ್ತಾನೆ. ಯೆಹೋವನು ವಾಗ್ದಾನ ಮಾಡಿದರೆ, ಅದನ್ನು ನೆರವೇರಿಸುತ್ತಾನೆ.