Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 7:6 - ಪರಿಶುದ್ದ ಬೈಬಲ್‌

6 ಅರಾಮ್ಯರ ಸೇನೆಯು ರಥಗಳ, ಕುದುರೆಗಳ ಮತ್ತು ಮಹಾಸೇನೆಯ ರಣಘೋಷವನ್ನು ಕೇಳುವಂತೆ ಯೆಹೋವನು ಮಾಡಿದ್ದನು. ಅರಾಮ್ಯ ಸೈನಿಕರು, “ಇಸ್ರೇಲಿನ ರಾಜನು, ಹಿತ್ತೀಯರಿಗೆ ಮತ್ತು ಈಜಿಪ್ಟಿನವರಿಗೆ ಹಣಕೊಟ್ಟು ನಮ್ಮ ವಿರುದ್ಧ ಹೋರಾಟಕ್ಕೆ ಬರುವಂತೆ ಮಾಡಿದ್ದಾನೆ” ಎಂದು ಮಾತನಾಡಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು, “ಇಸ್ರಾಯೇಲರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧವಾಗಿ ಕರೆದುತಂದಿದ್ದಾರೆ” ಅಂದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರ ಸಿರಿಯಾದ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರು. ಆದ್ದರಿಂದ ಅವರು, “ಇಸ್ರಯೇಲರ ಅರಸನು ಹಿತ್ತಿಯ ಹಾಗು ಈಜಿಪ್ಟ್ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧ ಕರೆದುತಂದಿದ್ದಾನೆ,” ಎಂದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯ ಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು - ಇಸ್ರಾಯೇಲ್ಯರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರೋಧವಾಗಿ ಕರತಂದಿದ್ದಾನೆ ಅಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ ಯೆಹೋವ ದೇವರು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ, ಕುದುರೆಗಳ ಮತ್ತು ಮಹಾ ಸೈನ್ಯದ ಶಬ್ದವೂ ಕೇಳಿಸುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊಬ್ಬರು, “ಇಸ್ರಾಯೇಲಿನ ಅರಸನು ಹಿತ್ತಿಯರ ಅರಸರನ್ನೂ, ಈಜಿಪ್ಟಿನ ಅರಸರನ್ನೂ ನಮ್ಮ ಮೇಲೆ ದಾಳಿಮಾಡಲು ಅವರನ್ನು ಕೂಲಿಗೆ ಕರೆದಿದ್ದಾನೆ,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 7:6
21 ತಿಳಿವುಗಳ ಹೋಲಿಕೆ  

ಮರಗಳ ತುದಿಯಲ್ಲಿರುವ ನಿಮಗೆ ಫಿಲಿಷ್ಟಿಯರು ಯುದ್ಧಕ್ಕೆ ಹೊರಡುವುದು ಕೇಳಿಸುತ್ತದೆ. ಆಗ ನೀನು ತ್ವರಿತಗತಿಯಿಂದ ಕಾರ್ಯನಿರತನಾಗು. ಆಗ ಯೆಹೋವನಾದ ನಾನು ನಿನಗಾಗಿ ಅದೇ ಸಮಯದಲ್ಲಿ ಫಿಲಿಷ್ಟಿಯರನ್ನು ಸೋಲಿಸಲು ನಿಮ್ಮ ಮುಂದೆ ನಾನು ಹೋಗುತ್ತೇನೆ” ಎಂದು ಹೇಳಿದನು.


ಸಹಾಯಕ್ಕಾಗಿ ಈಜಿಪ್ಟಿಗೆ ಹೋಗುವ ಜನರನ್ನು ನೋಡಿರಿ. ಆ ಜನರು ಕುದುರೆಗಳಿಗಾಗಿ ಕೇಳುತ್ತಿದ್ದಾರೆ. ಕುದುರೆಗಳು ಅವರನ್ನು ರಕ್ಷಿಸುತ್ತವೆ ಎಂದು ಅವರು ಭಾವಿಸುತ್ತಾರೆ. ಈಜಿಪ್ಟಿನ ಬಹಳ ರಥಗಳು ಮತ್ತು ಬಹಳ ಕುದುರೆಗಳು ಅವರನ್ನು ಕಾಪಾಡುವವು ಎಂದು ಜನರು ತಿಳಿದುಕೊಳ್ಳುತ್ತಾರೆ. ಸೈನ್ಯವು ದೊಡ್ಡದಾಗಿರುವದರಿಂದ ಯಾವ ಅಪಾಯವೂ ಬಾರದು ಎಂದು ಅವರು ತಿಳಿದುಕೊಳ್ಳುತ್ತಾರೆ. ಜನರು ಇಸ್ರೇಲಿನ ಪರಿಶುದ್ಧನನ್ನು ನಂಬುವದಿಲ್ಲ. ಅವರು ಯೆಹೋವನ ಸಹಾಯವನ್ನು ಕೋರುವದಿಲ್ಲ.


ಈಜಿಪ್ಟಿನ ಒಂದು ರಥದ ಬೆಲೆಯು ಏಳು ಕಿಲೋಗ್ರಾಂ ಆದರೆ ಒಂದು ಕುದುರೆಯ ಬೆಲೆಯು ಎರಡು ಕಿಲೋಗ್ರಾಂ ಬೆಳ್ಳಿಯಾಗಿತ್ತು. ಸೊಲೊಮೋನನು ಹಿತ್ತಿಯ ಮತ್ತು ಅರಾಮ್ಯ ರಾಜರುಗಳಿಗೆ ಕುದುರೆಗಳನ್ನೂ ರಥಗಳನ್ನೂ ಮಾರಿದನು.


ಎದೆಗಳು ಉಕ್ಕಿನ ಕವಚಗಳಂತೆ ಇದ್ದವು; ರೆಕ್ಕೆಗಳ ಶಬ್ದವು ಯುದ್ಧದಲ್ಲಿ ಆತುರದಿಂದ ಓಡುವ ಅನೇಕ ಕುದುರೆಗಳ ಮತ್ತು ರಥಗಳ ಶಬ್ದದಂತಿತ್ತು.


ಕೆರೂಬಿದೂತರ ರೆಕ್ಕೆಗಳ ಬಡಿತದ ಶಬ್ದವು ಹೊರಗಿನ ಪ್ರಾಕಾರದ ತನಕ ಕೇಳುತ್ತಿತ್ತು. ಅದು ತುಂಬಾ ಗಟ್ಟಿಯಾದ ಶಬ್ದವಾಗಿತ್ತು. ಸರ್ವಶಕ್ತನಾದ ದೇವರು ಮಾತನಾಡುವಾಗ ಆಗುವ ಗುಡುಗಿನ ಶಬ್ದದಂತಿತ್ತು.


ಹೀಗಿದ್ದರೂ ನನ್ನ ಒಡೆಯನ ಸೈನ್ಯಾಧಿಕಾರಿಗಳಲ್ಲಿ ಕನಿಷ್ಠನಾದವನನ್ನು ಸೋಲಿಸಲು ನಿಮ್ಮಿಂದಾಗದು. ಆದ್ದರಿಂದ ನೀವು ಈಜಿಪ್ಟಿನವರ ಅಶ್ವದಳದ ಮೇಲೆ ಯಾಕೆ ಭರವಸವಿಡುತ್ತೀರಿ?


ಬಡವರ ಬುದ್ಧಿಮಾತನ್ನು ಆ ದುಷ್ಟರು ಕೇಳುವುದಿಲ್ಲ. ಯಾಕೆಂದರೆ ಬಡವರು ಆಶ್ರಯಿಸಿಕೊಂಡಿರುವುದು ಯೆಹೋವನನ್ನೇ. ಆದರೆ ದೇವರು ನೀತಿವಂತರೊಂದಿಗಿದ್ದಾನೆ. ಆದ್ದರಿಂದ ದುಷ್ಟರು ಭಯಭ್ರಾಂತರಾಗುವರು.


ಭೀಕರವಾದ ಶಬ್ದಗಳು ಅವನ ಕಿವಿಗಳಲ್ಲೇ ಇರುತ್ತವೆ. ತಾನು ಸುರಕ್ಷಿತನಾಗಿರುವುದಾಗಿ ಅವನು ಯೋಚಿಸುವಾಗಲೇ ವೈರಿಯು ಅವನ ಮೇಲೆ ಆಕ್ರಮಣ ಮಾಡುವನು.


ನಾನು ಅವನಲ್ಲಿ ಒಂದು ಆತ್ಮವನ್ನಿರಿಸುತ್ತೇನೆ. ಅವನು ಒಂದು ಸುದ್ದಿಯನ್ನು ಕೇಳುತ್ತಾನೆ. ನಂತರ ಅವನು ತನ್ನ ಸ್ವಂತ ದೇಶಕ್ಕೆ ಹಿಂದಿರುಗಿ ಓಡಿಹೋಗುತ್ತಾನೆ. ನಾನು ಅವನನ್ನು ಅವನ ಸ್ವಂತ ದೇಶದಲ್ಲಿ ಖಡ್ಗದಿಂದ ಕೊಲ್ಲಲ್ಪಡುವಂತೆ ಮಾಡುತ್ತೇನೆ’” ಎಂದು ಹೇಳಿದನು.


ಹೊರವಲಯದ ಪಾಳೆಯದಲ್ಲಿದ್ದ ಮತ್ತು ಕೋಟೆಯಲ್ಲಿದ್ದ ಎಲ್ಲಾ ಫಿಲಿಷ್ಟಿಯ ಸೈನಿಕರು ಭಯದಿಂದ ನಡುಗಿದರು. ಹೊಲದಲ್ಲಿದ್ದ ಸೈನಿಕರು ಸಹ ಹೆದರಿಕೊಂಡಿದ್ದರು. ಅತ್ಯಂತ ಧೈರ್ಯವಂತರಾದ ಸೈನಿಕರು ಸಹ ಹೆದರಿಕೊಂಡಿದ್ದರು. ಭೂಮಿಯು ನಡುಗಿದ್ದರಿಂದ ಫಿಲಿಷ್ಟಿಯ ಸೈನಿಕರು ನಿಜವಾಗಿಯೂ ಹೆದರಿಕೊಂಡರು.


ದಾವೀದನು ಹಿತ್ತಿಯನಾದ ಅಹೀಮೆಲೆಕನ ಮತ್ತು ಚೆರೂಯಳ ಮಗನೂ ಯೋವಾಬನ ಸಹೋದರನೂ ಆದ ಅಬೀಷೈರೊಡನೆ ಮಾತನಾಡಿದನು. ಅವನು ಅವರಿಗೆ, “ನನ್ನೊಡನೆ ಸೌಲನ ಪಾಳೆಯಕ್ಕೆ ಯಾರು ಬರುತ್ತೀರಿ?” ಎಂದು ಕೇಳಿದನು. “ನಾನು ಬರುತ್ತೇನೆ” ಎಂದು ಅಬೀಷೈ ಉತ್ತರಿಸಿದನು.


ಅಮ್ಮೋನಿಯರು ತಾವು ದಾವೀದನಿಗೆ ಶತ್ರುಗಳಾಗಿರುವುದಾಗಿ ತಿಳಿದುಕೊಂಡರು. ಆದ್ದರಿಂದ ಅಮ್ಮೋನಿಯರು ಹಣಕೊಟ್ಟು ಬೇತ್‌ರೆಹೋಬ್ ಮತ್ತು ಚೋಬಾಗಳಿಂದ ಅರಾಮ್ಯರ ಇಪ್ಪತ್ತುಸಾವಿರ ಮಂದಿ ಭೂದಳವನ್ನು ಬರಮಾಡಿಕೊಂಡರು. ಅಮ್ಮೋನಿಯರು ಮಾಕಾದ ರಾಜನನ್ನು ಮತ್ತು ಅವನ ಒಂದು ಸಾವಿರ ಸೈನಿಕರನ್ನು ಹಾಗೂ ಟೋಬ್‌ನಿಂದ ಹನ್ನೆರಡು ಸಾವಿರ ಮಂದಿ ಸೈನಿಕರನ್ನು ಬರಮಾಡಿಕೊಂಡರು.


ಅಂದು ಸಂಜೆ ಆ ನಾಲ್ವರು ಕುಷ್ಠರೋಗಿಗಳು ಅರಾಮ್ಯರ ಪಾಳೆಯಕ್ಕೆ ಹೋದರು. ಅವರು ಪಾಳೆಯದ ಹೊರ ಅಂಚಿಗೆ ಬಂದರು. ಅಲ್ಲಿ ಜನರೇ ಇರಲಿಲ್ಲ!


ಸಂಬಳಕ್ಕಾಗಿ ದುಡಿಯುವ ಈಜಿಪ್ಟಿನ ಸೈನಿಕರು ಕೊಬ್ಬಿದ ಕರುಗಳಂತಿದ್ದಾರೆ. ಅವರೆಲ್ಲರು ಹಿಂತಿರುಗಿ ಓಡಿಹೋಗುವರು. ಅವರು ಧೈರ್ಯದಿಂದ ಧಾಳಿಯನ್ನು ಎದುರಿಸಲಾರರು. ಅವರ ವಿನಾಶದ ಕಾಲ ಬರುತ್ತಿದೆ. ಬೇಗ ಅವರನ್ನು ದಂಡಿಸಲಾಗುವುದು.


ಜೀವಿಗಳು ಚಲಿಸಿದಾಗಲೆಲ್ಲಾ ಅವುಗಳ ರೆಕ್ಕೆಗಳ ಗಟ್ಟಿಯಾದ ಶಬ್ದ ನನಗೆ ಕೇಳಿಸಿತು. ಅದು ನೀರು ಭೋರ್ಗರೆಯುವ ಶಬ್ದದಂತಿತ್ತು. ಸರ್ವಶಕ್ತನಾದ ದೇವರ ಶಬ್ದದಂತೆ ಅದು ಗಟ್ಟಿಯಾಗಿತ್ತು. ಅದು ದೊಡ್ಡ ಸೈನ್ಯದ ಅಥವಾ ಜನಸಮೂಹದ ಶಬ್ದದಂತಿತ್ತು. ಜೀವಿಗಳು ಚಲಿಸುವುದನ್ನು ನಿಲ್ಲಿಸಿದಾಗ ಅವುಗಳು ತಮ್ಮ ರೆಕ್ಕೆಗಳನ್ನು ತಮ್ಮ ಪಾರ್ಶ್ವಗಳಲ್ಲಿ ಕೆಳಗಿಳಿಸುತ್ತಿದ್ದವು.


ಗಿದ್ಯೋನನ ಜನರು ನಿಂತಲ್ಲಿಯೇ ನಿಂತುಕೊಂಡರು. ಮಿದ್ಯಾನ್ಯರು ಕೂಗಿಕೊಂಡು ಓಡಿಹೋಗಲು ಆರಂಭಿಸಿದರು.


ಆದರೆ ಇಸ್ರೇಲಿನ ಪ್ರತಿಯೊಬ್ಬನೂ ತನ್ನ ಮೇಲೆ ಬಿದ್ದವನನ್ನು ಕೊಂದುಹಾಕುತ್ತಿದ್ದನು. ಅರಾಮ್ಯದ ಜನರು ಓಡಿಹೋಗಲು ಆರಂಭಿಸಿದರು. ಇಸ್ರೇಲಿನ ಸೈನ್ಯವು ಅವರನ್ನು ಅಟ್ಟಿಸಿಕೊಂಡು ಹೋಯಿತು. ರಾಜನಾದ ಬೆನ್ಹದದನು ಅಶ್ವಸೇನೆಯ ಕುದುರೆಯೊಂದರ ಮೇಲೆ ಕುಳಿತು ತಪ್ಪಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು