Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 7:8 - ಪರಿಶುದ್ದ ಬೈಬಲ್‌

8 ಈ ಕುಷ್ಠರೋಗಿಗಳು ಪಾಳೆಯವು ಆರಂಭವಾಗಿದ್ದಲ್ಲಿಗೆ ಬಂದು, ಒಂದು ಗುಡಾರದೊಳಕ್ಕೆ ಹೋದರು. ಅವರು ಅಲ್ಲಿ ತಿಂದರು ಮತ್ತು ಕುಡಿದರು. ನಂತರ ಈ ನಾಲ್ವರು ಬೆಳ್ಳಿಬಂಗಾರಗಳನ್ನು ಮತ್ತು ಬಟ್ಟೆಗಳನ್ನು ಪಾಳೆಯದಿಂದ ಹೊರಗೆ ತೆಗೆದುಕೊಂಡು ಹೋದರು. ಅವರು ಬೆಳ್ಳಿಬಂಗಾರಗಳನ್ನು ಮತ್ತು ಬಟ್ಟೆಗಳನ್ನು ಅಡಗಿಸಿಟ್ಟರು. ನಂತರ ಅವರು ಹಿಂದಿರುಗಿ ಬಂದು, ಮತ್ತೊಂದು ಗುಡಾರವನ್ನು ಪ್ರವೇಶಿಸಿದರು. ಆ ಗುಡಾರದಿಂದಲೂ ಅವರು ವಸ್ತುಗಳನ್ನು ಕೊಂಡೊಯ್ದರು. ಅವರು ಹೊರಗೆ ಹೋಗಿ ಅವುಗಳನ್ನು ಅಡಗಿಸಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಕುಷ್ಠರೋಗಿಗಳು ಪಾಳೆಯದ ಅಂಚಿಗೆ ಬಂದಾಗ ಮೊದಲನೆಯ ಡೇರೆಯನ್ನು ಹೊಕ್ಕು ಉಂಡು, ಕುಡಿದು ಅದರಲ್ಲಿದ್ದ ಬೆಳ್ಳಿ ಬಂಗಾರವನ್ನೂ, ಬಟ್ಟೆಗಳನ್ನೂ ತೆಗೆದುಕೊಂಡು ಅಡಗಿಸಿಟ್ಟರು. ಇನ್ನೊಂದು ಡೇರೆಯನ್ನು ಹೊಕ್ಕು ಅಲ್ಲಿಂದಲೂ ತೆಗೆದುಕೊಂಡು ಅಡಗಿಸಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ಕುಷ್ಠರೋಗಿಗಳು ಪಾಳೆಯದ ಅಂಚಿಗೆ ಬಂದಾಗ ಮೊದಲನೆಯ ಡೇರೆಯನ್ನು ಹೊಕ್ಕು ಉಂಡು, ಕುಡಿದು ಅದರಲ್ಲಿದ್ದ ಬೆಳ್ಳಿ ಬಂಗಾರವನ್ನೂ ಬಟ್ಟೆಗಳನ್ನೂ ತೆಗೆದುಕೊಂಡು ಬಚ್ಚಿಟ್ಟರು. ಇನ್ನೊಂದು ಡೇರೆಯನ್ನು ಹೊಕ್ಕು ಅಲ್ಲಿಂದಲೂ ತೆಗೆದುಕೊಂಡು ಅಡಗಿಸಿ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ಕುಷ್ಠರೋಗಿಗಳು ಪಾಳೆಯದ ಅಂಚಿಗೆ ಬಂದಾಗ ಮೊದಲನೆಯ ಡೇರೆಯನ್ನು ಹೊಕ್ಕು ಉಂಡು ಕುಡಿದು ಅದರಲ್ಲಿದ್ದ ಬೆಳ್ಳಿಬಂಗಾರವನ್ನೂ ಬಟ್ಟೆಗಳನ್ನೂ ತೆಗೆದುಕೊಂಡು ಅಡಗಿಸಿಟ್ಟರು. ಇನ್ನೊಂದು ಡೇರೆಯನ್ನು ಹೊಕ್ಕು ಅಲ್ಲಿಂದಲೂ ತೆಗೆದುಕೊಂಡು ಅಡಗಿಸಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆ ಕುಷ್ಠರೋಗಿಗಳು ದಂಡಿನ ಅಂಚಿನವರೆಗೂ ಬಂದು ಒಂದು ಡೇರೆಯಲ್ಲಿ ಪ್ರವೇಶಿಸಿ, ಅಲ್ಲಿ ತಿಂದು ಕುಡಿದು ಅಲ್ಲಿದ್ದ ಬೆಳ್ಳಿಬಂಗಾರವನ್ನೂ, ವಸ್ತ್ರಗಳನ್ನೂ ತೆಗೆದುಕೊಂಡುಹೋಗಿ ಬಚ್ಚಿಟ್ಟರು. ತಿರುಗಿಬಂದು ಮತ್ತೊಂದು ಡೇರೆಯಲ್ಲಿ ಪ್ರವೇಶಿಸಿ, ಅಲ್ಲಿಂದಲೂ ಹಾಗೆಯೇ ತೆಗೆದುಕೊಂಡುಹೋಗಿ ಬಚ್ಚಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 7:8
7 ತಿಳಿವುಗಳ ಹೋಲಿಕೆ  

“ಪರಲೋಕರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಂದು ದಿನ ಒಬ್ಬನು ಆ ನಿಧಿಯನ್ನು ಕಂಡು ಬಹಳ ಸಂತೋಷದಿಂದ ಅದನ್ನು ಹೊಲದಲ್ಲಿ ಅಡಗಿಸಿಟ್ಟನು. ಬಳಿಕ ಅವನು ತನ್ನ ಆಸ್ತಿಯನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.


ನಾವು ಜೆರಿಕೊ ನಗರವನ್ನು ಮತ್ತು ಅದರಲ್ಲಿದ್ದ ಎಲ್ಲ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಕೊಳ್ಳೆ ಹೊಡೆಯುತ್ತಿದ್ದಾಗ, ಬಾಬಿಲೋನಿನ ಒಂದು ಸುಂದರವಾದ ನಿಲುವಂಗಿಯನ್ನೂ ಸುಮಾರು ಐದು ಪೌಂಡಿನಷ್ಟು ಬೆಳ್ಳಿಯನ್ನೂ ಒಂದು ಪೌಂಡಿಗಿಂತಲೂ ಹೆಚ್ಚು ಬಂಗಾರವನ್ನೂ ಕಂಡೆನು. ಈ ವಸ್ತುಗಳನ್ನು ನನಗಾಗಿ ಇಟ್ಟುಕೊಳ್ಳಬೇಕೆಂದು ತುಂಬ ಆಶೆಯಾಯಿತು. ಅದಕ್ಕಾಗಿ ನಾನು ಅವುಗಳನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದಲ್ಲಿ ಹುಗಿದಿಟ್ಟಿದ್ದೇನೆ. ಬೆಳ್ಳಿಯು ನಿಲುವಂಗಿಯ ಕೆಳಗಡೆ ಇದೆ” ಎಂದು ಒಪ್ಪಿಕೊಂಡನು.


ಆದರೆ ಒಂದು ತಲಾಂತು ಹೊಂದಿದವನು ಹೊರಟುಹೋಗಿ ನೆಲದಲ್ಲಿ ಒಂದು ಗುಂಡಿ ತೋಡಿ ಆ ಹಣವನ್ನು ಅಡಗಿಸಿಟ್ಟನು.


ಆದರೆ ಉಳಿದ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡ, ನಮ್ಮಲ್ಲಿ ಗೋಧಿ, ಜವೆಗೋಧಿ, ಎಣ್ಣೆ ಮತ್ತು ಜೇನುತುಪ್ಪ ಇವೆ. ನಾವು ಆ ವಸ್ತುಗಳನ್ನು ಒಂದು ಹೊಲದಲ್ಲಿ ಬಚ್ಚಿಟ್ಟಿದ್ದೇವೆ” ಎಂದು ಹೇಳಿದರು. ಆದ್ದರಿಂದ ಇಷ್ಮಾಯೇಲನು ಆ ಹತ್ತು ಮಂದಿಯನ್ನು ಬಿಟ್ಟುಬಿಟ್ಟನು. ಅವನು ಬೇರೆಯವರೊಂದಿಗೆ ಅವರನ್ನು ಕೊಲ್ಲಲಿಲ್ಲ.


ಗೇಹಜಿಯು ಬೆಟ್ಟಕ್ಕೆ ಬಂದಾಗ, ಅವುಗಳನ್ನು ಸೇವಕರಿಂದ ತೆಗೆದುಕೊಂಡು ಅವರನ್ನು ಕಳುಹಿಸಿಬಿಟ್ಟನು. ನಂತರ ಗೇಹಜಿಯು ಅವುಗಳನ್ನು ಮನೆಯಲ್ಲಿ ಅಡಗಿಸಿಟ್ಟನು.


ಆಗ ಆ ಕುಷ್ಠರೋಗಿಗಳು, “ನಾವು ತಪ್ಪು ಮಾಡುತ್ತಿದ್ದೇವೆ! ಈ ದಿನ ನಮಗೆ ಶುಭವಾರ್ತೆ ಸಿಕ್ಕಿದೆ. ಆದರೆ ನಾವು ನಿಶಬ್ಧದಿಂದ ಇದ್ದೇವೆ. ಸೂರ್ಯನು ಮೇಲಕ್ಕೇರಿ ಬರುವವರೆಗೆ ನಾವು ಸುಮ್ಮನಿದ್ದರೆ ನಮ್ಮನ್ನು ದಂಡಿಸಲಾಗುವುದು. ಈಗ ನಾವು ರಾಜನ ಮನೆಗೆ ಹೋಗಿ ಅಲ್ಲಿ ವಾಸಿಸುವ ಜನರಿಗೆ ಇದನ್ನು ತಿಳಿಸೋಣ” ಎಂದು ಮಾತನಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು