2 ಅರಸುಗಳು 8:10 - ಪರಿಶುದ್ದ ಬೈಬಲ್10 ಆಗ ಎಲೀಷನು ಹಜಾಯೇಲನಿಗೆ, “‘ವಾಸಿಯಾಗುವುದು’ ಎಂದು ಬೆನ್ಹದದನಿಗೆ ಹೇಳು. ಆದರೆ, ‘ಅವನು ಸಾಯುವುದು ಖಂಡಿತ’ ಎಂದು ಯೆಹೋವನು ನನಗೆ ತಿಳಿಸಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ದೇವರ ಮನುಷ್ಯನಾದ ಎಲೀಷನು ಅವನಿಗೆ, “ಹೇಗೂ ನಿನಗೆ ವಾಸಿಯಾಗುವುದು” ಎಂಬುದಾಗಿ ಬೆನ್ಹದದನಿಗೆ ಹೇಳು; ಆದರೂ, ಅವನು ಸತ್ತೇ ಹೋಗುವನೆಂದು ಯೆಹೋವನು ನನಗೆ ತಿಳಿಸಿದ್ದಾನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ದೈವಪುರುಷನಾದ ಎಲೀಷನು, “ಖಂಡಿತವಾಗಿ ಗುಣವಾಗುವುದು ಎಂಬುದಾಗಿ ಬೆನ್ಹದದನಿಗೆ ಹೇಳು; ಆದರೂ ಅವನು ಸತ್ತುಹೋಗುವುದು ನಿಶ್ಚಯವೆಂದು ಸರ್ವೇಶ್ವರ ನನಗೆ ತಿಳಿಸಿದ್ದಾರೆ,” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಗ ದೇವರ ಮನುಷ್ಯನಾದ ಎಲೀಷನು ಅವನಿಗೆ - ಹೇಗೂ ನಿನಗೆ ವಾಸಿಯಾಗುವದು ಎಂಬದಾಗಿ ಬೆನ್ಹದದನಿಗೆ ಹೇಳು; ಆದರೂ ಅವನು ಸತ್ತೇ ಹೋಗುವನೆಂದು ಯೆಹೋವನು ನನಗೆ ತಿಳಿಸಿದ್ದಾನೆ ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅದಕ್ಕೆ ಎಲೀಷನು, “ನೀನು ಹೋಗಿ ಅವನಿಗೆ, ನಿಜವಾಗಿಯೂ ಸ್ವಸ್ಥನಾಗುವೆ, ಎಂದು ಹೇಳು. ಆದರೆ ಅವನು ಸಾಯುವನೆಂದು ಯೆಹೋವ ದೇವರು ನನಗೆ ತೋರಿಸಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |
ರಾಜನಾದ ಅಹಜ್ಯನಿಗೆ ಈ ಸಂಗತಿಗಳನ್ನು ತಿಳಿಸಿ: ಬಾಳ್ಜೆಬೂಬನಿಂದ ಪ್ರಶ್ನೆಗಳನ್ನು ಕೇಳುವುದಕ್ಕೆ ನೀನು ಸಂದೇಶಕರನ್ನು ಕಳುಹಿಸಿದೆ. ನೀನು ಈ ಕಾರ್ಯವನ್ನು ಮಾಡಿದುದರಿಂದ, ಯೆಹೋವನು ಹೀಗೆನ್ನುವನು: ನೀನು ನಿನ್ನ ಹಾಸಿಗೆಯಿಂದ ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ’ ಎಂದು ತಿಳಿಸು” ಎಂಬುದಾಗಿ ಹೇಳಿದನು. ಎಲೀಯನು ಅಹಜ್ಯನ ಸೇವಕರಿಗೆ ಈ ಮಾತುಗಳನ್ನು ಹೇಳಿ ಅಲ್ಲಿಂದ ಹೊರಟುಹೋದನು.
ನಂತರ ರಾಜನಾದ ಅಹಾಬನ ಎದುರಿನಲ್ಲಿ ಮೀಕಾಯೆಹು ನಿಂತುಕೊಂಡನು. ರಾಜನು ಅವನನ್ನು, “ಮೀಕಾಯೆಹುವೇ, ರಾಜನಾದ ಯೆಹೋಷಾಫಾಟನು ಮತ್ತು ನಾನು ನಮ್ಮ ಸೈನ್ಯಗಳನ್ನು ಒಟ್ಟುಗೂಡಿಸಬಹುದೇ? ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ರಾಮೋತಿಗೆ ನಾವೀಗ ಹೋಗಬೇಕೇ?” ಎಂದು ಕೇಳಿದನು. ಮೀಕಾಯೆಹು, “ಆಗಲಿ, ಈಗ ನೀವು ಹೋಗಿ, ಅವರ ವಿರುದ್ಧ ಯುದ್ಧಮಾಡಿ. ಯೆಹೋವನು ನಿಮಗೆ ಜಯವನ್ನು ಕೊಡುತ್ತಾನೆ” ಎಂದನು.