2 ಅರಸುಗಳು 8:15 - ಪರಿಶುದ್ದ ಬೈಬಲ್15 ಆದರೆ ಮಾರನೆಯ ದಿನ ಹಜಾಯೇಲನು ಒಂದು ಹೊದಿಕೆಯನ್ನು ತೆಗೆದುಕೊಂಡು ನೀರಿನಲ್ಲಿ ನೆನೆಸಿದನು. ನಂತರ ಅವನು ಆ ಹೊದಿಕೆಯನ್ನು ಬೆನ್ಹದದನ ಮುಖದ ಮೇಲೆ ಹಾಕಿ, ಅವನನ್ನು ಉಸಿರುಕಟ್ಟಿಸಿ ಸಾಯಿಸಿದನು. ಹಜಾಯೇಲನು ನೂತನ ರಾಜನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಮರುದಿನ ಬೆಳಿಗ್ಗೆ ಇವನು ಕಂಬಳಿಯನ್ನು ತೆಗೆದುಕೊಂಡು ನೀರಿನಲ್ಲಿ ತೋಯಿಸಿ, ಅರಸನ ಮುಖದ ಮೇಲೆ ಹಾಕಿದ್ದರಿಂದ ಅವನು ಸತ್ತನು. ಹಜಾಯೇಲನು ಅವನಿಗೆ ಬದಲಾಗಿ ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಮರುದಿನ ಬೆಳಿಗ್ಗೆ ಇವನು ಒಂದು ಹೊದಿಕೆಯನ್ನು ನೀರಿನಲ್ಲಿ ತೋಯಿಸಿ ಅರಸನ ಮುಖದ ಮೇಲೆ ಹಾಕಿದನು; ಅವನು ಸತ್ತನು. ಹಜಾಯೇಲನು ಅವನ ಸ್ಥಾನದಲ್ಲಿ ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಮರುದಿನ ಬೆಳಿಗ್ಗೆ ಇವನು ಕವುದಿಯನ್ನು ತೆಗೆದುಕೊಂಡು ನೀರಿನಲ್ಲಿ ತೋಯಿಸಿ ಅರಸನ ಮುಖದ ಮೇಲೆ ಹಾಕಿದದರಿಂದ ಅವನು ಸತ್ತನು. ಹಜಾಯೇಲನು ಅವನಿಗೆ ಬದಲಾಗಿ ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ ಮಾರನೆಯ ದಿವಸದಲ್ಲಿ, ಅವನು ದಪ್ಪ ಬಟ್ಟೆಯನ್ನು ತೆಗೆದುಕೊಂಡು ನೀರಿನಲ್ಲಿ ಅದ್ದಿ, ಅರಸನ ಮುಖದ ಮೇಲೆ ಹಾಕಿದ್ದರಿಂದ ಅವನು ಮರಣಹೊಂದಿದನು. ಹಜಾಯೇಲನು ಅವನಿಗೆ ಬದಲಾಗಿ ಅರಸನಾದನು. ಅಧ್ಯಾಯವನ್ನು ನೋಡಿ |
ನೀವು ಯುದ್ಧಮಾಡಿ ಇತರರಿಂದ ಸುಲಿದುಕೊಳ್ಳುತ್ತೀರಿ. ಆದರೆ ಅವರು ನಿಮ್ಮಿಂದ ಏನೂ ಕದ್ದುಕೊಳ್ಳಲಿಲ್ಲ. ನೀವು ಜನರಿಗೆ ವಿರುದ್ಧವಾಗಿ ತಿರುಗುತ್ತೀರಿ. ಆದರೆ ಅವರು ನಿಮಗೆ ವಿರುದ್ಧವಾಗಲಿಲ್ಲ. ಆದ್ದರಿಂದ ನೀವು ಕದ್ದುಕೊಳ್ಳುವದನ್ನು ಬಿಟ್ಟಾಗ ಇತರರು ನಿಮ್ಮದನ್ನು ಕದ್ದುಕೊಳ್ಳುತ್ತಾರೆ. ನೀವು ಇತರರಿಗೆ ಹಾನಿ ಮಾಡುವದನ್ನು ನಿಲ್ಲಿಸಿದಾಗ ಇತರರು ನಿಮಗೆ ಹಾನಿ ಮಾಡುವರು. ಆಗ ನೀವು ಹೀಗೆ ಹೇಳುವಿರಿ: