2 ಅರಸುಗಳು 8:16 - ಪರಿಶುದ್ದ ಬೈಬಲ್16 ಯೆಹೋಷಾಫಾಟನ ಮಗನಾದ ಯೆಹೋರಾಮನು ಯೆಹೂದದ ರಾಜನಾಗಿದ್ದನು. ಅಹಾಬನ ಮಗನಾದ ಯೋರಾಮನು ಇಸ್ರೇಲಿನ ರಾಜನಾಗಿದ್ದ ಐದನೆಯ ವರ್ಷದಲ್ಲಿ ಯೆಹೋರಾಮನು ಆಳಲಾರಂಭಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅಹಾಬನ ಮಗನೂ ಇಸ್ರಾಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಯೆಹೂದ ರಾಜನಾದ ಯೆಹೋಷಾಫಾಟನ ಮಗ ಯೆಹೋರಾಮನು ಆಳತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಹಾಬನ ಮಗನೂ ಇಸ್ರಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಜುದೇಯದ ರಾಜನಾದ ಯೆಹೋಷಾಫಾಟನ ಮಗ ಯೆಹೋರಾಮನು ಆಳತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅಹಾಬನ ಮಗನೂ ಇಸ್ರಾಯೇಲ್ಯರ ಅರಸನೂ ಆದ ಯೋರಾಮನ ಆಳಿಕೆಯ ಐದನೆಯ ವರುಷದಲ್ಲಿ ಯೆಹೂದರಾಜನಾದ ಯೆಹೋಷಾಫಾಟನ ಮಗ ಯೆಹೋರಾಮನು ಆಳತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅಹಾಬನ ಮಗನೂ ಇಸ್ರಾಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ, ಯೆಹೂದದ ರಾಜನಾದ ಯೆಹೋಷಾಫಾಟನ ಮಗ ಯೆಹೋರಾಮನು ಆಳತೊಡಗಿದನು. ಅಧ್ಯಾಯವನ್ನು ನೋಡಿ |
ಯೆಹೋಷೆಬಳು ರಾಜನಾದ ಯೋರಾಮನ ಮಗಳಾಗಿದ್ದಳು ಮತ್ತು ಅಹಜ್ಯನ ಸೋದರಿಯಾಗಿದ್ದಳು. ಯೆಹೋವಾಷನು ರಾಜನ ಮಕ್ಕಳಲ್ಲಿ ಒಬ್ಬನಾಗಿದ್ದನು. ಅತಲ್ಯಳು ಇತರ ಮಕ್ಕಳನ್ನು ಕೊಲ್ಲುವಾಗ ಯೆಹೋಷೆಬಳು ಯೆಹೋವಾಷನನ್ನು ತೆಗೆದುಕೊಂಡು ಹೋದಳು. ಅವಳು ಯೆಹೋವಾಷನನ್ನು ಮತ್ತು ಅವನ ದಾದಿಯನ್ನು ತನ್ನ ಮಲಗುವ ಕೊಠಡಿಯಲ್ಲಿ ಅಡಗಿಸಿದಳು. ಯೆಹೋವಾಷನನ್ನು ಅವನ ದಾದಿಯು ಮತ್ತು ಯೆಹೋಷೆಬಳು ಅತಲ್ಯಳಿಂದ ತಪ್ಪಿಸಿ ಅಡಗಿಸಿಟ್ಟರು. ಈ ರೀತಿ ಯೆಹೋವಾಷನನ್ನು ಕೊಲ್ಲಲಾಗಲಿಲ್ಲ.