2 ಅರಸುಗಳು 8:19 - ಪರಿಶುದ್ದ ಬೈಬಲ್19 ಆದರೆ ಯೆಹೋವನು ತನ್ನ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದುದರಿಂದ ಯೆಹೂದವನ್ನು ನಾಶಗೊಳಿಸಲಿಲ್ಲ. ಯಾವಾಗಲೂ ದಾವೀದನ ಕುಟುಂಬದ ಒಬ್ಬನು ರಾಜನಾಗಿರುತ್ತಾನೆಂದು ಯೆಹೋವನು ವಾಗ್ದಾನ ಮಾಡಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆದರೂ, ಯೆಹೋವನು ಯೆಹೂದ ರಾಜ್ಯವನ್ನು ನಾಶಮಾಡಲಿಲ್ಲ. ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ ಎಂಬುದಾಗಿ ತನ್ನ ಸೇವಕನಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ಸ್ಮರಿಸಿ ಅದನ್ನು ಉಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆದರೂ ಸರ್ವೇಶ್ವರ ಜುದೇಯದ ರಾಜ್ಯವನ್ನು ನಾಶಮಾಡಲಿಲ್ಲ. “ನಿನ್ನನ್ನು ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂಬುದಾಗಿ ತಮ್ಮ ದಾಸ ದಾವೀದನಿಗೆ ಮಾಡಿದ ಪ್ರಮಾಣವನ್ನು ಸ್ಮರಿಸಿ ಅದನ್ನು ಉಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆದರೂ ಯೆಹೋವನು ಯೆಹೂದರಾಜ್ಯವನ್ನು ನಾಶಮಾಡಲಿಲ್ಲ. ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವದಿಲ್ಲ ಎಂಬದಾಗಿ ತನ್ನ ಸೇವಕನಾದ ದಾವೀದನಿಗೆ ಮಾಡಿದ ಪ್ರಮಾಣವನ್ನು ನೆನಸಿ ಅದನ್ನು ಉಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದರೂ ಯೆಹೋವ ದೇವರು ಯೆಹೂದದ ರಾಜ್ಯವನ್ನು ನಾಶಮಾಡಲಿಲ್ಲ. “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂಬುದಾಗಿ ತಮ್ಮ ದಾಸನಾದ ದಾವೀದನಿಗೆ ಪ್ರಮಾಣ ಮಾಡಿದ ಕಾರಣ ಉಳಿಸಿದರು. ಅಧ್ಯಾಯವನ್ನು ನೋಡಿ |
ಯೆಹೋಷೆಬಳು ರಾಜನಾದ ಯೋರಾಮನ ಮಗಳಾಗಿದ್ದಳು ಮತ್ತು ಅಹಜ್ಯನ ಸೋದರಿಯಾಗಿದ್ದಳು. ಯೆಹೋವಾಷನು ರಾಜನ ಮಕ್ಕಳಲ್ಲಿ ಒಬ್ಬನಾಗಿದ್ದನು. ಅತಲ್ಯಳು ಇತರ ಮಕ್ಕಳನ್ನು ಕೊಲ್ಲುವಾಗ ಯೆಹೋಷೆಬಳು ಯೆಹೋವಾಷನನ್ನು ತೆಗೆದುಕೊಂಡು ಹೋದಳು. ಅವಳು ಯೆಹೋವಾಷನನ್ನು ಮತ್ತು ಅವನ ದಾದಿಯನ್ನು ತನ್ನ ಮಲಗುವ ಕೊಠಡಿಯಲ್ಲಿ ಅಡಗಿಸಿದಳು. ಯೆಹೋವಾಷನನ್ನು ಅವನ ದಾದಿಯು ಮತ್ತು ಯೆಹೋಷೆಬಳು ಅತಲ್ಯಳಿಂದ ತಪ್ಪಿಸಿ ಅಡಗಿಸಿಟ್ಟರು. ಈ ರೀತಿ ಯೆಹೋವಾಷನನ್ನು ಕೊಲ್ಲಲಾಗಲಿಲ್ಲ.