Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:2 - ಪರಿಶುದ್ದ ಬೈಬಲ್‌

2 ದೇವಮನುಷ್ಯನು ಹೇಳಿದಂತೆಯೇ ಆ ಸ್ತ್ರೀಯು ಫಿಲಿಷ್ಟಿಯರ ದೇಶದಲ್ಲಿ ಏಳು ವರ್ಷಗಳ ಕಾಲ ನೆಲೆಸಲು ತನ್ನ ಕುಟುಂಬದೊಂದಿಗೆ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಕೆಯು ದೇವರ ಮನುಷ್ಯನ ಅಪ್ಪಣೆಯಂತೆ ತನ್ನ ಮನೆಯವರೊಡನೆ ಸ್ವದೇಶವನ್ನು ಬಿಟ್ಟು ಹೋಗಿ ಫಿಲಿಷ್ಟಿಯರ ದೇಶದಲ್ಲಿ ಏಳು ವರ್ಷ ವಾಸವಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಕೆ ದೈವಪುರುಷನ ಅಪ್ಪಣೆಯಂತೆ ತನ್ನ ಮನೆಯವರೊಡನೆ ಸ್ವಂತನಾಡನ್ನು ಬಿಟ್ಟುಹೋಗಿ ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಕೆಯು ದೇವರ ಮನುಷ್ಯನ ಅಪ್ಪಣೆಯಂತೆ ತನ್ನ ಮನೆಯವರೊಡನೆ ಸ್ವದೇಶವನ್ನು ಬಿಟ್ಟು ಹೋಗಿ ಫಿಲಿಷ್ಟಿಯರ ದೇಶದಲ್ಲಿ ಏಳು ವರುಷ ವಾಸವಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಆ ಸ್ತ್ರೀಯು ಎದ್ದು ದೇವರ ಮನುಷ್ಯನ ಮಾತಿನ ಪ್ರಕಾರವೇ ಮಾಡಿ, ತನ್ನ ಮನೆಯವರ ಸಂಗಡ ಹೋಗಿ ಫಿಲಿಷ್ಟಿಯರ ದೇಶದಲ್ಲಿ ಏಳು ವರ್ಷ ವಾಸವಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:2
5 ತಿಳಿವುಗಳ ಹೋಲಿಕೆ  

ಯಾವನಾದರೂ ಸ್ವಂತ ಜನರನ್ನು ವಿಶೇಷವಾಗಿ ಸ್ವಂತ ಕುಟುಂಬದವರನ್ನು ಪರಿಪಾಲಿಸದೆ ಹೋದರೆ ಅವನು ಸತ್ಯಬೋಧನೆಯನ್ನು ತಿರಸ್ಕರಿಸುವವನಾಗಿದ್ದಾನೆ. ಅವನು ನಂಬದವನಿಗಿಂತ ತುಂಬಾ ಕೀಳಾದವನು.


ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಎಲ್ಲಾ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಾವಳಿಯಲ್ಲಿ ಬಾಳ್‌ಹೆರ್ಮೊನ್ ಬೆಟ್ಟದಿಂದ ಲೆಬೂಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು.


ಎಲೀಷನು ತಾನು ಮರಳಿ ಜೀವಿಸುವಂತೆ ಮಾಡಿದ ಬಾಲಕನ ತಾಯಿಯೊಂದಿಗೆ ಮಾತನಾಡಿದನು. ಎಲೀಷನು, “ನೀನು ಮತ್ತು ನಿನ್ನ ಕುಟುಂಬವು ಬೇರೆ ದೇಶಕ್ಕೆ ಹೋಗಬೇಕು. ಏಕೆಂದರೆ ಈ ದೇಶದಲ್ಲಿ ಬರಗಾಲವು ಏಳು ವರ್ಷಗಳವರೆಗೆ ಇರಬೇಕೆಂದು ಯೆಹೋವನು ತೀರ್ಮಾನಿಸಿದ್ದಾನೆ” ಎಂದು ಹೇಳಿದನು.


ಏಳು ವರ್ಷಗಳು ಮುಗಿದ ನಂತರ ಆ ಸ್ತ್ರೀಯು ಫಿಲಿಷ್ಟಿಯರ ದೇಶದಿಂದ ಹಿಂದಿರುಗಿ ಬಂದಳು. ಆ ಸ್ತ್ರೀಯು ತನ್ನ ಮನೆಯನ್ನು ಮತ್ತು ಭೂಮಿಯನ್ನು ತನಗೆ ಮತ್ತೆ ಕೊಡಿಸುವಂತೆ ಕೇಳಲು ರಾಜನ ಬಳಿಗೆ ಹೋದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು