Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:20 - ಪರಿಶುದ್ದ ಬೈಬಲ್‌

20 ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದದ ಆಳ್ವಿಕೆಗೆ ವಿರುದ್ಧವಾಗಿ ದಂಗೆ ಎದ್ದರು. ಎದೋಮ್ಯರು ತಮ್ಮಲ್ಲೇ ಒಬ್ಬ ರಾಜನನ್ನು ಆರಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇವನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರುದ್ಧವಾಗಿ ತಿರುಗಿಬಿದ್ದು ಸ್ವತಂತ್ರರಾಗಿ ತಮಗೆ ಒಬ್ಬ ಅರಸನನ್ನು ನೇಮಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇವನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರುದ್ಧ ದಂಗೆ ಎದ್ದು ಸ್ವತಂತ್ರರಾಗಿ ತಮಗೆ ಒಬ್ಬ ಅರಸನನ್ನು ನೇಮಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇವನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ತಿರುಗಿಬಿದ್ದು ಸ್ವತಂತ್ರರಾಗಿ ತಮಗೆ ಒಬ್ಬ ಅರಸನನ್ನು ನೇವಿುಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೆಹೋರಾಮನ ದಿನಗಳಲ್ಲಿ ಯೆಹೂದದ ಕೈಕೆಳಗಿದ್ದ ಎದೋಮ್ಯರು ತಿರುಗಿಬಿದ್ದು, ತಮ್ಮ ಅರಸನನ್ನು ತಾವೇ ನೇಮಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:20
10 ತಿಳಿವುಗಳ ಹೋಲಿಕೆ  

ಈ ಸಮಯದಲ್ಲಿ ಎದೋಮ್ ದೇಶದಲ್ಲಿ ರಾಜನಿರಲಿಲ್ಲ. ಆ ದೇಶವನ್ನು ಒಬ್ಬ ರಾಜ್ಯಪಾಲನು ಆಳುತ್ತಿದ್ದನು. ಈ ರಾಜ್ಯಪಾಲನನ್ನು ಯೆಹೂದದ ರಾಜನು ಆರಿಸಿದ್ದನು.


ಆದ್ದರಿಂದ ಇಸ್ರೇಲಿನ ರಾಜನು ಯೆಹೂದದ ಮತ್ತು ಎದೋಮಿನ ರಾಜರೊಂದಿಗೆ ಹೋದನು. ಅವರು ಏಳು ದಿನಗಳ ಕಾಲ ಪ್ರಯಾಣ ಮಾಡಿದರು. ಅವರ ಸೇನೆಗೆ ಮತ್ತು ಪ್ರಾಣಿಗಳಿಗೆ ಸಾಕಾಗುವಷ್ಟು ನೀರು ಅಲ್ಲಿ ಇರಲಿಲ್ಲ.


ಹೀಗೆ ಎದೋಮ್ಯರು ಯೆಹೂದದ ಆಳ್ವಿಕೆಯಿಂದ ಬೇರ್ಪಟ್ಟರು. ಅವರು ಇಂದಿನ ತನಕ ಯೆಹೂದದ ಆಳ್ವಿಕೆಯಿಂದ ಬೇರ್ಪಟ್ಟು ಸ್ವತಂತ್ರರಾಗಿದ್ದಾರೆ. ಅದೇ ಸಮಯದಲ್ಲಿ ಲಿಬ್ನದವರು ಯೆಹೂದದ ಆಳ್ವಿಕೆಯಿಂದ ಬೇರೆಯಾದರು.


ಆಗ ಮೋವಾಬಿನ ರಾಜನು, ತನ್ನ ನಂತರ ರಾಜನಾಗುವ ಹಿರಿಯ ಮಗನನ್ನು ಕರೆದೊಯ್ದನು. ಮೋವಾಬಿನ ರಾಜನು ನಗರವನ್ನು ಸುತ್ತುವರಿದಿರುವ ಗೋಡೆಯ ಮೇಲೆ ತನ್ನ ಮಗನನ್ನು ವಧಿಸಿ ಸರ್ವಾಂಗಹೋಮವನ್ನಾಗಿ ಅರ್ಪಿಸಿದನು. ಈ ಕಾರ್ಯವು ಇಸ್ರೇಲಿನ ಜನರನ್ನು ತಳಮಳಗೊಳಿಸಿತು. ಇಸ್ರೇಲಿನ ಜನರು ಮೋವಾಬಿನ ರಾಜನನ್ನು ಬಿಟ್ಟು ತಮ್ಮ ಸ್ವಂತ ದೇಶಕ್ಕೆ ಹಿಂದಿರುಗಿ ಹೋದರು.


ದಾವೀದನು ಎದೋಮಿನ ಎಲ್ಲಾ ಕಡೆಯಲ್ಲೂ ಕಾವಲುದಂಡನ್ನು ಇರಿಸಿದನು. ಎದೋಮಿನ ಜನರೆಲ್ಲರೂ ದಾವೀದನ ಸೇವಕರಾದರು. ದಾವೀದನು ಹೋದ ಕಡೆಗಳಲ್ಲೆಲ್ಲಾ ಯೆಹೋವನು ಜಯವನ್ನು ಉಂಟುಮಾಡಿದನು.


ನೀನು ಕತ್ತಿಯಿಂದಲೇ ಜೀವಿಸುವೆ. ನೀನು ನಿನ್ನ ತಮ್ಮನ ಸೇವಕನಾಗಿರುವೆ. ಆದರೆ ನೀನು ಬಿಡುಗಡೆಯಾಗಲು ಹೋರಾಡಿ ಅವನ ಹಿಡಿತದಿಂದ ಪಾರಾಗುವೆ.”


ಆ ಯುದ್ಧವು ತನ್ನ ಶಕ್ತಿಯನ್ನು ಮೀರಿ ಹೋಯಿತೆಂದು ಮೋವಾಬಿನ ರಾಜನು ಗ್ರಹಿಸಿಕೊಂಡನು. ಆದ್ದರಿಂದ ಅವನು ಎದೋಮಿನ ರಾಜನನ್ನು ಕೊಂದುಹಾಕಲು ಖಡ್ಗಗಳನ್ನು ಹಿಡಿದ ತನ್ನ ಏಳುನೂರು ಜನರೊಂದಿಗೆ ನುಗ್ಗಿಹೋಗಲು ಪ್ರಯತ್ನಿಸಿದನು. ಆದರೆ ಅವರು ಎದೋಮಿನ ರಾಜನ ಬಳಿಗೆ ನುಗ್ಗಿ ಹೋಗಲಾಗಲಿಲ್ಲ.


ರಾಜನಾದ ಯೆಹೋಷಾಫಾಟನು ಸರಕು ಸಾಗಿಸುವ ಹಡಗುಗಳನ್ನು ತಯಾರಿಸಿದನು. ಯೆಹೋಷಾಫಾಟನು ಓಫೀರ್ ದೇಶದಿಂದ ಬಂಗಾರವನ್ನು ತರುವುದಕ್ಕಾಗಿ ಈ ಹಡಗುಗಳನ್ನು ಕಳುಹಿಸಿದನು. ಆದರೆ ಆ ಹಡಗುಗಳು ತಮ್ಮ ಸ್ವಂತ ಬಂದರಾದ ಎಚ್ಯೋನ್ಗೆಬೆರಿನಲ್ಲಿ ನಾಶವಾದವು. ಅವು ಓಫೀರ್ ದೇಶವನ್ನು ಮುಟ್ಟಲೇ ಇಲ್ಲ.


ಅಮಚ್ಯನು ಉಪ್ಪಿನ ಕಣಿವೆಯಲ್ಲಿ ಹತ್ತುಸಾವಿರ ಎದೋಮ್ಯರನ್ನು ಕೊಂದುಹಾಕಿ ಅವರಿಂದ ಸೆಲ ದುರ್ಗವನ್ನು ವಶಪಡಿಸಿಕೊಂಡು ಅದನ್ನು “ಯೊಕ್ತೆಯೇಲ್” ಎಂದು ಕರೆದನು. ಆ ಸ್ಥಳಕ್ಕೆ ಇಂದಿಗೂ ಅದೇ ಹೆಸರಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು