2 ಅರಸುಗಳು 8:21 - ಪರಿಶುದ್ದ ಬೈಬಲ್21 ಆಗ ಯೆಹೋರಾಮನು ಮತ್ತು ಅವನ ರಥಗಳೆಲ್ಲ ಚಾಯೀರಿಗೆ ಹೋದವು. ಎದೋಮಿನ ಸೇನೆಯು ಅವರನ್ನು ಸುತ್ತುವರಿಯಿತು. ಯೆಹೋರಾಮನು ತನ್ನ ಅಧಿಕಾರಿಗಳೊಂದಿಗೆ ಅವರನ್ನು ರಾತ್ರಿಯಲ್ಲಿ ಮುತ್ತಿಗೆ ಹಾಕಿ ತಪ್ಪಿಸಿಕೊಂಡರು. ಆದರೆ ಅವನ ಸೈನಿಕರು ತಮ್ಮ ಗುಡಾರಗಳಿಗೆ ಓಡಿಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆಗ ಯೆಹೋರಾಮನು ತನ್ನ ಎಲ್ಲಾ ರಥಬಲಸಹಿತವಾಗಿ ಯೊರ್ದನ್ ನದಿಯನ್ನು ದಾಟಿ ಚಾಯೀರಿಮಿಗೆ ಹೋದನು. ಎದೋಮ್ಯರು ಬಂದು ಅವನನ್ನು ಸುತ್ತಿಕೊಳ್ಳಲು ಅವನು ರಾತ್ರಿಯಲ್ಲಿ ಎದ್ದು ಅವರನ್ನು ಅವರ ರಥಬಲದ ಅಧಿಪತಿಗಳನ್ನು ಸೋಲಿಸಿ ಪಾರಾದನು. ಅವನ ಸೈನ್ಯದವರು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆಗ ಯೆಹೋರಾಮನು ತನ್ನ ಎಲ್ಲಾ ರಥಬಲಸಹಿತವಾಗಿ ಜೋರ್ಡನ್ ಹೊಳೆಯನ್ನು ದಾಟಿ ಚಾಯೀರಿಗೆ ಹೋದನು. ಎದೋಮ್ಯರು ಬಂದು ಅವನನ್ನು ಸುತ್ತಿಕೊಂಡರು. ಅವನು ರಾತ್ರಿಯಲ್ಲೆದ್ದು ಅವರನ್ನೂ ಅವರ ರಥಬಲದ ಅಧಿಪತಿಗಳನ್ನೂ ಸೋಲಿಸಿ ಪಾರಾದನು. ಅವನ ಸೈನ್ಯದವರೂ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆಗ ಯೆಹೋರಾಮನು ತನ್ನ ಎಲ್ಲಾ ರಥಬಲಸಹಿತವಾಗಿ ಯೊರ್ದನ್ ಹೊಳೆಯನ್ನು ದಾಟಿ ಚಾಯೀರಿಗೆ ಹೋದನು. ಎದೋಮ್ಯರು ಬಂದು ಅವನನ್ನು ಸುತ್ತಿಕೊಳ್ಳಲು ಅವನು ರಾತ್ರಿಯಲ್ಲೆದ್ದು ಅವರನ್ನೂ ಅವರ ರಥಬಲದ ಅಧಿಪತಿಗಳನ್ನೂ ಸೋಲಿಸಿ ಪಾರಾದನು. ಅವನ ಸೈನ್ಯದವರೂ ತಮ್ಮತಮ್ಮ ನಿವಾಸಗಳಿಗೆ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದ್ದರಿಂದ ಯೆಹೋರಾಮನು ತನ್ನ ಬಳಿಯಲ್ಲಿದ್ದ ಎಲ್ಲಾ ರಥಬಲವನ್ನು ತೆಗೆದುಕೊಂಡು ಚಾಯೀರಿಗೆ ಹೋಗಿ, ರಾತ್ರಿಯಲ್ಲಿ ಎದ್ದು, ತನ್ನನ್ನೂ ತನ್ನ ರಥಗಳ ಅಧಿಪತಿಗಳನ್ನೂ ಎದೋಮ್ಯರನ್ನು ಸೋಲಿಸಿದನು. ಅವನ ಸೈನಿಕರು ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಧ್ಯಾಯವನ್ನು ನೋಡಿ |