Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:22 - ಪರಿಶುದ್ದ ಬೈಬಲ್‌

22 ಹೀಗೆ ಎದೋಮ್ಯರು ಯೆಹೂದದ ಆಳ್ವಿಕೆಯಿಂದ ಬೇರ್ಪಟ್ಟರು. ಅವರು ಇಂದಿನ ತನಕ ಯೆಹೂದದ ಆಳ್ವಿಕೆಯಿಂದ ಬೇರ್ಪಟ್ಟು ಸ್ವತಂತ್ರರಾಗಿದ್ದಾರೆ. ಅದೇ ಸಮಯದಲ್ಲಿ ಲಿಬ್ನದವರು ಯೆಹೂದದ ಆಳ್ವಿಕೆಯಿಂದ ಬೇರೆಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೀಗೆ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ತಿರುಗಿ ಬಿದ್ದರು. ಅವರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿರುತ್ತಾರೆ. ಅದೇ ಕಾಲದಲ್ಲಿ ಲಿಬ್ನದವರು ಸ್ವತಂತ್ರರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಹೀಗೆ ಎದೋಮ್ಯರು ಯೆಹೂದ್ಯರಿಗೆ ವಿರುದ್ಧ ದಂಗೆ ಎದ್ದರು. ಅವರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿರುತ್ತಾರೆ. ಅದೇ ಕಾಲದಲ್ಲಿ ಲಿಬ್ನದವರೂ ಸ್ವತಂತ್ರರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹೀಗೆ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ತಿರುಗಿಬಿದ್ದರು. ಅವರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿರುತ್ತಾರೆ. ಅದೇ ಕಾಲದಲ್ಲಿ ಲಿಬ್ನದವರೂ ಸ್ವತಂತ್ರರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿದ್ದಾರೆ. ಅದೇ ಕಾಲದಲ್ಲಿ ಲಿಬ್ನದವರೂ ಸ್ವತಂತ್ರರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:22
8 ತಿಳಿವುಗಳ ಹೋಲಿಕೆ  

ಅಶ್ಶೂರದ ರಾಜನು ಲಾಕೀಷನ್ನು ಬಿಟ್ಟುಹೋದನೆಂಬ ಸುದ್ದಿಯನ್ನು ಸೇನಾಧಿಪತಿಯು ಕೇಳಿ ಲಿಬ್ನಕ್ಕೆ ಹೋದಾಗ ರಾಜನು ಲಿಬ್ನದ ವಿರುದ್ಧ ಯುದ್ಧ ಮಾಡುತ್ತಿದ್ದನು.


ಆದ್ದರಿಂದ ಆರೋನನ ಸಂತತಿಯವರಿಗೆ ಆಶ್ರಯನಗರವಾದ ಹೆಬ್ರೋನ್ ನಗರವನ್ನು ಕೊಡಲಾಯಿತು. ಆರೋನನ ಸಂತತಿಯವರಿಗೆ ಅವರು ಲಿಬ್ನಾ,


ನೀನು ಕತ್ತಿಯಿಂದಲೇ ಜೀವಿಸುವೆ. ನೀನು ನಿನ್ನ ತಮ್ಮನ ಸೇವಕನಾಗಿರುವೆ. ಆದರೆ ನೀನು ಬಿಡುಗಡೆಯಾಗಲು ಹೋರಾಡಿ ಅವನ ಹಿಡಿತದಿಂದ ಪಾರಾಗುವೆ.”


ಅಂದಿನಿಂದ ಇಂದಿನ ತನಕವೂ ಎದೋಮ್ ರಾಜ್ಯವು ಯೆಹೂದರಾಜ್ಯಕ್ಕೆ ಒಳಗಾಗಲೇ ಇಲ್ಲ. ಲಿಬ್ನ ಪಟ್ಟಣದ ಜನರೂ ಯೆಹೋರಾಮನಿಗೆ ಎದುರುನಿಂತರು. ತನ್ನ ಪೂರ್ವಿಕರು ಆರಾಧಿಸುತ್ತಿದ್ದ ದೇವರಾದ ಯೆಹೋವನನ್ನು ಯೆಹೋರಾಮನು ತೊರೆದುಬಿಟ್ಟಿದ್ದರಿಂದ ಇವೆಲ್ಲಾ ಅವನಿಗೆ ಸಂಭವಿಸಿದವು.


ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದದ ಆಳ್ವಿಕೆಗೆ ವಿರುದ್ಧವಾಗಿ ದಂಗೆ ಎದ್ದರು. ಎದೋಮ್ಯರು ತಮ್ಮಲ್ಲೇ ಒಬ್ಬ ರಾಜನನ್ನು ಆರಿಸಿಕೊಂಡಿದ್ದರು.


ಯೆಹೂದದ ರಾಜರುಗಳು ಎಂಬ ಇತಿಹಾಸ ಪುಸ್ತಕದಲ್ಲಿ ಯೆಹೋರಾಮನು ಮಾಡಿದ ಇತರ ಎಲ್ಲಾ ಕಾರ್ಯಗಳನ್ನು ಬರೆಯಲಾಗಿದೆ.


ಚಿದ್ಕೀಯನು ಯೆಹೂದದ ರಾಜನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು. ಚಿದ್ಕೀಯನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಹಮೂಟಲ್. ಈಕೆ ಯೆರೆಮೀಯನ ಮಗಳು. ಹಮೂಟಲಳ ಮನೆತನದವರು ಲಿಬ್ನ ಪಟ್ಟಣದ ನಿವಾಸಿಗಳಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು