Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:24 - ಪರಿಶುದ್ದ ಬೈಬಲ್‌

24 ಯೆಹೋರಾಮನು ಸತ್ತುಹೋದನು. ಅವನನ್ನು ದಾವೀದನಗರದಲ್ಲಿ ಅವನ ಪೂರ್ವಿಕರ ಬಳಿ ಸಮಾಧಿ ಮಾಡಿದರು. ಯೆಹೋರಾಮನ ಮಗನಾದ ಅಹಜ್ಯನು ನೂತನ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೆಹೋರಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಅಹಜ್ಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅವನು ನಿಧನನಾಗಿ ಪಿತೃಗಳ ಬಳಿ ಸೇರಲು ಅವನ ಶವವನ್ನು ದಾವೀದನಗರದೊಳಗೆ ಕುಟುಂಬ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಅಹಜ್ಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ಕುಟುಂಬ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಹಜ್ಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಯೆಹೋರಾಮನು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಅಹಜ್ಯನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:24
18 ತಿಳಿವುಗಳ ಹೋಲಿಕೆ  

ಯೋವಾಷನು ಬೇತ್ಷೆಮೆಷಿನಲ್ಲಿ ಅಮಚ್ಯನನ್ನು ಹಿಡಿದು ಜೆರುಸಲೇಮಿಗೆ ಕೊಂಡೊಯ್ದನು. ಅಮಚ್ಯನ ತಂದೆ ಯೆಹೋವಾಷನು. ಇವನು ಯೆಹೋವಹಾಜನ ಮಗ. ಯೋವಾಷನು ಜೆರುಸಲೇಮಿನ ಪೌಳಿಗೋಡೆಯಲ್ಲಿ ಆರುನೂರು ಅಡಿ ಗೋಡೆಯನ್ನು ಅಂದರೆ ಎಫ್ರಾಯೀಮ್ ಬಾಗಿಲಿನಿಂದ ಹಿಡಿದು ಮೂಲೆಬಾಗಿಲಿನವರೆಗೆ ಗೋಡೆಯನ್ನು ಕೆಡವಿಹಾಕಿದನು.


ಗಾಯವನ್ನು ವಾಸಿಮಾಡಿಸಿಕೊಳ್ಳಲು ಯೋರಾಮನು ಇಜ್ರೇಲಿಗೆ ಹೋದನು. ಅರಾಮ್ಯರ ರಾಜನಾದ ಹಜಾಯೇಲನೊಡನೆ ಯುದ್ಧಮಾಡುತ್ತಿರುವಾಗ ಯೋರಾಮನು ಗಾಯಗೊಂಡಿದ್ದನು. ಇಜ್ರೇಲಿನಲ್ಲಿ ಅಸ್ವಸ್ಥನಾಗಿದ್ದ ಯೋರಾಮನನ್ನು ಸಂಧಿಸಲು ಯೆಹೂದ್ಯರ ಅರಸನೂ ಯೆಹೋರಾಮನ ಮಗನೂ ಆಗಿರುವ ಅಹಜ್ಯನು ಹೋದನು.


ಅವರು ಬಂದು ಯೆಹೂದದೇಶದ ಮೇಲೆ ಆಕ್ರಮಣ ಮಾಡಿದರು; ರಾಜನಿವಾಸದಲ್ಲಿದ್ದ ನಿಕ್ಷೇಪವನ್ನೆಲ್ಲಾ ಸೂರೆಮಾಡಿದರು. ಅಲ್ಲದೆ ಯೆಹೋರಾಮನ ಪತ್ನಿ, ಮಕ್ಕಳನ್ನೂ ಕೊಂಡೊಯ್ದರು. ಯೆಹೋರಾಮನ ಕೊನೆಯ ಮಗನು ಮಾತ್ರ ಉಳಿದನು. ಅವನ ಹೆಸರು ಯೆಹೋವಾಹಾಜ.


ಯೆಹೋಷಾಫಾಟನು ಸತ್ತನು. ಅವನನ್ನು ಅವನ ಪೂರ್ವಿಕರೊಂದಿಗೆ ದಾವೀದನಗರದಲ್ಲಿ ಸಮಾಧಿಮಾಡಿದರು. ಅವನ ಮಗನಾದ ಯೆಹೋರಾಮನು ಪಟ್ಟಕ್ಕೆ ಬಂದನು.


ಯೆಹೋರಾಮನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು. ಅವನು ಎಂಟು ವರ್ಷ ಕಾಲ ಜೆರುಸಲೇಮಿನಲ್ಲಿ ಆಳಿದನು. ಅವನು ಸತ್ತಾಗ ಅವನಿಗೋಸ್ಕರ ಯಾರೂ ದುಃಖಪಡಲಿಲ್ಲ. ಜನರು ಅವನನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಆದರೆ ರಾಜರ ಸಮಾಧಿ ಸ್ಥಳದಲ್ಲಿ ಅವನನ್ನು ಹೂಳಿಡಲಿಲ್ಲ.


ಯೆಹೋಷಾಫಾಟನ ಮಗನು ಯೆಹೋರಾಮ್. ಯೆಹೋರಾಮನ ಮಗನು ಅಹಜ್ಯ. ಅಹಜ್ಯನ ಮಗನು ಯೆಹೋವಾಷ.


ರೆಹಬ್ಬಾಮನು ಸತ್ತುಹೋದನು. ಅವನನ್ನು ಅವನ ಪೂರ್ವಿಕನಾದ ದಾವೀದನಗರದಲ್ಲಿ ಸಮಾಧಿಮಾಡಿದರು. (ಅಮ್ಮೋನಿಯಾದ ನಯಮಾಳು ಅವನ ತಾಯಿ) ಅವನ ನಂತರ ಅವನ ಮಗ ಅಬೀಯಾಮನು ರಾಜನಾದನು.


ಯಾರೊಬ್ಬಾಮನು ರಾಜನಾಗಿ ಇಪ್ಪತ್ತೆರಡು ವರ್ಷ ಆಳಿದನು. ನಂತರ ಅವನು ಸತ್ತುಹೋದನು. ಅವನನ್ನು ಪೂರ್ವಿಕರ ಬಳಿ ಸಮಾಧಿಮಾಡಿದರು. ಅವನ ಮಗನಾದ ನಾದಾಬನು ಅವನ ನಂತರ ಹೊಸ ರಾಜನಾದನು.


ಬಳಿಕ ಸೊಲೊಮೋನನು ಸತ್ತನು. ಅವನನ್ನು ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಅವನನ್ನು ಅವನ ತಂದೆಯಾದ ದಾವೀದ ನಗರದಲ್ಲಿ ಸಮಾಧಿಮಾಡಿದರು. ಸೊಲೊಮೋನನ ಮಗನಾದ ರೆಹಬ್ಬಾಮನು ಸೊಲೊಮೋನನ ಬಳಿಕ ರಾಜನಾದನು.


ನಂತರ ದಾವೀದನು ತೀರಿಕೊಂಡನು. ಅವನನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು.


ಯೆಹೂದದ ರಾಜರುಗಳು ಎಂಬ ಇತಿಹಾಸ ಪುಸ್ತಕದಲ್ಲಿ ಯೆಹೋರಾಮನು ಮಾಡಿದ ಇತರ ಎಲ್ಲಾ ಕಾರ್ಯಗಳನ್ನು ಬರೆಯಲಾಗಿದೆ.


ಯೇಹು ಯೆಹೂದದ ರಾಜನಾದ ಅಹಜ್ಯನ ಬಂಧುಗಳನ್ನು ಭೇಟಿಮಾಡಿ ಅವರಿಗೆ, “ನೀವು ಯಾರು?” ಎಂದು ಕೇಳಿದನು. ಅವರು, “ನಾವು ಯೆಹೂದದ ರಾಜನಾದ ಅಹಜ್ಯನ ಬಂಧುಗಳು. ನಾವು ರಾಜನ ಮಕ್ಕಳನ್ನು ಮತ್ತು ರಾಜಮಾತೆಯ ಮಕ್ಕಳನ್ನು ನೋಡಲು ಬಂದಿದ್ದೇವೆ” ಎಂದರು.


ಆದರೆ ಯೆಹೋವನು ದಾವೀದನೊಂದಿಗೆ ಮಾಡಿದ ಒಡಂಬಡಿಕೆಯ ನಿಮಿತ್ತ ಅವನನ್ನು ನಾಶಮಾಡಲಿಲ್ಲ. ಯೆಹೋವನು, “ದಾವೀದನ ಸಂತತಿಯವರ ಬೆಳಕು ಉರಿಯುತ್ತಲೇ ಇರುವದು” ಎಂದು ವಾಗ್ದಾನ ಮಾಡಿದ್ದನು.


ಜೆರುಸಲೇಮಿನ ಜನರು ಯೆಹೋರಾಮನ ಕೊನೆಯ ಮಗನಾದ ಅಹಜ್ಯನನ್ನು ತಮ್ಮ ರಾಜನನ್ನಾಗಿ ಆರಿಸಿಕೊಂಡರು. ಯೆಹೋರಾಮನೊಂದಿಗೆ ಯುದ್ಧಕ್ಕೆ ಬಂದಿದ್ದ ಅರಬ್ಬಿಯರು ಅವನ ಮಕ್ಕಳನ್ನೆಲ್ಲಾ ಕೊಂದಿದ್ದರು. ಹೀಗಾಗಿ ಉಳಿದುಕೊಂಡಿದ್ದ ಅಹಜ್ಯನು ಜೆರುಸಲೇಮಿನಲ್ಲಿ ಯೆಹೂದ ರಾಜ್ಯವನ್ನು ಆಳತೊಡಗಿದನು.


ಅಹಜ್ಯನ ಸೇವಕರು ಅವನ ದೇಹವನ್ನು ಜೆರುಸಲೇಮಿಗೆ ತಂದರು. ಅವನನ್ನು ದಾವೀದ ನಗರದಲ್ಲಿ ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿ ಮಾಡಿದರು.


ಅಮಚ್ಯನ ದೇಹವನ್ನು ಜನರು ಕುದುರೆಗಳ ಮೇಲೆ ತೆಗೆದುಕೊಂಡು ಬಂದರು. ಅಮಚ್ಯನನ್ನು ಜೆರುಸಲೇಮಿನಲ್ಲಿರುವ ದಾವೀದನಗರದಲ್ಲಿ ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು.


ಯೋತಾಮನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಿದರು. ಯೋತಾಮನನ್ನು ಅವನ ಪೂರ್ವಿಕನಾದ ದಾವೀದನ ನಗರದಲ್ಲಿ ಸಮಾಧಿಮಾಡಿದರು. ಯೋತಾಮನ ನಂತರ ಅವನ ಮಗನಾದ ಅಹಾಜನು ಹೊಸ ರಾಜನಾದನು.


ಅಹಾಜನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಬಳಿ ದಾವೀದನಗರದಲ್ಲಿ ಸಮಾಧಿಮಾಡಿದರು. ಅಹಾಜನ ಮಗನಾದ ಹಿಜ್ಕೀಯನು ಅವನ ನಂತರ ಹೊಸ ರಾಜನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು