Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:29 - ಪರಿಶುದ್ದ ಬೈಬಲ್‌

29 ರಾಜ ಯೋರಾಮನು ಹಜಾಯೇಲನ ವಿರುದ್ಧವಾಗಿ ಹೋರಾಡಿದಾಗ ರಾಮಾದಲ್ಲಿ ಅರಾಮ್ಯದಿಂದ ತನಗಾದ ಗಾಯಗಳನ್ನು ಗುಣಪಡಿಸಿಕೊಳ್ಳಲು ಇಸ್ರೇಲಿನ ರಾಜನು ಇಜ್ರೇಲ್ ಎಂಬ ಪಟ್ಟಣಕ್ಕೆ ಹಿಂತಿರುಗಿದನು. ಯೆಹೂದದ ರಾಜನೂ ಯೆಹೋರಾಮನ ಮಗನೂ ಆದ ಅಹಜ್ಯನು, ಅಹಾಬನ ಮಗನಾದ ಯೋರಾಮನನ್ನು ನೋಡಲು ಇಜ್ರೇಲಿಗೆ ಹೋದನು. ಯಾಕೆಂದರೆ ಅವನಿಗೆ ಕಾಯಿಲೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅರಾಮ್ಯರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಲು ಅವನಿಗೆ ರಾಮದಲ್ಲಿ ಆದ ಗಾಯಗಳನ್ನು ಗುಣಪಡಿಸಿಕೊಳ್ಳುವುದಕ್ಕಾಗಿ ಇಜ್ರೇಲಿಗೆ ಬಂದನು. ಹಜಾಯೇಲನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗ ಅಹಜ್ಯನು ಅಹಾಬನ ಮಗನಾದ ಯೋರಾಮನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಸಿರಿಯಾದವರು ಯೋರಾಮನನ್ನು ಗಾಯಪಡಿಸಿದರು. ಯುದ್ಧದಲ್ಲಾದ ಗಾಯಗಳನ್ನು ಮಾಗಿಸಿಕೊಳ್ಳುವುದಕ್ಕಾಗಿ ಅವನು ಜೆಸ್ರೀಲಿಗೆ ಬಂದನು. ಅವನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗ ಅಹಜ್ಯನು ಅವನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅರಾಮ್ಯರು ಯೋರಾಮನನ್ನು ಗಾಯಪಡಿಸಲು ಅವನು ಯುದ್ಧದಲ್ಲಾದ ಗಾಯಗಳನ್ನು ಮಾಯಿಸಿಕೊಳ್ಳುವದಕ್ಕಾಗಿ ಇಜ್ರೇಲಿಗೆ ಬಂದನು. ಅವನು ಅಸ್ವಸ್ಥನಾಗಿದ್ದದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗ ಅಹಜ್ಯನು ಅವನನ್ನು ನೋಡುವದಕ್ಕೋಸ್ಕರ ಅಲ್ಲಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆದ್ದರಿಂದ ಅರಸನಾದ ಯೋರಾಮನು ಅರಾಮ್ಯ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ, ರಾಮೋತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಪಡಿಸಿಕೊಳ್ಳುವುದಕ್ಕೆ ಇಜ್ರೆಯೇಲ್ ಪಟ್ಟಣಕ್ಕೆ ತಿರುಗಿಹೋದನು. ಆಗ ಅಹಾಬನ ಮಗ ಯೋರಾಮನು ಇಜ್ರೆಯೇಲಿನಲ್ಲಿ ಅಸ್ವಸ್ಥನಾಗಿದ್ದುದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗ ಅಹಜ್ಯನು ಅವನನ್ನು ನೋಡಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:29
8 ತಿಳಿವುಗಳ ಹೋಲಿಕೆ  

ಅಹಜ್ಯನು ಅಹಾಬನ ಮಗನಾದ ಯೋರಾಮನ ಜೊತೆಯಲ್ಲಿ ಅರಾಮ್ಯರ ರಾಜನಾದ ಹಜಾಯೇಲನ ವಿರುದ್ಧ ಯುದ್ಧಮಾಡಲು ರಾಮೋತ್‌ಗಿಲ್ಯಾದಿಗೆ ಹೋದನು. ಅರಾಮ್ಯರು ಯೋರಾಮನನ್ನು ಗಾಯಗೊಳಿಸಿದರು.


ಆದರೆ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಒಂದು ಬಾಣವನ್ನು ಗಾಳಿಯಲ್ಲಿ ಹೊಡೆದನು. ಆದರೆ ಅವನ ಬಾಣವು ಇಸ್ರೇಲಿನ ರಾಜನಾದ ಅಹಾಬನಿಗೆ ಬಡಿಯಿತು. ಆ ಬಾಣವು ರಾಜನ ದೇಹದ ಕವಚದ ಸಣ್ಣ ಸಂಧಿಯಲ್ಲಿ ತಾಕಿತು. ರಾಜನಾದ ಅಹಾಬನು ತನ್ನ ರಥದ ಸಾರಥಿಗೆ, “ಒಂದು ಬಾಣವು ನನಗೆ ತಾಕಿತು! ರಥವನ್ನು ಈ ಪ್ರದೇಶದಿಂದ ಹೊರಗೆ ಓಡಿಸು. ನಾವು ಯುದ್ಧದಿಂದ ಹೊರಟುಹೋಗಬೇಕಾಗಿದೆ” ಎಂದು ಹೇಳಿದನು.


ಪ್ರವಾದಿಯಾದ ಎಲೀಷನು ಪ್ರವಾದಿಗಳ ಗುಂಪಿನಿಂದ ಒಬ್ಬನನ್ನು ಕರೆದು ಅವನಿಗೆ, “ಎಣ್ಣೆಯಿರುವ ಈ ಸಣ್ಣ ಸೀಸೆಯನ್ನು ನಿನ್ನ ಕೈಗಳಲ್ಲಿ ತೆಗೆದುಕೊಂಡು ರಾಮೋತ್‌ಗಿಲ್ಯಾದಿಗೆ ಹೋಗು.


ಯೇಹು ಯೆಹೂದದ ರಾಜನಾದ ಅಹಜ್ಯನ ಬಂಧುಗಳನ್ನು ಭೇಟಿಮಾಡಿ ಅವರಿಗೆ, “ನೀವು ಯಾರು?” ಎಂದು ಕೇಳಿದನು. ಅವರು, “ನಾವು ಯೆಹೂದದ ರಾಜನಾದ ಅಹಜ್ಯನ ಬಂಧುಗಳು. ನಾವು ರಾಜನ ಮಕ್ಕಳನ್ನು ಮತ್ತು ರಾಜಮಾತೆಯ ಮಕ್ಕಳನ್ನು ನೋಡಲು ಬಂದಿದ್ದೇವೆ” ಎಂದರು.


ಈ ಭೂಮಿಯನ್ನು ಆ ಕುಲದವರಿಗೆ ಕೊಡಲಾಯಿತು: ಇಜ್ರೇಲ್, ಕೆಸುಲ್ಲೋತ್, ಶೂನೇಮ್,


ಯೆಹೋಷಾಫಾಟನ ಮಗನೂ ನಿಂಷಿಯ ಮೊಮ್ಮಗನೂ ಆದ ಯೇಹುವು ಯೋರಾಮನ ವಿರುದ್ಧ ಒಳಸಂಚುಮಾಡಿದನು. ಆ ಸಮಯದಲ್ಲಿ ರಾಮೋತ್‌ಗಿಲ್ಯಾದನ್ನು ಅರಾಮ್ಯರ ರಾಜನಾದ ಹಜಾಯೇಲನಿಂದ ರಕ್ಷಿಸಲು, ಯೋರಾಮನೂ ಇಸ್ರೇಲರೂ ಪ್ರಯತ್ನಿಸಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು