Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:6 - ಪರಿಶುದ್ದ ಬೈಬಲ್‌

6 ರಾಜನು ಆ ಸ್ತ್ರೀಯನ್ನು ಕೇಳಿದಾಗ, ಅವಳು ತನಗೆ ಸಂಭವಿಸಿದ್ದನ್ನು ಮತ್ತು ತನಗಿದ್ದ ಇಚ್ಛೆಯನ್ನು ತಿಳಿಸಿದಳು. ಆಗ ರಾಜನು ಅವಳಿಗೆ ಸಹಾಯಮಾಡಲು ಒಬ್ಬ ಅಧಿಕಾರಿಯನ್ನು ಕರೆದು, “ಅವಳಿಗೆ ಸೇರಬೇಕಾದ ಆಸ್ತಿಯೆಲ್ಲವನ್ನೂ ಆಕೆಗೆ ಕೊಡಿಸು. ಅವಳು ದೇಶವನ್ನು ಬಿಟ್ಟಂದಿನಿಂದ ಈವರೆಗಿನ ಆಕೆಯ ಭೂಮಿಯ ಉತ್ಪಾದನೆಯನ್ನೂ ಅವಳಿಗೆ ಕೊಡಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅರಸನು ಈ ವಿಷಯವಾಗಿ ಆ ಸ್ತ್ರೀಯನ್ನು ವಿಚಾರಿಸಲು ಆಕೆಯು ಅದರಂತೆಯೇ ಎಲೀಷನಿಂದಾದ ದೇವರ ಮಹಿಮೆಯ ವಿಷಯವನ್ನು ವಿವರವಾಗಿ ತಿಳಿಸಿದಳು. ಆಗ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, “ಈಕೆಯ ಹೊಲಮನೆಗಳನ್ನೂ, ಈಕೆಯು ದೇಶವನ್ನು ಬಿಟ್ಟ ದಿನದಿಂದ ಇಂದಿನವರೆಗೂ ಈಕೆಗೆ ಸಲ್ಲತಕ್ಕ ಹೊಲದ ಆದಾಯವನ್ನೂ ಅವಳಿಗೆ ಕೊಡಿಸು” ಎಂದು ಆಜ್ಞಾಪಿಸಿ, ಅವನನ್ನು ಆಕೆಯ ಜೊತೆಯಲ್ಲಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅರಸನು ಈ ಸಂಗತಿಯ ವಿಷಯವಾಗಿ ಆ ಸ್ತ್ರೀಯನ್ನೇ ವಿಚಾರಿಸಿದನು. ಆಕೆ ಅದರಂತೆಯೇ ಹೇಳಿದಳು. ಆಗ ಅರಸನು ಒಬ್ಬ ಕಂಚುಕಿಯನ್ನು ಕರೆದು, “ಹೋಗಿ ಈಕೆಯ ಹೊಲಮನೆಗಳನ್ನೂ ಈಕೆ ಈ ನಾಡನ್ನು ಬಿಟ್ಟಂದಿನಿಂದ ಇಂದಿನವರೆಗೂ ಈಕೆಗೆ ಸಲ್ಲತಕ್ಕ ಹೊಲದ ಆದಾಯವನ್ನೂ ಕೊಡಿಸು,” ಎಂದು ಆಜ್ಞಾಪಿಸಿ ಅವನನ್ನು ಆಕೆಯ ಜೊತೆಯಲ್ಲೇ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅರಸನು ಈ ಸಂಗತಿಯ ವಿಷಯವಾಗಿ ಆ ಸ್ತ್ರೀಯನ್ನು ವಿಚಾರಿಸಲು ಆಕೆಯು ಅದರಂತೆಯೇ ಹೇಳಿದಳು. ಆಗ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ - ಹೋಗಿ ಈಕೆಯ ಹೊಲಮನೆಗಳನ್ನೂ ಈಕೆಯು ದೇಶವನ್ನು ಬಿಟ್ಟಂದಿನಿಂದ ಇಂದಿನವರೆಗೂ ಈಕೆಗೆ ಸಲ್ಲತಕ್ಕ ಹೊಲದ ಆದಾಯವನ್ನೂ ಕೊಡಿಸು ಎಂದು ಆಜ್ಞಾಪಿಸಿ ಅವನನ್ನು ಆಕೆಯ ಜೊತೆಯಲ್ಲಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅರಸನು ಆ ಸ್ತ್ರೀಯನ್ನು ವಿಚಾರಿಸಿದಾಗ, ಅವಳು ವಿವರವಾಗಿ ಹೇಳಿದಳು. ಆಗ ಅರಸನು ಅವಳಿಗಾಗಿ ಒಬ್ಬ ಅಧಿಕಾರಿಯನ್ನು ನೇಮಿಸಿ, ಅವನಿಗೆ, “ಅವಳಿಗೆ ಸೇರಿದ ಎಲ್ಲವನ್ನು, ಅವಳು ದೇಶವನ್ನು ಬಿಟ್ಟ ದಿನದಿಂದ ಇಂದಿನವರೆಗೆ ಅವಳಿಗೆ ಸಲ್ಲತಕ್ಕ ಆ ಹೊಲದ ಆದಾಯವನ್ನೆಲ್ಲಾ ಅವಳಿಗೆ ಕೊಡಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:6
10 ತಿಳಿವುಗಳ ಹೋಲಿಕೆ  

ಯೆಹೋವನು ರಾಜನ ಮನಸ್ಸನ್ನು ನೀರಿನ ಕಾಲುವೆಯಂತೆ ಹತೋಟಿಯಲ್ಲಿಡುವನು. ಆತನು ತನ್ನ ಇಷ್ಟಾನುಸಾರ ಅದಕ್ಕೆ ಮಾರ್ಗದರ್ಶನ ನೀಡುವನು.


ಯೆಹೋವನ ಚಿತ್ತಕ್ಕನುಸಾರವಾಗಿ ಜೀವಿಸುವವನು ತನ್ನ ವೈರಿಗಳೊಡನೆಯೂ ಸಮಾಧಾನದಿಂದಿರುವನು.


ದಾವೀದನು ಮೆಫೀಬೋಶೆತನಿಗೆ, “ಹೆದರಬೇಡ, ನಾನು ನಿನಗೆ ದಯತೋರಿಸುವೆ. ನಿನ್ನ ತಂದೆಯಾದ ಯೋನಾತಾನನ ಸಲುವಾಗಿ ನಾನು ಇದನ್ನು ಮಾಡುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಾನು ಹಿಂದಕ್ಕೆ ಕೊಡುತ್ತೇನೆ. ನೀನು ಯಾವಾಗಲೂ ನನ್ನ ಪಂಕ್ತಿಯಲ್ಲಿ ಊಟಮಾಡಬೇಕು” ಎಂದು ಹೇಳಿದನು.


ದಾವೀದನು ತನ್ನ ರಾಜ್ಯದಲ್ಲಿದ್ದ ಎಲ್ಲಾ ನಾಯಕರನ್ನು ಅಂದರೆ ಕುಲಪ್ರಧಾನರನ್ನು, ಪ್ರಧಾನಸೇನಾಧಿಪತಿಗಳನ್ನು, ಮಹಾಸೇನಾಧಿಪತಿಗಳನ್ನು ಮತ್ತು ಸೇನಾಧಿಪತಿಗಳನ್ನು, ರಾಜನಿಗೂ ಅವನ ಗಂಡುಮಕ್ಕಳಿಗೂ ಸೇರಿದ ಆಸ್ತಿಯನ್ನು ಮತ್ತು ಪಶುಗಳನ್ನು ನೋಡಿಕೊಳ್ಳುತ್ತಿದ್ದ ಅಧಿಕಾರಿಗಳನ್ನು; ರಾಜನ ಪ್ರಮುಖ ಅಧಿಕಾರಿಗಳನ್ನು; ಬಲಿಷ್ಠ ಯುದ್ಧವೀರರನ್ನು ಮತ್ತು ಧೈರ್ಯವಂತರಾದ ಸೈನಿಕರನ್ನು ಜೆರುಸಲೇಮಿಗೆ ಕರೆಸಿ ಸಭೆಸೇರಿಸಿದನು.


ಯೇಹು ಕಿಟಕಿಯ ಕಡೆ ಮೇಲೆ ನೋಡಿದನು. ಅವನು, “ನನ್ನ ಪಕ್ಷದಲ್ಲಿರುವವರು ಯಾರು? ಯಾರಿದ್ದೀರಿ?” ಎಂದನು. ಆ ಕಿಟಕಿಯಿಂದ ಇಬ್ಬರು ಮೂವರು ಕಂಚುಕಿಗಳು ಯೇಹುವಿನತ್ತ ನೋಡಿದರು.


ಆ ಪಶುವಿನ ಧಣಿ ಯಾರೆಂದು ನಿಮಗೆ ಗೊತ್ತಾಗದಿದ್ದರೆ ಅಥವಾ ಅವನು ನಿಮಗೆ ತುಂಬಾ ದೂರದಲ್ಲಿದ್ದರೆ ಅದರ ಧಣಿಯು ಅದನ್ನು ಹುಡುಕಿಕೊಂಡು ಬರುವ ತನಕ ನೀವು ಪಶುವನ್ನು ನಿಮ್ಮ ಮನೆಯಲ್ಲಿ ಇಟ್ಟುಕೊಳ್ಳಬೇಕು. ಅವನು ಬಂದಾಗ ಅದನ್ನು ಹಿಂದಿರುಗಿಸಬೇಕು.


ಮಿದ್ಯಾನಿನ ವ್ಯಾಪಾರಿಗಳು ಯೋಸೇಫನನ್ನು ಈಜಿಪ್ಟಿನಲ್ಲಿ ಮಾರಿದರು. ಅವರು ಅವನನ್ನು ಫರೋಹನ ಕಾವಲುಗಾರರಿಗೆ ನಾಯಕನಾಗಿದ್ದ ಪೋಟೀಫರನಿಗೆ ಮಾರಿದರು.


ಅಮ್ಮೋನಿಯರ ಅರಸನು ಯೆಫ್ತಾಹನ ದೂತರಿಗೆ, “ಇಸ್ರೇಲರು ಈಜಿಪ್ಟಿನಿಂದ ಬಂದಾಗ ನಮ್ಮ ಪ್ರದೇಶವನ್ನು ತೆಗೆದುಕೊಂಡರು; ಆದ್ದರಿಂದ ಈಗ ನಾವು ಇಸ್ರೇಲರೊಂದಿಗೆ ಯುದ್ಧ ಮಾಡುತ್ತಿದ್ದೇವೆ. ಅವರು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೂ ಜೋರ್ಡನ್ ನದಿಯವರೆಗಿನ ಭೂಮಿಯನ್ನೂ ತೆಗೆದುಕೊಂಡಿದ್ದಾರೆ. ಈಗ ನಮ್ಮ ಭೂಮಿಯನ್ನು ನಮಗೆ ಶಾಂತಿಯಿಂದ ಹಿಂದಿರುಗಿಸಬೇಕು” ಎಂದನು.


ಎಲೀಷನು ಸತ್ತಬಾಲಕನಿಗೆ ಮತ್ತೆ ಜೀವವನ್ನು ಬರುವಂತೆ ಮಾಡಿದ್ದರ ಬಗ್ಗೆ ಗೇಹಜಿಯು ರಾಜನಿಗೆ ಹೇಳುತ್ತಿದ್ದನು. ಎಲೀಷನು ಮರಳಿ ಜೀವಬರಿಸಿದ ಬಾಲಕನ ತಾಯಿಯು ಆ ಸಮಯದಲ್ಲಿ ರಾಜನ ಬಳಿಗೆ ಹೋದಳು. ತನ್ನ ಮನೆಯನ್ನು ಮತ್ತು ಭೂಮಿಯನ್ನು ತನಗೆ ಕೊಡಿಸಬೇಕೆಂದು ಕೇಳಿಕೊಳ್ಳಲು ಆಕೆ ಬಂದಿದ್ದಳು. ಗೇಹಜಿಯು, “ನನ್ನ ಒಡೆಯನೇ, ರಾಜನೇ, ಇವಳೇ ಆ ಸ್ತ್ರೀಯು! ಎಲೀಷನು ಮರಳಿ ಜೀವಬರಿಸಿದ ಬಾಲಕನು ಇವನೇ!” ಎಂದು ಹೇಳಿದನು.


ಎಲೀಷನು ದಮಸ್ಕಕ್ಕೆ ಹೋದನು. ಅರಾಮ್ಯರ ರಾಜನಾದ ಬೆನ್ಹದದನಿಗೆ ಕಾಯಿಲೆಯಾಗಿತ್ತು. ಬೆನ್ಹದದನಿಗೆ ಒಬ್ಬನು, “ದೇವಮನುಷ್ಯನು ಇಲ್ಲಿಗೆ ಬಂದಿದ್ದಾನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು