2 ಅರಸುಗಳು 8:7 - ಪರಿಶುದ್ದ ಬೈಬಲ್7 ಎಲೀಷನು ದಮಸ್ಕಕ್ಕೆ ಹೋದನು. ಅರಾಮ್ಯರ ರಾಜನಾದ ಬೆನ್ಹದದನಿಗೆ ಕಾಯಿಲೆಯಾಗಿತ್ತು. ಬೆನ್ಹದದನಿಗೆ ಒಬ್ಬನು, “ದೇವಮನುಷ್ಯನು ಇಲ್ಲಿಗೆ ಬಂದಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಒಮ್ಮೆ ಎಲೀಷನು ದಮಸ್ಕಕ್ಕೆ ಹೋದನು. ಆಗ ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. “ದೇವರ ಮನುಷ್ಯನು ಬಂದಿದ್ದಾನೆ” ಎಂಬ ವರ್ತಮಾನವನ್ನು ಅರಸನು ಕೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಒಮ್ಮೆ ಎಲೀಷನು ದಮಸ್ಕಕ್ಕೆ ಹೋದನು. ಆಗ ಸಿರಿಯಾದ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. ದೈವಪುರುಷ ಬಂದಿದ್ದಾನೆಂಬ ಸುದ್ದಿಯನ್ನು ಕೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಒಂದಾನೊಂದು ಸಮಯದಲ್ಲಿ ಎಲೀಷನು ದಮಸ್ಕಕ್ಕೆ ಹೋದನು. ಆಗ ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. ದೇವರ ಮನುಷ್ಯನು ಬಂದಿದ್ದಾನೆಂಬ ವರ್ತಮಾನವನ್ನು ಕೇಳಿ ಅವನು ಹಜಾಯೇಲನನ್ನು ಕರೆದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅರಾಮಿನ ಅರಸನಾದ ಬೆನ್ಹದದನು ಅಸ್ವಸ್ಥನಾಗಿರುವಾಗ ಎಲೀಷನು ದಮಸ್ಕಕ್ಕೆ ಬಂದನು. “ದೇವರ ಮನುಷ್ಯನು ಇಲ್ಲಿಗೆ ಬಂದಿದ್ದಾನೆ,” ಎಂದು ಅವನಿಗೆ ತಿಳಿಸಲಾಯಿತು. ಅಧ್ಯಾಯವನ್ನು ನೋಡಿ |
ಬೆನ್ಹದದನು ಅವನಿಗೆ, “ಅಹಾಬನೇ, ನನ್ನ ತಂದೆಯು ನಿನ್ನ ತಂದೆಯಿಂದ ವಶಪಡಿಸಿಕೊಂಡಿರುವ ಪಟ್ಟಣಗಳನ್ನು ನಿನಗೇ ಬಿಟ್ಟುಬಿಡುತ್ತೇನೆ. ನನ್ನ ತಂದೆಯು ಸಮಾರ್ಯದಲ್ಲಿ ಮಾಡಿದಂತೆ ನೀನೂ ದಮಸ್ಕದಲ್ಲಿ ಅಂಗಡಿಗಳನ್ನು ಹಾಕಬಹುದು” ಎಂದನು. ಅಹಾಬನು, “ನೀನು ಇದಕ್ಕೆ ಒಪ್ಪಿಕೊಂಡರೆ, ನಾನು ನಿನ್ನನ್ನು ಸ್ವತಂತ್ರವಾಗಿ ಹೋಗಲು ಬಿಡುತ್ತೇನೆ” ಎಂದನು. ಆ ಇಬ್ಬರು ರಾಜರುಗಳು ಶಾಂತಿಸಂಧಾನವನ್ನು ಮಾಡಿಕೊಂಡರು. ರಾಜನಾದ ಅಹಾಬನು ಬೆನ್ಹದದನಿಗೆ ಸ್ವತಂತ್ರವನ್ನು ಕೊಟ್ಟು ಕಳುಹಿಸಿದನು.
ಯಾರೋ ಒಬ್ಬರು, “ಸಂಸೋನನು ಇಲ್ಲಿಗೆ ಬಂದಿದ್ದಾನೆ” ಎಂದು ಗಾಜಾದ ಜನರಿಗೆ ಹೇಳಿದರು. ಅವರು ಅವನನ್ನು ಕೊಲ್ಲಬೇಕೆಂದಿದ್ದರು. ಅದಕ್ಕಾಗಿ ಅವರು ಆ ಸ್ಥಳವನ್ನು ಸುತ್ತುಗಟ್ಟಿದರು. ನಗರದ ಬಾಗಿಲುಗಳನ್ನು ಭದ್ರಪಡಿಸಿ ಅಡಗಿಕೊಂಡು ಸಂಸೋನನ ದಾರಿಕಾಯ್ದರು. ಇಡೀರಾತ್ರಿ ಅವರು ನಗರದ ಬಾಗಿಲಲ್ಲಿ ಸುಮ್ಮನಿದ್ದರು. “ಬೆಳಗಾದ ಮೇಲೆ ನಾವು ಸಂಸೋನನನ್ನು ಕೊಲ್ಲೋಣ” ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.