2 ಅರಸುಗಳು 8:8 - ಪರಿಶುದ್ದ ಬೈಬಲ್8 ಆಗ ರಾಜನಾದ ಬೆನ್ಹದದನು ಹಜಾಯೇಲನಿಗೆ, “ದೇವಮನುಷ್ಯನನ್ನು ಕಾಣಲು ಒಂದು ಕಾಣಿಕೆಯನ್ನು ತೆಗೆದುಕೊಂಡು ಹೋಗು. ನಾನು ನನ್ನ ಕಾಯಿಲೆಯಿಂದ ಗುಣವಾಗುತ್ತೇನೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಲು ಅವನು ಯೆಹೋವನಲ್ಲಿ ಪ್ರಾರ್ಥಿಸಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅರಸನು ಹಜಾಯೇಲನಿಗೆ, “ನೀನು ಕಾಣಿಕೆಯನ್ನು ತೆಗೆದುಕೊಂಡು ದೇವರ ಮನುಷ್ಯನ ಬಳಿಗೆ ಹೋಗಿ ನನಗೆ ವಾಸಿಯಾಗುವುದೋ? ಇಲ್ಲವೋ ಎಂಬುದನ್ನು ಅವನ ಮುಖಾಂತರವಾಗಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವನು ಹಜಾಯೇಲನನ್ನು ಕರೆದು, “ನೀನು ಕಾಣಿಕೆಯನ್ನು ತೆಗೆದುಕೊಂಡು ದೈವಪುರುಷನ ಬಳಿಗೆ ಹೋಗಿ ನನಗೆ ಗುಣ ಆಗುವುದೋ ಇಲ್ಲವೋ ಎಂಬುದನ್ನು ಅವನ ಮುಖಾಂತರ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸು,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವನಿಗೆ - ನೀನು ಕಾಣಿಕೆಯನ್ನು ತೆಗೆದುಕೊಂಡು ದೇವರ ಮನುಷ್ಯನ ಬಳಿಗೆ ಹೋಗಿ ನನಗೆ ವಾಸಿಯಾಗುವದೋ ಇಲ್ಲವೋ ಎಂಬದನ್ನು ಅವನ ಮುಖಾಂತರವಾಗಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸು ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಅರಸನು ಹಜಾಯೇಲನಿಗೆ, “ನೀನು ಕೈಯಲ್ಲಿ ಕಾಣಿಕೆಯನ್ನು ತೆಗೆದುಕೊಂಡುಹೋಗಿ ದೇವರ ಮನುಷ್ಯನನ್ನು ಎದುರುಗೊಂಡು, ಈ ವ್ಯಾಧಿಯಿಂದ ನಾನು ಗುಣವಾಗುವೆನೋ? ಎಂದು ಅವನಿಂದ ಯೆಹೋವ ದೇವರನ್ನು ವಿಚಾರಿಸು,” ಎಂದನು. ಅಧ್ಯಾಯವನ್ನು ನೋಡಿ |
ಸಂದೇಶಕರು ಅಹಜ್ಯನಿಗೆ, “ಒಬ್ಬನು ನಮ್ಮನ್ನು ಭೇಟಿಯಾಗಿ ನಿಮ್ಮನ್ನು ಕಳುಹಿಸಿದ ರಾಜನ ಬಳಿಗೆ ಹಿಂದಿರುಗಿ ಹೋಗಿ ಯೆಹೋವನು ಹೇಳುವುದನ್ನು ಅವನಿಗೆ ತಿಳಿಸಿ. ಯೆಹೋವನು ಹೇಳುವುದೇನೆಂದರೆ: ‘ಇಸ್ರೇಲಿನಲ್ಲಿ ಒಬ್ಬ ದೇವರಿದ್ದಾನೆ! ಹೀಗಿರುವಾಗ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಸಂದೇಶಕರನ್ನು ಕಳುಹಿಸಿದುದೇಕೆ? ನೀನು ಈ ಕಾರ್ಯವನ್ನು ಮಾಡಿದ್ದರಿಂದ ನಿನ್ನ ಹಾಸಿಗೆಯಿಂದ ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ!’” ಎಂಬುದಾಗಿ ಹೇಳಿದರು.