Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:9 - ಪರಿಶುದ್ದ ಬೈಬಲ್‌

9 ಹಜಾಯೇಲನು ತನ್ನೊಡನೆ ಕಾಣಿಕೆಯನ್ನು ತೆಗೆದುಕೊಂಡು ಎಲೀಷನನ್ನು ಭೇಟಿಮಾಡಲು ಹೋದನು. ಅವನು ದಮಸ್ಕದಿಂದ ಎಲ್ಲಾ ವಿಧವಾದ ಉತ್ತಮ ವಸ್ತುಗಳನ್ನು ನಲವತ್ತು ಒಂಟೆಗಳ ಮೇಲೆ ಹೇರಿಸಿಕೊಂಡು ಹೋದನು. ಹಜಾಯೇಲನು ಎಲೀಷನ ಬಳಿಗೆ ಹೋಗಿ, “ನಿನ್ನ ಹಿಂಬಾಲಕನೂ ಅರಾಮ್ಯರ ರಾಜನೂ ಆದ ಬೆನ್ಹದದನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು. ತನ್ನ ಕಾಯಿಲೆಯು ವಾಸಿಯಾಗುತ್ತದೆಯೇ ಇಲ್ಲವೇ ಎಂಬುದನ್ನು ಅವನು ನಿನ್ನಿಂದ ತಿಳಿದುಕೊಳ್ಳಬೇಕೆಂದಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹಜಾಯೇಲನು ದಮಸ್ಕದ ಶ್ರೇಷ್ಠ ವಸ್ತುಗಳಲ್ಲಿ ನಲವತ್ತು ಒಂಟೆಗಳು ಹೊರುವಷ್ಟು ಕಾಣಿಕೆಗಳನ್ನು ತೆಗೆದುಕೊಂಡು ಎಲೀಷನ ಬಳಿಗೆ ಹೋಗಿ ಅವನ ಮುಂದೆ ನಿಂತು, “ನಿನ್ನ ಮಗನೂ ಅರಾಮ್ಯರ ಅರಸನೂ ಆದ ಬೆನ್ಹದದನು ತನಗೆ ಸ್ವಸ್ಥವಾಗುವದೋ, ಇಲ್ಲವೋ ಎಂಬುದನ್ನು ವಿಚಾರಿಸುವುದಕ್ಕಾಗಿ ನನ್ನನ್ನು ನಿನ್ನ ಬಳಿ ಕಳುಹಿಸಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹಜಾಯೇಲನು ದಮಸ್ಕದ ಶ್ರೇಷ್ಠವಸ್ತುಗಳಲ್ಲಿ, ನಾಲ್ವತ್ತು ಒಂಟೆಗಳು ಹೊರುವಷ್ಟನ್ನು ತೆಗೆದುಕೊಂಡು, ಎಲೀಷನ ಬಳಿಗೆ ಹೋಗಿ ಅವನ ಮುಂದೆ ನಿಂತು, “ನಿಮ್ಮ ಕುಮಾರ, ಸಿರಿಯಾದವರ ಅರಸನಾದ ಬೆನ್ಹದದರು, ತಮಗೆ ಗುಣವಾಗುವುದೋ ಇಲ್ಲವೋ ಎಂಬುದನ್ನು ವಿಚಾರಿಸುವುದಕ್ಕಾಗಿ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹಜಾಯೇಲನು ದಮಸ್ಕದ ಶ್ರೇಷ್ಠವಸ್ತುಗಳಲ್ಲಿ ನಾಲ್ವತ್ತು ಒಂಟೆಗಳು ಹೊರುವಷ್ಟನ್ನು ತೆಗೆದುಕೊಂಡು ಎಲೀಷನ ಬಳಿಗೆ ಹೋಗಿ ಅವನ ಮುಂದೆ ನಿಂತು - ನಿನ್ನ ಮಗನೂ ಅರಾಮ್ಯರ ಅರಸನೂ ಆದ ಬೆನ್ಹದದನು ತನಗೆ ಸ್ವಸ್ಥವಾಗುವದೋ ಇಲ್ಲವೋ ಎಂಬದನ್ನು ವಿಚಾರಿಸುವದಕ್ಕಾಗಿ ನನ್ನನ್ನು ನಿನ್ನ ಹತ್ತಿರ ಕಳುಹಿಸಿದ್ದಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಹಜಾಯೇಲನು ದಮಸ್ಕದಲ್ಲಿರುವ ಸಕಲ ಉತ್ತಮವಾದವುಗಳಲ್ಲಿ ನಲವತ್ತು ಒಂಟೆಗಳು ಹೊರುವಷ್ಟು ಕಾಣಿಕೆಗಳನ್ನು ತೆಗೆದುಕೊಂಡು, ಎಲೀಷನನ್ನು ಎದುರುಗೊಳ್ಳಲು ಹೋಗಿ, ಅವನ ಮುಂದೆ ಬಂದು ನಿಂತು, “ಅರಾಮಿನ ಅರಸನಾಗಿರುವ ನಿನ್ನ ಮಗ ಬೆನ್ಹದದನು, ‘ಈ ವ್ಯಾಧಿಯಿಂದ ಬದುಕುವೆನೋ?’ ಎಂದು ಕೇಳಲು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:9
13 ತಿಳಿವುಗಳ ಹೋಲಿಕೆ  

ಆದರೆ ಈ ವಿಷಯದಲ್ಲಿ ನಿನ್ನ ಒಪ್ಪಿಗೆ ಪಡೆಯದೆ ನಿರ್ಧಾರ ತೆಗೆದುಕೊಳ್ಳಲು ನನಗೆ ಇಷ್ಟವಿಲ್ಲ. ಏಕೆಂದರೆ ನೀನು ಮಾಡುವ ಒಳ್ಳೆಕಾರ್ಯವು ಮನಃ ಪೂರ್ವಕವಾಗಿರಬೇಕೇ ಹೊರತು ಬಲತ್ಕಾರದಿಂದಾಗಕೂಡದು.


ಅಹಾಜನು ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಆ ಸಂದೇಶವೇನೆಂದರೆ: “ನಾನು ನಿನ್ನ ಸೇವಕ. ನಾನು ನಿನಗೆ ಮಗನಂತಿದ್ದೇನೆ. ನೀನು ಬಂದು, ಅರಾಮ್ಯರ ರಾಜನಿಂದ ಮತ್ತು ಇಸ್ರೇಲಿನ ರಾಜನಿಂದ ನನ್ನನ್ನು ರಕ್ಷಿಸು. ಅವರು ನನ್ನ ವಿರುದ್ಧ ಯುದ್ಧಕ್ಕೆ ಬಂದಿದ್ದಾರೆ.”


ಎಲೀಷನು ಕಾಯಿಲೆ ಬಿದ್ದನು. ತರುವಾಯ, ಈ ಕಾಯಿಲೆಯಿಂದ ಎಲೀಷನು ಸತ್ತುಹೋದನು. ಇಸ್ರೇಲಿನ ರಾಜನಾದ ಯೋವಾಷನು ಎಲೀಷನ ಬಳಿಗೆ ಹೋದನು. ಯೋವಾಷನು ಎಲೀಷನಿಗಾಗಿ ಗೋಳಾಡಿದನು. ಯೋವಾಷನು, “ನನ್ನ ತಂದೆಯೇ, ನನ್ನ ತಂದೆಯೇ, ದೇವರು ಬಂದು ನಿನ್ನನ್ನು ತೆಗೆದುಕೊಂಡು ಹೋಗಲು ಇದು ಸಕಾಲವೇ?” ಎಂದು ಹೇಳಿದನು.


ಅರಾಮ್ಯರ ಸೇನೆಯನ್ನು ಇಸ್ರೇಲಿನ ರಾಜನು ನೋಡಿ ಎಲೀಷನಿಗೆ, “ನನ್ನ ತಂದೆಯೇ, ನಾನು ಅವರನ್ನು ಕೊಲ್ಲಲೇ? ಅವರನ್ನು ಕೊಂದುಹಾಕಿಬಿಡಲೇ?” ಎಂದು ಕೇಳಿದನು.


ಆಗ ನಾಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ, “ತಂದೆಯೇ, ಪ್ರವಾದಿಯು ಒಂದು ಕಠಿಣವಾದ ಕಾರ್ಯವನ್ನು ಹೇಳಿದ್ದರೆ, ನೀವು ಅದನ್ನು ಮಾಡುತ್ತಿದ್ದಿರಿ! ಅಲ್ಲವೇ? ಹೀಗಿರಲು ಸುಲಭವಾದ ಒಂದು ಕಾರ್ಯವನ್ನು ಅವನು ನಿಮಗೆ ಹೇಳಿರುವಾಗ ನೀವು ಅವನಿಗೆ ವಿಧೇಯರಾಗಬಾರದೇಕೆ? ನೀವು ಸ್ನಾನಮಾಡಿದರೆ, ಶುಚಿಗೊಂಡು ಶುದ್ಧರಾಗುವಿರಿ” ಎಂದು ಹೇಳಿದರು.


ಆಗ ಅರಾಮ್ಯರ ರಾಜನು, “ಈಗಲೇ ಹೋಗು, ನಾನು ಇಸ್ರೇಲಿನ ರಾಜನಿಗೆ ಪತ್ರವೊಂದನ್ನು ಕಳುಹಿಸುತ್ತೇನೆ” ಎಂದು ಹೇಳಿದನು. ನಾಮಾನನು ಇಸ್ರೇಲಿಗೆ ಹೋದನು. ನಾಮಾನನು ಮುನ್ನೂರ ನಲವತ್ತು ಕಿಲೋಗ್ರಾಂ ಬೆಳ್ಳಿ, ಆರುಸಾವಿರ ಚಿನ್ನದ ನಾಣ್ಯಗಳನ್ನು ಮತ್ತು ಹತ್ತು ಥಾನು ಬಟ್ಟೆಗಳನ್ನು ಕಾಣಿಕೆಯಾಗಿ ತೆಗೆದುಕೊಂಡು ಹೋದನು.


ಯೆಹೋವನು, “ನೀನು ಬಂದ ದಾರಿಯಿಂದ ಹಿಂತಿರುಗಿ ದಮಸ್ಕದ ಅರಣ್ಯಕ್ಕೆ ಹೋಗು. ಅಲ್ಲಿಂದ ದಮಸ್ಕಕ್ಕೆ ಹೋಗಿ, ಹಜಾಯೇಲನನ್ನು ಅರಾಮ್ಯರ ರಾಜನನ್ನಾಗಿ ಅಭಿಷೇಕಿಸು.


ನಿನ್ನ ಸೇವಕರನ್ನು ಕೇಳು, ಇದು ನಿಜವೆಂಬುದನ್ನು ಅವರು ನಿನಗೆ ತಿಳಿಸುತ್ತಾರೆ. ನನ್ನ ಯುವಕರ ಬಗ್ಗೆ ದಯವಿಟ್ಟು ದಯಾಳುವಾಗಿರು. ಈ ಶುಭಸಂದರ್ಭದಲ್ಲಿ ನಾವು ನಿಮ್ಮ ಹತ್ತಿರಕ್ಕೆ ಬರುತ್ತೇವೆ. ಸ್ನೇಹಿತನಾದ ದಾವೀದನಿಗಾಗಿ ನಿನಗೆ ಸಾಧ್ಯವಿದ್ದಷ್ಟನ್ನು ದಯವಿಟ್ಟು ಈ ಯುವಕರಿಗೆ ಕೊಡು” ಎಂದು ಹೇಳಿ ಕಳುಹಿಸಿದನು.


ಸೌಲನು ತನ್ನ ಸೇವಕನಿಗೆ, “ನಾವು ಪಟ್ಟಣದೊಳಗೆ ಹೋಗೋಣ, ಆದರೆ ಆ ಮನುಷ್ಯನಿಗೆ ಕೊಡಲು ನಮ್ಮಲ್ಲಿ ಏನೂ ಇಲ್ಲ. ನಮ್ಮ ಚೀಲದಲ್ಲಿದ್ದ ಆಹಾರವೆಲ್ಲ ಮುಗಿದಿದೆ. ಆ ದೇವರ ಮನುಷ್ಯನಿಗೆ ನೀಡಲು ನಮ್ಮಲ್ಲಿ ಕಾಣಿಕೆಯೂ ಇಲ್ಲ. ಹೀಗಾಗಿ ನಾವು ಅವನಿಗೆ ಏನು ಕೊಡಬೇಕು?” ಎಂದು ಕೇಳಿದನು.


ಆದ್ದರಿಂದ ಆಸನು ಯೆಹೋವನ ಆಲಯದ ಮತ್ತು ರಾಜನ ಅರಮನೆಯ ಭಂಡಾರದಲ್ಲಿ ಉಳಿದಿದ್ದ ಎಲ್ಲಾ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡನು. ಅವನು ತನ್ನ ಸೇವಕರಿಗೆ ಬೆಳ್ಳಿಬಂಗಾರಗಳನ್ನು ಕೊಟ್ಟು, ಅವರನ್ನು ಅರಾಮ್ಯರ ರಾಜನಾದ ಬೆನ್ಹದದನ ಬಳಿಗೆ ಕಳುಹಿಸಿದನು. (ಬೆನ್ಹದದನು ಟಬ್ರಿಮ್ಮೋನನ ಮಗ. ಟಬ್ರಿಮ್ಮೋನನು ಹಜ್ಯೋನನ ಮಗ.) ದಮಸ್ಕ ನಗರವು ಅವನ ರಾಜಧಾನಿಯಾಗಿತ್ತು.


ಪ್ರವಾದಿಗೆ ಹತ್ತು ರೊಟ್ಟಿಗಳನ್ನು, ಕೆಲವು ಸಿಹಿ ಪದಾರ್ಥಗಳನ್ನು ಮತ್ತು ಜೇನುತುಪ್ಪ ಜಾಡಿಯನ್ನು ಕೊಡು. ನಂತರ ನಮ್ಮ ಮಗನಿಗೆ ಏನಾಗುತ್ತದೆಂಬುದನ್ನು ಕೇಳು. ಪ್ರವಾದಿಯಾದ ಅಹೀಯನು ನಿನಗೆ ತಿಳಿಸುತ್ತಾನೆ” ಎಂದು ಹೇಳಿದನು.


ಒಂದು ದಿನ, ಅಹಜ್ಯನು ಸಮಾರ್ಯದ ತನ್ನ ಮನೆಯ ಮಾಳಿಗೆಯ ಮೇಲಿದ್ದನು. ಅಹಜ್ಯನು ಮನೆಯ ಮೇಲಿನ ಮರದ ಕಂಬಗಳ ಮೂಲಕ ಕೆಳಕ್ಕೆ ಬಿದ್ದನು. ಅವನಿಗೆ ಬಹಳ ಗಾಯಗಳಾದವು. ಅಹಜ್ಯನು ಸಂದೇಶಕರನ್ನು ಕರೆದು ಅವರಿಗೆ, “ಎಕ್ರೋನಿನ ದೇವರಾದ ಬಾಳ್ಜೆಬೂಬನ ಅರ್ಚಕರ ಬಳಿಗೆ ಹೋಗಿ, ನನ್ನ ಗಾಯಗಳು ಗುಣವಾಗುತ್ತವೆಯೇ ಎಂಬುದನ್ನು ಅವರಿಂದ ತಿಳಿದುಕೊಳ್ಳಿ” ಎಂದು ಹೇಳಿದನು.


ಹುಡುಕುವ ಸಮಯ, ಹುಡುಕದಿರುವ ಸಮಯ. ವಸ್ತುಗಳನ್ನು ಇಟ್ಟುಕೊಳ್ಳುವ ಸಮಯ, ವಸ್ತುಗಳನ್ನು ಬಿಸಾಡುವ ಸಮಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು