1 ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಂಡಳಿಯಲ್ಲಿ ಒಬ್ಬನನ್ನು ಕರೆದು ಅವನಿಗೆ, “ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನ ರಾಮೋತಿಗೆ ಹೋಗು.
ಸಮುವೇಲನು ವಿಶೇಷವಾದ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ಸೌಲನ ತಲೆಯ ಮೇಲೆ ಆ ಎಣ್ಣೆಯನ್ನು ಸುರಿದನು. ಸಮುವೇಲನು ಸೌಲನಿಗೆ ಮುದ್ದಿಟ್ಟು, “ಯೆಹೋವನು ತನ್ನ ಜನರನ್ನು ಮುಂದೆ ನಡೆಸಲು ನಿನ್ನನ್ನು ಅವರಿಗೆ ನಾಯಕನನ್ನಾಗಿ ಅಭಿಷೇಕಿಸಿದ್ದಾನೆ. ನೀನು ಯೆಹೋವನ ಜನರನ್ನು ಆಳುವೆ; ಅವರನ್ನು ಸುತ್ತುವರೆದಿರುವ ಶತ್ರುಗಳಿಂದ ರಕ್ಷಿಸುವೆ. ಯೆಹೋವನು ತನ್ನ ಜನರನ್ನು ಆಳುವುದಕ್ಕಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. ಇದು ನಿಜವೆಂಬುದಕ್ಕೆ ಸಾಕ್ಷಿಯೇನೆಂದರೆ:
ಎಲೀಷನು ಗೇಹಜಿಗೆ, “ಹೊರಡಲು ಸಿದ್ಧನಾಗು. ನನ್ನ ಕೋಲನ್ನು ತೆಗೆದುಕೊಂಡು ಹೋಗು. ಯಾರ ಹತ್ತಿರವಾಗಲಿ ಮಾತನಾಡಲು ನಿಲ್ಲದಿರು! ನೀನು ಯಾರನ್ನಾದರೂ ಸಂಧಿಸಿದರೆ ಅವನಿಗೆ, ‘ಕ್ಷೇಮವಾಗಿರುವೆಯಾ?’ ಎಂದು ಕೇಳದಿರು. ಯಾರಾದರೂ ನಿನ್ನನ್ನು ‘ಕ್ಷೇಮವಾಗಿರುವೆಯಾ?’ ಎಂದು ಕೇಳಿದರೆ, ಅವನಿಗೆ ಉತ್ತರಿಸದಿರು. ಹೀಗೆ ನೀನು ಹೋಗಿ, ನನ್ನ ಕೋಲನ್ನು ಮಗುವಿನ ಮುಖದ ಮೇಲೆ ಇಡು” ಎಂದು ಹೇಳಿದನು.
ಯಾಜಕನಾದ ಚಾದೋಕನು ಪವಿತ್ರಗುಡಾರದಿಂದ ಎಣ್ಣೆಯನ್ನು ತೆಗೆದುಕೊಂಡು ಬಂದನು. ಸೊಲೊಮೋನನು ರಾಜನೆಂದು ತೋರಿಸಲು ಅವನ ತಲೆಯ ಮೇಲೆ ಚಾದೋಕನು ಎಣ್ಣೆಯನ್ನು ಸುರಿದನು. ದಾವೀದನ ಜನರು ತುತ್ತೂರಿಯನ್ನು ಊದಿದರು. ಆಗ ಎಲ್ಲಾ ಜನರೂ, “ರಾಜನಾದ ಸೊಲೊಮೋನನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು.
ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.
ಆದ್ದರಿಂದ ನೀವು ನಿಮ್ಮ ಮನಸ್ಸುಗಳನ್ನು ಸೇವೆಗಾಗಿ ಸಿದ್ಧಪಡಿಸಿರಿ. ಅಲ್ಲದೆ ನಿಮ್ಮನ್ನು ಹತೋಟಿಯಲ್ಲಿಟ್ಟುಕೊಂಡಿರಿ. ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರೆಯುವ ಕೃಪಾವರದ ಮೇಲೆಯೇ ನಿಮ್ಮ ನಿರೀಕ್ಷೆಯೆಲ್ಲಾ ಇರಬೇಕು.
ಬೇತೇಲಿನಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನ ಬಳಿಗೆ ಬಂದು, ಅವನಿಗೆ, “ಯೆಹೋವನು ಈ ದಿನ ನಿನ್ನ ಒಡೆಯನನ್ನು ನಿನ್ನಿಂದ ತೆಗೆದುಕೊಳ್ಳುತ್ತಾನೆಂಬುದು ನಿನಗೆ ತಿಳಿದಿದೆಯೇ?” ಎಂದು ಕೇಳಿದರು. ಎಲೀಷನು, “ಹೌದು, ನನಗೆ ಅದು ತಿಳಿದಿದೆ. ಅದರ ಬಗ್ಗೆ ಮಾತನಾಡಬೇಡಿ” ಎಂದನು.
“ಇಸ್ರೇಲರೇ, ಈಗ ನಾನು ಉಪದೇಶಿಸಲಿರುವ ಕಟ್ಟಳೆಗಳಿಗೂ ಆಜ್ಞೆಗಳಿಗೂ ಕಿವಿಗೊಡಿರಿ. ನೀವು ಅವುಗಳಿಗೆ ವಿಧೇಯರಾದರೆ ಜೀವಿಸುವಿರಿ. ಆಗ ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವಿರಿ.
“ಯೆರೆಮೀಯನೇ, ಸಿದ್ಧನಾಗು! ಎದ್ದುನಿಲ್ಲು! ನಾನು ಹೇಳಿದ್ದೆಲ್ಲವನ್ನು ಜನರಿಗೆ ಹೇಳು. ಅವರಿಗೆ ಹೆದರಬೇಡ. ನೀನು ಅವರಿಗೆ ಹೆದರಿಕೊಂಡರೆ, ನಾನು ನಿನ್ನನ್ನು ಅವರೆದುರಿನಲ್ಲಿ ಹೆದರಿಸುವೆನು.
ಯೆಹೋವನು ಅವರಿಗೆ, ‘ನಿಮ್ಮಲ್ಲಿ ಯಾರಾದರೂ ರಾಜನಾದ ಅಹಾಬನನ್ನು ಪ್ರೇರೇಪಿಸುವಿರಾ? ಅವನು ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ರಾಮೋತಿಗೆ ಹೋಗಬೇಕೆಂದು ನಾನು ಅಪೇಕ್ಷೆಪಟ್ಟಿದ್ದೇನೆ. ಅಲ್ಲಿ ಅವನು ಕೊಲ್ಲಲ್ಪಡುವನು’ ಎಂದು ಹೇಳಿದನು. ತಾವು ಏನು ಮಾಡಬೇಕೆಂಬುದರ ಬಗ್ಗೆ ದೂತರಲ್ಲಿ ಒಮ್ಮತದ ಅಭಿಪ್ರಾಯವುಂಟಾಗಲಿಲ್ಲ.
ಆದ್ದರಿಂದ ಅಹಾಬನು ರಾಜನಾದ ಯೆಹೋಷಾಫಾಟನನ್ನು, “ಅರಾಮ್ಯರ ವಿರುದ್ಧವಾಗಿ ರಾಮೋತಿನಲ್ಲಿ ಹೋರಾಟ ಮಾಡುವುದಕ್ಕೆ ನೀನು ನಮ್ಮೊಂದಿಗೆ ಸೇರಿಕೊಳ್ಳುವೆಯಾ?” ಎಂದು ಕೇಳಿದನು. ಯೆಹೋಷಾಫಾಟನು, “ಆಗಲಿ, ನಾನು ನಿನ್ನ ಜೊತೆ ಸೇರಿಕೊಳ್ಳುತ್ತೇನೆ. ನನ್ನ ಸೈನ್ಯಗಳು ಮತ್ತು ನನ್ನ ಕುದುರೆಗಳು ನಿನ್ನ ಸೈನ್ಯದ ಜೊತೆ ಸೇರಲು ಸಿದ್ಧವಾಗಿವೆ.
ಪ್ರವಾದಿಗಳಲ್ಲಿ ಒಬ್ಬನು ಮತ್ತೊಬ್ಬ ಪ್ರವಾದಿಗೆ, “ನನ್ನನ್ನು ಹೊಡಿ” ಎಂದು ಹೇಳಿದನು. ಹೀಗೆ ಹೇಳುವಂತೆ ಯೆಹೋವನೇ ಅವನಿಗೆ ಆಜ್ಞಾಪಿಸಿದ್ದನು. ಆದರೆ ಇನ್ನೊಬ್ಬ ಪ್ರವಾದಿಯು ಅವನನ್ನು ಹೊಡೆಯಲಿಲ್ಲ.
ಯೆಹೋವನ ಶಕ್ತಿಯು ಎಲೀಯನ ಮೇಲೆ ಬಂದಿತು. ಎಲೀಯನು ಓಡುವುದಕ್ಕಾಗಿ ತನ್ನ ಬಟ್ಟೆಗಳನ್ನು ತನ್ನ ಸುತ್ತಲೂ ಬಿಗಿದುಕೊಂಡನು. ನಂತರ ಎಲೀಯನು ರಾಜನಾದ ಅಹಾಬನಿಗಿಂತ ಮುಂಚೆ ಇಜ್ರೇಲಿನ ದಾರಿಯುದ್ದಕ್ಕೂ ಓಡುತ್ತಲೇ ಹೋದನು.
ಒಂದು ದಿನ ಪ್ರವಾದಿಮಂಡಲಿಯವರಲ್ಲೊಬ್ಬನ ಪತ್ನಿಯು ಗೋಳಾಡುತ್ತಾ ಎಲೀಷನಲ್ಲಿಗೆ ಹೋಗಿ, “ನನ್ನ ಗಂಡನು ನಿನಗೆ ಸೇವಕನಂತಿದ್ದನು. ಈಗ ನನ್ನ ಗಂಡ ಸತ್ತಿದ್ದಾನೆ! ಅವನು ಯೆಹೋವನಲ್ಲಿ ಭಯಭಕ್ತಿ ಉಳ್ಳವನಾಗಿದ್ದದು ನಿನಗೆ ತಿಳಿದಿದೆ. ಆದರೆ ಅವನು ಒಬ್ಬ ಮನುಷ್ಯನಿಗೆ ಹಣವನ್ನು ಕೊಡಬೇಕಾಗಿದೆ. ಈಗ ಆ ಮನುಷ್ಯನು ನನ್ನ ಎರಡು ಗಂಡುಮಕ್ಕಳನ್ನು ತೆಗೆದುಕೊಂಡು ತನ್ನ ಗುಲಾಮರನ್ನಾಗಿ ಮಾಡಿಕೊಳ್ಳಲು ಬರುತ್ತಿದ್ದಾನೆ!” ಎಂದು ಹೇಳಿದಳು.
ಜೆರಿಕೊದಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನ ಬಳಿಗೆ ಬಂದು ಅವನಿಗೆ, “ಯೆಹೋವನು ಈ ದಿನ ನಿನ್ನ ಒಡೆಯನನ್ನು ನಿನ್ನಿಂದ ತೆಗೆದುಕೊಳ್ಳುತ್ತಾನೆಂಬುದು ನಿನಗೆ ತಿಳಿದಿದೆಯೇ?” ಎಂದು ಕೇಳಿದರು. ಎಲೀಷನು, “ಹೌದು, ನನಗೆ ಅದು ತಿಳಿದಿದೆ. ಅದರ ಬಗ್ಗೆ ಮಾತನಾಡಬೇಡಿ” ಎಂದನು.
ಅವರನ್ನು ಹಿಂಬಾಲಿಸಿಕೊಂಡು ಬಂದ ಪ್ರವಾದಿಗಳ ಗುಂಪಿನಲ್ಲಿ ಐವತ್ತು ಮಂದಿ ಅಲ್ಲಿದ್ದರು. ಎಲೀಯ ಮತ್ತು ಎಲೀಷರು ಜೋರ್ಡನ್ ನದಿಯ ಹತ್ತಿರ ನಿಂತುಕೊಂಡರು. ಆ ಐವತ್ತು ಮಂದಿ ಜನರು ಎಲೀಯ ಮತ್ತು ಎಲೀಷರಿಗಿಂತ ಬಹುದೂರದಲ್ಲಿ ನಿಂತುಕೊಂಡರು.
ಜೆರಿಕೊದಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನನ್ನು ಕಂಡು, “ಎಲೀಯನ ಆತ್ಮವು ಈಗ ಎಲೀಷನ ಮೇಲಿದೆ!” ಎಂದು ಹೇಳಿ ಎಲೀಷನನ್ನು ಭೇಟಿಮಾಡಲು ಬಂದರು. ಅವರು ಎಲೀಷನಿಗೆ ಸಾಷ್ಟಾಂಗನಮಸ್ಕಾರ ಮಾಡಿದರು.
ಜೆರುಸಲೇಮಿನ ಜನರು ಯೆಹೋರಾಮನ ಕೊನೆಯ ಮಗನಾದ ಅಹಜ್ಯನನ್ನು ತಮ್ಮ ರಾಜನನ್ನಾಗಿ ಆರಿಸಿಕೊಂಡರು. ಯೆಹೋರಾಮನೊಂದಿಗೆ ಯುದ್ಧಕ್ಕೆ ಬಂದಿದ್ದ ಅರಬ್ಬಿಯರು ಅವನ ಮಕ್ಕಳನ್ನೆಲ್ಲಾ ಕೊಂದಿದ್ದರು. ಹೀಗಾಗಿ ಉಳಿದುಕೊಂಡಿದ್ದ ಅಹಜ್ಯನು ಜೆರುಸಲೇಮಿನಲ್ಲಿ ಯೆಹೂದ ರಾಜ್ಯವನ್ನು ಆಳತೊಡಗಿದನು.