2 ಅರಸುಗಳು 9:11 - ಪರಿಶುದ್ದ ಬೈಬಲ್11 ಯೇಹುವು ತನ್ನ ರಾಜನ ಅಧಿಕಾರಿಗಳ ಬಳಿಗೆ ಹಿಂದಿರುಗಿದನು. ಒಬ್ಬ ಅಧಿಕಾರಿಯು ಯೇಹುವಿಗೆ, “ಶುಭವಾರ್ತೆಯೇ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಯೇಹುವು ಸೇವಕರಿಗೆ, “ನೀವು ಆ ಮನುಷ್ಯನನ್ನು ಬಲ್ಲವರಾಗಿದ್ದೀರಿ; ಅವನ ಹುಚ್ಚಾಟದ ಮಾತುಗಳೂ ನಿಮಗೆ ತಿಳಿದಿವೆ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೇಹುವು ತಿರುಗಿ ತನ್ನ ಒಡೆಯನ ಸೇವಕರ ಹತ್ತಿರ ಬರಲು ಅವರು ಅವನನ್ನು, “ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಅದಕ್ಕೆ ಯೇಹುವು, “ಆ ಮನುಷ್ಯನು ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೇ ಗೊತ್ತಿದೆಯಲ್ಲಾ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಯೇಹುವು ಮರಳಿ ತನ್ನ ಒಡೆಯನ ಸೇವಕರ ಹತ್ತಿರ ಬಂದನು. ಅವರು ಅವನನ್ನು, “ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಅದಕ್ಕೆ ಅವನು, “ಆ ಮನುಷ್ಯ ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೆ ಗೊತ್ತಲ್ಲವೆ?” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೇಹುವು ತಿರಿಗಿ ತನ್ನ ಒಡೆಯನ ಸೇವಕರ ಹತ್ತಿರ ಬರಲು ಅವರು ಅವನನ್ನು - ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ ಎಂದು ಕೇಳಿದರು. ಅದಕ್ಕೆ ಅವನು - ಆ ಮನುಷ್ಯನು ಎಂಥವನು, ಅವನ ಮಾತು ಎಂಥದು ಎಂಬದು ನಿಮಗೆ ಗೊತ್ತುಂಟಲ್ಲಾ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಬಂದನು. ಅವರು ಅವನಿಗೆ, “ಶುಭವೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇನು?” ಎಂದರು. ಅವನು ಅವರಿಗೆ, “ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ,” ಎಂದನು. ಅಧ್ಯಾಯವನ್ನು ನೋಡಿ |
ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: “ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು ಹೀಗೆ ಹೇಳಿದನು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವೆ.”
ಎಪಿಕೊರಿಯಾ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರಲ್ಲಿ ಕೆಲವರು ಅವನೊಂದಿಗೆ ವಾದಿಸಿದರು. ಅವರಲ್ಲಿ ಕೆಲವರು, “ಈ ಮನುಷ್ಯನಿಗೆ ತಾನು ಯಾವುದರ ಬಗ್ಗೆ ಮಾತಾಡುತ್ತಿದ್ದೇನೆ ಎಂಬುದೇ ನಿಜವಾಗಿಯೂ ತಿಳಿದಿಲ್ಲ. ಅವನು ಏನು ಹೇಳಲು ಪ್ರಯತ್ನಿಸುತ್ತಿದ್ದಾನೆ?” ಎಂದರು. ಯೇಸುವು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದಿದ್ದಾನೆ ಎಂಬ ಸುವಾರ್ತೆಯನ್ನು ಪೌಲನು ಅವರಿಗೆ ಹೇಳುತ್ತಿದ್ದನು. ಆದ್ದರಿಂದ ಅವರು, “ಕೆಲವು ಬೇರೆ ದೇವರುಗಳ ಬಗ್ಗೆ ಅವನು ನಮಗೆ ಹೇಳುತ್ತಿರುವಂತೆ ತೋರುತ್ತಿದೆ” ಎಂದರು.