Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:12 - ಪರಿಶುದ್ದ ಬೈಬಲ್‌

12 ಆ ಅಧಿಕಾರಿಗಳು, “ಇಲ್ಲ! ನಮಗೆ ನಿಜವನ್ನು ಹೇಳು. ಅವನು ಹೇಳಿದುದೇನು?” ಎಂದು ಕೇಳಿದರು. ಆ ತರುಣ ಪ್ರವಾದಿಯು ತಿಳಿಸಿದ್ದ ಸಂಗತಿಗಳನ್ನು ಯೇಹುವು ಆ ಅಧಿಕಾರಿಗಳಿಗೆ ಹೇಳಿದನು. ಯೇಹುವು ಅವರಿಗೆ, “ಅವನು ಹೇಳಿದ್ದೇನೆಂದರೆ, ಯೆಹೋವನು ಹೀಗೆನ್ನುವನು: ಇಸ್ರೇಲಿನ ನೂತನ ರಾಜನನ್ನಾಗಿ ನಿನ್ನನ್ನು ನಾನು ಅಭಿಷೇಕಿಸಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದರೆ ಅವರು, “ಅದು ಸುಳ್ಳು, ಅವನು ಹೇಳಿದ್ದನ್ನು ತಿಳಿಸು” ಎಂದು ಅವನನ್ನು ಒತ್ತಾಯಪಡಿಸಿದ್ದರಿಂದ ಯೇಹುವು, “ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನು ಹೇಳಿದ ಎಲ್ಲ ಮಾತುಗಳನ್ನು ಹೇಳಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದರೆ ಅವರು, “ಅದು ಸುಳ್ಳು; ಅವನು ಹೇಳಿದ್ದನ್ನು ತಿಳಿಸು,” ಎಂದು ಅವನನ್ನು ಒತ್ತಾಯಪಡಿಸಿದರು. ಆದ್ದರಿಂದ ಅವನು, “ನಿನ್ನನ್ನು ಇಸ್ರಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದಾನೆಂಬುದಾಗಿ ಸರ್ವೇಶ್ವರ ನುಡಿದಿದ್ದಾರೆ ಎಂಬೀ ಮೊದಲಾದ ಮಾತುಗಳನ್ನು ಹೇಳಿದನು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದರೆ ಅವರು - ಅದು ಸುಳ್ಳು; ಅವನು ಹೇಳಿದ್ದನ್ನು ತಿಳಿಸು ಎಂದು ಅವನನ್ನು ಒತ್ತಾಯಪಡಿಸಿದದರಿಂದ ಅವನು - ನಿನ್ನನ್ನು ಇಸ್ರಾಯೇಲ್ಯರ ಅರಸನಾಗುವದಕ್ಕೆ ಅಭಿಷೇಕಿಸಿದ್ದೇನೆಂಬದಾಗಿ ಯೆಹೋವನು ಅನ್ನುತ್ತಾನೆ ಎಂಬೀ ಮೊದಲಾದ ಮಾತುಗಳನ್ನು ಹೇಳಿದನು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದಕ್ಕವರು, “ಅದು ಸುಳ್ಳು, ದಯಮಾಡಿ ನಮಗೆ ತಿಳಿಸು,” ಎಂದರು. ಆದ್ದರಿಂದ ಅವನು, “ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆಂಬುದಾಗಿ ಯೆಹೋವ ದೇವರು ಹೇಳುತ್ತಾರೆಂದು ಹೀಗೆ ನನಗೆ ಹೇಳಿದನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:12
4 ತಿಳಿವುಗಳ ಹೋಲಿಕೆ  

ಯೇಹುವು ತನ್ನ ರಾಜನ ಅಧಿಕಾರಿಗಳ ಬಳಿಗೆ ಹಿಂದಿರುಗಿದನು. ಒಬ್ಬ ಅಧಿಕಾರಿಯು ಯೇಹುವಿಗೆ, “ಶುಭವಾರ್ತೆಯೇ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಯೇಹುವು ಸೇವಕರಿಗೆ, “ನೀವು ಆ ಮನುಷ್ಯನನ್ನು ಬಲ್ಲವರಾಗಿದ್ದೀರಿ; ಅವನ ಹುಚ್ಚಾಟದ ಮಾತುಗಳೂ ನಿಮಗೆ ತಿಳಿದಿವೆ” ಎಂದು ಉತ್ತರಿಸಿದನು.


ಆಗ ಪ್ರತಿಯೊಬ್ಬ ಅಧಿಕಾರಿಯೂ ತಮ್ಮತಮ್ಮ ನಿಲುವಂಗಿಗಳನ್ನು ತೆಗೆದು, ಅವುಗಳನ್ನು ಮೆಟ್ಟಿಲುಗಳ ಮೇಲೆ, ಯೇಹುವಿನ ಮುಂದೆ ಇಟ್ಟರು. ಅನಂತರ ಅವರು ತುತ್ತೂರಿಯನ್ನೂದಿ, “ಯೇಹು ರಾಜನು!” ಎಂದು ಘೋಷಿಸಿದರು.


ಸಮುವೇಲನು ವಿಶೇಷವಾದ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ಸೌಲನ ತಲೆಯ ಮೇಲೆ ಆ ಎಣ್ಣೆಯನ್ನು ಸುರಿದನು. ಸಮುವೇಲನು ಸೌಲನಿಗೆ ಮುದ್ದಿಟ್ಟು, “ಯೆಹೋವನು ತನ್ನ ಜನರನ್ನು ಮುಂದೆ ನಡೆಸಲು ನಿನ್ನನ್ನು ಅವರಿಗೆ ನಾಯಕನನ್ನಾಗಿ ಅಭಿಷೇಕಿಸಿದ್ದಾನೆ. ನೀನು ಯೆಹೋವನ ಜನರನ್ನು ಆಳುವೆ; ಅವರನ್ನು ಸುತ್ತುವರೆದಿರುವ ಶತ್ರುಗಳಿಂದ ರಕ್ಷಿಸುವೆ. ಯೆಹೋವನು ತನ್ನ ಜನರನ್ನು ಆಳುವುದಕ್ಕಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. ಇದು ನಿಜವೆಂಬುದಕ್ಕೆ ಸಾಕ್ಷಿಯೇನೆಂದರೆ:


ನಂತರ ನಿಂಷಿಯ ಮಗನಾದ ಯೇಹುವನ್ನು ಇಸ್ರೇಲಿನ ರಾಜನನ್ನಾಗಿ ಅಭಿಷೇಕಿಸು. ಅಬೇಲ್ ಮೆಹೋಲದ ಶಾಫಾಟನ ಮಗನಾದ ಎಲೀಷನನ್ನು ನಿನ್ನ ಜಾಗದಲ್ಲಿ ಪ್ರವಾದಿಯನ್ನಾಗಿ ಅಭಿಷೇಕಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು