Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:16 - ಪರಿಶುದ್ದ ಬೈಬಲ್‌

16 ಯೋರಾಮನು ಇಜ್ರೇಲಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದನು. ಯೇಹು ರಥದಲ್ಲಿ ಇಜ್ರೇಲಿಗೆ ಹೋದನು. ಯೆಹೂದದ ಅರಸನಾದ ಅಹಜ್ಯನೂ ಯೋರಾಮನನ್ನು ನೋಡಲು ಇಜ್ರೇಲಿಗೆ ಬಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅನಂತರ ಯೇಹುವು ರಥದಲ್ಲಿ ಕುಳಿತು ಇಜ್ರೇಲಿಗೆ ಹೋಗುವುದಕ್ಕಾಗಿ ಹೊರಟನು. ಅಲ್ಲಿ ಅಸ್ವಸ್ಥನಾದ ಯೋರಾಮನು ಅವನನ್ನು ನೋಡುವುದಕ್ಕೆ ಬಂದಿದ್ದ ಯೆಹೂದ್ಯರ ಅರಸನಾದ ಅಹಜ್ಯನೂ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅನಂತರ ಅವನು ರಥದಲ್ಲಿ ಕುಳಿತು ಜೆಸ್ರೀಲಿಗೆ ಹೋಗುವುದಕ್ಕಾಗಿ ಹೊರಟನು. ಅಲ್ಲಿ ಅಸ್ವಸ್ಥನಾದ ಯೋರಾಮನೂ ಅವನನ್ನು ನೋಡುವುದಕ್ಕೆ ಬಂದಿದ್ದ ಯೆಹೂದ್ಯರ ಅರಸನಾದ ಅಹಜ್ಯನೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅನಂತರ ಅವನು ರಥದಲ್ಲಿ ಕೂತು ಇಜ್ರೇಲಿಗೆ ಹೋಗುವದಕ್ಕಾಗಿ ಹೊರಟನು. ಅಲ್ಲಿ ಅಸ್ವಸ್ಥನಾದ ಯೋರಾಮನೂ ಅವನನ್ನು ನೋಡುವದಕ್ಕೆ ಬಂದಿದ್ದ ಯೆಹೂದ್ಯರ ಅರಸನಾದ ಅಹಜ್ಯನೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೇಹುವು ರಥದ ಮೇಲೆ ಏರಿ ಇಜ್ರೆಯೇಲಿಗೆ ಹೋದನು. ಏಕೆಂದರೆ ಯೋರಾಮನು ಅಲ್ಲಿ ವಿಶ್ರಾಂತಿಯಲ್ಲಿದ್ದನು. ಇದಲ್ಲದೆ ಯೋರಾಮನನ್ನು ನೋಡುವುದಕ್ಕೆ ಯೆಹೂದದ ಅರಸನಾದ ಅಹಜ್ಯನು ಅಲ್ಲಿಗೆ ಬಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:16
4 ತಿಳಿವುಗಳ ಹೋಲಿಕೆ  

ಇಜ್ರೇಲ್, ಯೆಗ್ದೆಯಾಮ್, ಜನೋಹ,


ಇಜ್ರೇಲಿನ ಬುರುಜಿನಲ್ಲಿ ಒಬ್ಬ ಕಾವಲುಗಾರನು ನಿಂತಿದ್ದನು. ಅವನು ಯೇಹುವಿನ ದೊಡ್ಡಗುಂಪು ಬರುತ್ತಿರುವುದನ್ನು ನೋಡಿದನು. ಅವನು, “ನಾನು ಜನರ ದೊಡ್ಡ ಗುಂಪನ್ನು ನೋಡುತ್ತಿರುವೆನು” ಎಂದು ಹೇಳಿದನು. ಯೋರಾಮನು, “ಅವರನ್ನು ಸಂಧಿಸಲು ಯಾರನ್ನಾದರೂ ಕುದುರೆಯ ಮೇಲೆ ಕಳುಹಿಸಿ, ‘ಶುಭವಾರ್ತೆಯುಂಟೋ?’ ಎಂದು ಅವನು ಅವರನ್ನು ಕೇಳಲಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು