Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:2 - ಪರಿಶುದ್ದ ಬೈಬಲ್‌

2 ನೀನು ಅಲ್ಲಿಗೆ ಹೋದಾಗ ಯೆಹೋಷಾಫಾಟನ ಮಗನಾದ ಯೇಹುವನ್ನು ಕಂಡುಹಿಡಿ. ಯೆಹೋಷಾಫಾಟನು ನಿಂಷಿಯ ಮಗ. ಅಲ್ಲಿಗೆ ಹೋಗಿ ಅವನನ್ನು ಅವನ ಸೋದರರ ಮಧ್ಯದಿಂದ ಮೇಲಕ್ಕೆಬ್ಬಿಸಿ ಒಂದು ಒಳಕೋಣೆಗೆ ಕರೆದುಕೊಂಡು ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ಊರನ್ನು ತಲುಪಿದ ನಂತರ ನಿಂಷಿಯ ಮೊಮ್ಮಗನೂ, ಯೆಹೋಷಾಫಾಟನ ಮಗನೂ ಆದ ಯೇಹುವು ಎಲ್ಲಿರುತ್ತಾನೆಂದು ವಿಚಾರಿಸಿ, ಅವನು ಸಿಕ್ಕಿದಾಗ ಅವನನ್ನು ಅವರ ಜೊತೆಗಾರರ ಗುಂಪಿನಿಂದ ಒಳಗಿನ ಕೋಣೆಗೆ ಕರೆದುಕೊಂಡು ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆ ಊರನ್ನು ಮುಟ್ಟಿದನಂತರ ನಿಂಷಿಯ ಮೊಮ್ಮಗನೂ ಯೆಹೋಷಾಫಾಟನ ಮಗನೂ ಆದ ಯೇಹುವು ಎಲ್ಲಿರುತ್ತಾನೆಂದು ವಿಚಾರಿಸು. ಅವನು ಸಿಕ್ಕಿದಾಗ ಅವನನ್ನು ಅವನ ಜೊತೆಗಾರರ ಗುಂಪಿನಿಂದ ಪ್ರತ್ಯೇಕವಾಗಿ ಕರೆದುಕೊಂಡು ಒಳಗಿನ ಕೋಣೆಗೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಊರನ್ನು ಮುಟ್ಟಿದ ನಂತರ ನಿಂಷಿಯ ಮೊಮ್ಮಗನೂ ಯೆಹೋಷಾಫಾಟನ ಮಗನೂ ಆದ ಯೇಹುವು ಎಲ್ಲಿರುತ್ತಾನೆಂದು ವಿಚಾರಿಸಿ ಅವನು ಸಿಕ್ಕಿದಾಗ ಅವನನ್ನು ಅವನ ಜೊತೆಗಾರರ ಗುಂಪಿನಿಂದ ಒಳಗಿನ ಕೋಣೆಗೆ ಕರಕೊಂಡು ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀನು ಅಲ್ಲಿಗೆ ಸೇರಿದಾಗ ನಿಂಷಿಯ ಮಗನಾಗಿರುವ ಯೆಹೋಷಾಫಾಟನ ಮಗ ಯೇಹುವನ್ನು ಅಲ್ಲಿ ಕಂಡು, ಒಳಗೆ ಪ್ರವೇಶಿಸಿ, ಅವನನ್ನು ಅವರ ಸಹೋದರರ ಮಧ್ಯದಿಂದ ಎಬ್ಬಿಸಿ, ಒಳಗಿನ ಕೋಣೆಗೆ ಕರೆದುಕೊಂಡು ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:2
7 ತಿಳಿವುಗಳ ಹೋಲಿಕೆ  

ಯೆಹೋಷಾಫಾಟನ ಮಗನೂ ನಿಂಷಿಯ ಮೊಮ್ಮಗನೂ ಆದ ಯೇಹುವು ಯೋರಾಮನ ವಿರುದ್ಧ ಒಳಸಂಚುಮಾಡಿದನು. ಆ ಸಮಯದಲ್ಲಿ ರಾಮೋತ್‌ಗಿಲ್ಯಾದನ್ನು ಅರಾಮ್ಯರ ರಾಜನಾದ ಹಜಾಯೇಲನಿಂದ ರಕ್ಷಿಸಲು, ಯೋರಾಮನೂ ಇಸ್ರೇಲರೂ ಪ್ರಯತ್ನಿಸಿದ್ದರು.


ಯೇಹುವು ತನ್ನ ರಾಜನ ಅಧಿಕಾರಿಗಳ ಬಳಿಗೆ ಹಿಂದಿರುಗಿದನು. ಒಬ್ಬ ಅಧಿಕಾರಿಯು ಯೇಹುವಿಗೆ, “ಶುಭವಾರ್ತೆಯೇ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಯೇಹುವು ಸೇವಕರಿಗೆ, “ನೀವು ಆ ಮನುಷ್ಯನನ್ನು ಬಲ್ಲವರಾಗಿದ್ದೀರಿ; ಅವನ ಹುಚ್ಚಾಟದ ಮಾತುಗಳೂ ನಿಮಗೆ ತಿಳಿದಿವೆ” ಎಂದು ಉತ್ತರಿಸಿದನು.


ಆ ತರುಣನು ಅಲ್ಲಿಗೆ ಬಂದಾಗ ಸೇನಾಧಿಪತಿಗಳು ಕುಳಿತಿರುವುದನ್ನು ನೋಡಿ, “ಸೇನಾಧಿಪತಿಯೇ, ನಿನಗೆ ಒಂದು ಸಂದೇಶವಿದೆ” ಎಂದು ಹೇಳಿದನು. ಯೇಹುವು, “ನಾವೆಲ್ಲರೂ ಇಲ್ಲಿದ್ದೇವೆ. ನಮ್ಮಲ್ಲಿ ಸಂದೇಶವಿರುವುದು ಯಾರಿಗೆ?” ಎಂದು ಕೇಳಿದನು. ಆ ತರುಣನು, “ಸಂದೇಶವು ಸೇನಾಧಿಪತಿಯಾದ ನಿನಗೆ” ಎಂದು ಹೇಳಿದನು.


ಕಾವಲುಗಾರನು ಯೋರಾಮನಿಗೆ, “ಆ ಗುಂಪಿನ ಬಳಿಗೆ ಹೋದ ಎರಡನೆಯವನೂ ಈವರೆವಿಗೂ ಹಿಂದುರುಗಿ ಬರಲೇ ಇಲ್ಲ. ರಥವನ್ನು ಓಡಿಸುತ್ತಿರುವವನು ಹುಚ್ಚನಂತೆ ರಥವನ್ನು ಓಡಿಸುತ್ತಿರುವುದನ್ನು ನೋಡಿದರೆ ಅವನು ನಿಂಷಿಯ ಮೊಮ್ಮಗನಾದ ಯೇಹುವಿರಬೇಕು!” ಎಂದು ಹೇಳಿದನು.


ಮೀಕಾಯೆಹು, “ಕೇಡು ಬೇಗನೆ ಬರಲಿದೆ. ಆಗ ನೀನು ಹೋಗಿ ಒಂದು ಚಿಕ್ಕ ಕೊಠಡಿಯಲ್ಲಿ ಅಡಗಿಕೊಳ್ಳುವೆ. ನಾನು ಸತ್ಯವನ್ನೇ ನುಡಿದೆನೆಂದು ಆಗ ನಿನಗೆ ತಿಳಿಯುತ್ತದೆ!” ಎಂದನು.


ಬದುಕಿ ಉಳಿದವರು ಅಫೇಕ್ ನಗರಕ್ಕೆ ಓಡಿಹೋದರು. ಆ ನಗರದ ಗೋಡೆಯು ಉಳಿದಿದ್ದ ಇಪ್ಪತ್ತೇಳು ಸಾವಿರ ಜನರ ಮೇಲೆ ಉರುಳಿ ಬಿತ್ತು. ಬೆನ್ಹದದನೂ ನಗರಕ್ಕೆ ಓಡಿಹೋಗಿ ಒಂದು ಕೊಠಡಿಯಲ್ಲಿ ಅವಿತುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು