2 ಅರಸುಗಳು 9:20 - ಪರಿಶುದ್ದ ಬೈಬಲ್20 ಕಾವಲುಗಾರನು ಯೋರಾಮನಿಗೆ, “ಆ ಗುಂಪಿನ ಬಳಿಗೆ ಹೋದ ಎರಡನೆಯವನೂ ಈವರೆವಿಗೂ ಹಿಂದುರುಗಿ ಬರಲೇ ಇಲ್ಲ. ರಥವನ್ನು ಓಡಿಸುತ್ತಿರುವವನು ಹುಚ್ಚನಂತೆ ರಥವನ್ನು ಓಡಿಸುತ್ತಿರುವುದನ್ನು ನೋಡಿದರೆ ಅವನು ನಿಂಷಿಯ ಮೊಮ್ಮಗನಾದ ಯೇಹುವಿರಬೇಕು!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಕಾವಲುಗಾರನು ತಿರುಗಿ ಅರಸನಿಗೆ, “ಎರಡನೆಯವನೂ ಆ ಗುಂಪನ್ನು ತಲುಪಿದ್ದಾನೆ. ಆದರೆ ಹಿಂತಿರುಗಿ ಬರುವುದು ಕಾಣಿಸುತ್ತಿಲ್ಲ. ರಥದಲ್ಲಿ ಕುಳಿತಿರುವವನು ಕುದುರೆಗಳನ್ನು ಹುಚ್ಚು ಹಿಡಿದವನಂತೆ ಓಡಿಸುವುದನ್ನು ನೋಡಿದರೆ ಅವನು ನಿಂಷಿಯ ಮೊಮ್ಮಗನಾದ ಯೇಹುವೇ ಇರಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಕಾವಲುಗಾರನು ಪುನಃ ಅರಸನಿಗೆ, “ಎರಡನೆಯವನೂ ಆ ಗುಂಪನ್ನು ಮುಟ್ಟಿದನು; ಆದರೆ ಹಿಂದಿರುಗಿ ಬರುವುದು ಕಾಣಿಸುವುದೇ ಇಲ್ಲ. ರಥದಲ್ಲಿ ಕುಳಿತಿರುವವನು ಕುದುರೆಗಳನ್ನು ಹುಚ್ಚುಹಿಡಿದವನಂತೆ ಓಡಿಸುವುದನ್ನು ನೋಡಿದರೆ ಅವನು, ನಿಂಷಿಯ ಮೊಮ್ಮಗನಾದ ಯೇಹುವಾಗಿರಬೇಕು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಕಾವಲುಗಾರನು ತಿರಿಗಿ ಅರಸನಿಗೆ - ಎರಡನೆಯವನೂ ಆ ಗುಂಪನ್ನು ಮುಟ್ಟಿದನು; ಆದರೆ ಹಿಂದಿರುಗಿ ಬರುವದು ಕಾಣಿಸುವದೇ ಇಲ್ಲ. ರಥದಲ್ಲಿ ಕೂತಿರುವವನು ಕುದುರೆಗಳನ್ನು ಹುಚ್ಚು ಹಿಡಿದವನಂತೆ ಓಡಿಸುವದನ್ನು ನೋಡಿದರೆ ಅವನು ನಿಂಷಿಯ ಮೊಮ್ಮಗನಾದ ಯೇಹುವಾಗಿರಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಕಾವಲುಗಾರನು, “ಇವನೂ ಅವರ ಬಳಿಗೆ ಹೋಗಿ ತಿರುಗಿ ಬರಲಿಲ್ಲ. ಇದಲ್ಲದೆ ರಥವನ್ನು ಓಡಿಸುವುದು ನಿಂಷಿಯ ಮಗನಾದ ಯೇಹುವು ಓಡಿಸುವ ಹಾಗಿದೆ, ಏಕೆಂದರೆ ಅವನು ಹುಚ್ಚನಂತೆ ಓಡಿಸುತ್ತಿದ್ದಾನೆ,” ಎಂದನು. ಅಧ್ಯಾಯವನ್ನು ನೋಡಿ |