2 ಅರಸುಗಳು 9:21 - ಪರಿಶುದ್ದ ಬೈಬಲ್21 ಯೋರಾಮನು, “ನನ್ನ ರಥವನ್ನು ಸಿದ್ಧಗೊಳಿಸು!” ಎಂದು ಹೇಳಿದನು. ಯೋರಾಮನ ಸೇವಕನು ರಥವನ್ನು ಸಿದ್ಧಗೊಳಿಸಿದನು. ಇಸ್ರೇಲಿನ ರಾಜನಾದ ಯೋರಾಮನು ಮತ್ತು ಯೆಹೂದದ ರಾಜನಾದ ಅಹಜ್ಯನು ಯೇಹುವನ್ನು ಭೇಟಿಮಾಡಲು ತಮ್ಮ ರಥಗಳಲ್ಲಿ ಹೋದರು. ಅವರು ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಯೇಹುವನ್ನು ಸಂಧಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೋರಾಮನು ರಥವನ್ನು ಸಿದ್ಧಮಾಡಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ಅವರು ಸಿದ್ಧಮಾಡಿದರು. ಆಗ ಇಸ್ರಾಯೇಲರ ಅರಸನಾದ ಯೋರಾಮನು ಯೆಹೂದ್ಯರ ಅರಸನಾದ ಅಹಜ್ಯನೂ ತಮ್ಮ ತಮ್ಮ ರಥಗಳಲ್ಲಿ ಕುಳಿತುಕೊಂಡು ಯೇಹುವನ್ನು ಎದುರುಗೊಳ್ಳುವುಕ್ಕಾಗಿ ಹೊರಟು ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಯೋರಾಮನು ರಥಹೂಡಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ಅವರು ಹೂಡಿದರು. ಆಗ ಇಸ್ರಯೇಲರ ಅರಸನಾದ ಇವನೂ ಯೆಹೂದ್ಯರ ಅರಸನಾದ ಅಹಜ್ಯನೂ ತಮ್ಮ ತಮ್ಮ ರಥಗಳಲ್ಲಿ ಕುಳಿತುಕೊಂಡು, ಯೇಹುವನ್ನು ಎದುರುಗೊಳ್ಳುವುದಕ್ಕಾಗಿ ಹೊರಟು, ಜೆಸ್ರೀಲಿನವನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯೋರಾಮನು ರಥಹೂಡಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ಅವರು ಹೂಡಿದರು. ಆಗ ಇಸ್ರಾಯೇಲ್ಯರ ಅರಸನಾದ ಇವನೂ ಯೆಹೂದ್ಯರ ಅರಸನಾದ ಅಹಜ್ಯನೂ ತಮ್ಮತಮ್ಮ ರಥಗಳಲ್ಲಿ ಕೂತುಕೊಂಡು ಯೇಹುವನ್ನು ಎದುರುಗೊಳ್ಳುವದಕ್ಕಾಗಿ ಹೊರಟು ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಯೋರಾಮನು, “ನನ್ನ ರಥವನ್ನು ಸಿದ್ಧಮಾಡು,” ಎಂದನು. ಅವನ ರಥವು ಸಿದ್ಧವಾಯಿತು. ಆಗ ಇಸ್ರಾಯೇಲಿನ ಅರಸನಾದ ಯೋರಾಮನೂ, ಯೆಹೂದದ ಅರಸನಾದ ಅಹಜ್ಯನೂ ಹೊರಟು, ಅವರವರು ತಮ್ಮ ತಮ್ಮ ರಥದಲ್ಲಿ ಏರಿ ಯೇಹುವಿಗೆ ಎದುರಾಗಿ ಹೊರಟು, ಇಜ್ರೆಯೇಲಿನವನಾದ ನಾಬೋತನಿಗೆ ಸಂಬಂಧಿಸಿದ ಸ್ಥಳದಲ್ಲಿ ಅವನನ್ನು ಸಂಧಿಸಿದರು. ಅಧ್ಯಾಯವನ್ನು ನೋಡಿ |