24 ಆದರೆ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬಗ್ಗಿಸಿ ತನ್ನ ಕೈಯಿಂದ ಯೋರಾಮನನ್ನು ಅವನ ತೋಳುಗಳ ನಡುವೆ ಹೊಡೆದನು. ಬಾಣ ಹೃದಯದಲ್ಲಿ ತೂರಿ ಹೊರಟಿತು. ಅವನು ರಥದಲ್ಲಿ ಕೆಳಗೆ ಮುದುರಿಕೊಂಡು ಬಿದ್ದನು.
ಆದರೆ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಒಂದು ಬಾಣವನ್ನು ಗಾಳಿಯಲ್ಲಿ ಹೊಡೆದನು. ಆದರೆ ಅವನ ಬಾಣವು ಇಸ್ರೇಲಿನ ರಾಜನಾದ ಅಹಾಬನಿಗೆ ಬಡಿಯಿತು. ಆ ಬಾಣವು ರಾಜನ ದೇಹದ ಕವಚದ ಸಣ್ಣ ಸಂಧಿಯಲ್ಲಿ ತಾಕಿತು. ರಾಜನಾದ ಅಹಾಬನು ತನ್ನ ರಥದ ಸಾರಥಿಗೆ, “ಒಂದು ಬಾಣವು ನನಗೆ ತಾಕಿತು! ರಥವನ್ನು ಈ ಪ್ರದೇಶದಿಂದ ಹೊರಗೆ ಓಡಿಸು. ನಾವು ಯುದ್ಧದಿಂದ ಹೊರಟುಹೋಗಬೇಕಾಗಿದೆ” ಎಂದು ಹೇಳಿದನು.
ಆದರೆ ಇಜ್ರೇಲಿನ ಅಧಿಕಾರಿಗಳು ಮತ್ತು ನಾಯಕರು ಬಹಳ ಭಯಗೊಂಡಿದ್ದರು. ಅವರು, “ಇಬ್ಬರು ರಾಜರು (ಯೋರಾವ್ ಮತ್ತು ಅಹಜ್ಯ) ಯೇಹುವನ್ನು ತಡೆಯಲಾಗಲಿಲ್ಲ. ನಾವು ಅವನನ್ನು ತಡೆಯಲಾಗುವುದಿಲ್ಲ” ಎಂದು ಹೇಳಿದರು.
ಹಜಾಯೇಲನು ಕೆಟ್ಟವರಾದ ಅನೇಕ ಜನರನ್ನು ಕೊಲ್ಲುತ್ತಾನೆ. ಹಜಾಯೇಲನ ಖಡ್ಗದಿಂದ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುತ್ತಾನೆ. ಯೇಹುವಿನಿಂದ ತಪ್ಪಿಸಿಕೊಂಡ ಆ ಕೆಟ್ಟ ಜನರನ್ನೆಲ್ಲ ಎಲೀಷನು ಕೊಲ್ಲುತ್ತಾನೆ.
“ಅಹಾಬನು ನನ್ನ ಎದುರಿನಲ್ಲಿ ತನ್ನನ್ನು ತಗ್ಗಿಸಿಕೊಂಡಿರುವುದನ್ನು ನಾನು ನೋಡುತ್ತಿದ್ದೇನೆ. ಆದ್ದರಿಂದ ಅವನ ಜೀವಮಾನಕಾಲದಲ್ಲಿ ಅವನಿಗೆ ಕೇಡಾಗದಂತೆ ಮಾಡುವೆನು. ಅವನ ಮಗ ರಾಜನಾಗುವವರೆಗೆ ನಾನು ಕಾಯುತ್ತೇನೆ. ನಂತರ ಅಹಾಬನ ಕುಟುಂಬಕ್ಕೆ ಕೇಡನ್ನು ಬರಮಾಡುತ್ತೇನೆ” ಎಂದು ಹೇಳಿದನು.
ಸೈನಿಕರು ಹೋರಾಡುತ್ತಲೇ ಇದ್ದರು. ರಾಜನಾದ ಅಹಾಬನು ರಥದಲ್ಲಿಯೇ ಇದ್ದನು. ಅವನು ರಥದ ಒಂದು ಪಕ್ಕಕ್ಕೆ ಒರಗಿಕೊಂಡು ನಿಂತಿದ್ದನು. ಅವನು ಅರಾಮ್ಯರ ಸೇನೆಯ ಕಡೆಗೆ ನೋಡುತ್ತಲೇ ಇದ್ದನು. ಅವನ ದೇಹದಿಂದ ಹರಿದ ರಕ್ತವು, ರಥದ ತಳದಲ್ಲಿ ಮಡುಗಟ್ಟಿತು. ಸಾಯಂಕಾಲವಾದ ಮೇಲೆ ರಾಜನು ಸತ್ತುಹೋದನು.
ಮುಂಜಾನೆ, ಯೇಹು ಹೊರಗೆ ಬಂದು ಜನರ ಮುಂದೆ ನಿಂತು ಅವರಿಗೆ, “ನೀವು ನಿರಪರಾಧಿಗಳು. ನಾನಾದರೋ ನನ್ನ ಒಡೆಯನ ಮೇಲೆ ಒಳಸಂಚು ಮಾಡಿದವನು. ನಾನು ಅವನನ್ನು ಕೊಂದೆನು. ಆದರೆ ಅಹಾಬನ ಮಕ್ಕಳನ್ನೆಲ್ಲ ಕೊಂದವರು ಯಾರು? ನೀವು ಅವರನ್ನು ಕೊಂದಿದ್ದೀರಿ!