Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:26 - ಪರಿಶುದ್ದ ಬೈಬಲ್‌

26 ಯೆಹೋವನು, ‘ನೀನು ನಿನ್ನೆ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ಯಾವ ಹೊಲದಲ್ಲಿ ಸುರಿಸಿದೆಯೋ ಅದೇ ಹೊಲದಲ್ಲಿ ನಿನಗೆ ಮುಯ್ಯಿ ತೀರಿಸುವೆನು’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುವುದಲ್ಲವೇ? ಯೆಹೋವನ ಮಾತು ನೆರವೇರುವಂತೆ ಯೋರಾಮನ ದೇಹವನ್ನು ತೆಗೆದು ಅದೇ ಹೊಲದಲ್ಲಿ ಎಸೆದುಬಿಡು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೆಹೋವನು ಅಹಾಬನಿಗೆ, ‘ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲಾ, ಯೆಹೋವನ ಆ ಮಾತು ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲಿ ಬಿಸಾಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಹಾಬನಿಗೆ ಸರ್ವೇಶ್ವರ, ‘ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು,’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲವೆ?’ ಎಂದಿದ್ದರು. ಸರ್ವೇಶ್ವರನ ಆ ನುಡಿ ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲೇ ಹಾಕಿಬಿಡು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲಾ; ಯೆಹೋವನ ಆ ಮಾತು ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲಿ ಹಾಕಿಬಿಡು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಾಬೋತನ ರಕ್ತವನ್ನೂ, ಅವನ ಪುತ್ರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ, ಎಂದು ಯೆಹೋವ ದೇವರು ಹೇಳುತ್ತಾರೆ. ಇದಲ್ಲದೆ ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆನೆಂದು ಯೆಹೋವ ದೇವರು ಹೇಳುತ್ತಾರೆ. ಆದ್ದರಿಂದ ಯೆಹೋವ ದೇವರ ವಾಕ್ಯದ ಪ್ರಕಾರ ಎತ್ತಿಕೊಂಡು ಆ ಹೊಲದಲ್ಲಿ ಅವನನ್ನು ಹಾಕಿಬಿಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:26
12 ತಿಳಿವುಗಳ ಹೋಲಿಕೆ  

“‘ತಂದೆಯ ಪಾಪಗಳಿಗಿರುವ ಪ್ರತಿಫಲಗಳಲ್ಲಿ ಯಾವುದನ್ನೂ ಮಗನು ಹೊತ್ತುಕೊಳ್ಳದಿರುವದೇಕೆ?’ ಎಂದು ನೀವು ಕೇಳಬಹುದು. ಮಗನು ನ್ಯಾಯವಾದುದ್ದನ್ನು ಮತ್ತು ಸರಿಯಾದುದ್ದನ್ನು ಮಾಡಿದ್ದಾನೆ. ಅವನು ಎಚ್ಚರಿಕೆಯಿಂದ ನನ್ನ ಎಲ್ಲಾ ನಿಯಮಗಳಿಗೆ ವಿಧೇಯನಾಗಿದ್ದನು. ಆದ್ದರಿಂದ ಅವನು ಬಾಳುವನು.


ಆದರೆ ಆ ಸೇವಕರ ಮಕ್ಕಳನ್ನು ಕೊಲ್ಲಿಸಲಿಲ್ಲ. ಯಾಕೆಂದರೆ ಮೋಶೆಯ ಧರ್ಮಶಾಸ್ತ್ರದ ಪ್ರಕಾರ, ಮಕ್ಕಳು ಮಾಡಿದ ಪಾಪಕ್ಕಾಗಿ ಅವರ ತಂದೆತಾಯಿಗಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು; ತಂದೆತಾಯಿಗಳು ಮಾಡಿದ ಪಾಪಕ್ಕಾಗಿ ಅವರ ಮಕ್ಕಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ಪಾಪ ಮಾಡಿದವರಿಗೇ ಮರಣಶಿಕ್ಷೆಯಾಗಬೇಕು.


ಅರಾಮ್ಯರು ಯೆಹೋವಾಷನನ್ನು ಬಿಟ್ಟುಹೋಗುವಾಗ ಅವನು ರೋಗದಿಂದ ಬಹಳ ಅಸ್ವಸ್ಥನಾಗಿದ್ದನು. ಅವನ ಸ್ವಂತ ಸೇವಕರೇ ಅವನಿಗೆ ವಿರೋಧವಾಗಿ ಸಂಚು ಮಾಡಿದರು. ಯಾಕೆಂದರೆ ಅವನು ಯೆಹೋಯಾದನ ಮಗನಾದ ಜೆಕರ್ಯನನ್ನು ಕೊಂದದ್ದರಿಂದ ಸೇವಕರು ಯೆಹೋವಾಷನನ್ನು ಅವನ ಮಂಚದ ಮೇಲೆಯೇ ಕೊಂದುಹಾಕಿದರು. ಜನರು ಅವನನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಆದರೆ ಅರಸರುಗಳ ಸಮಾಧಿಯಲ್ಲಿ ಹೂಳಿಡಲಿಲ್ಲ.


ಯೆಹೋವನಾದ ನಾನು ಅವನಿಗೆ ಹೀಗೆ ಹೇಳಿದೆನೆಂದು ತಿಳಿಸು: ‘ಅಹಾಬನೇ! ನೀನು ನಾಬೋತನನ್ನು ಕೊಂದುಹಾಕಿದೆ. ಈಗ ನೀನು ಅವನ ದ್ರಾಕ್ಷಿತೋಟವನ್ನು ತೆಗೆದುಕೊಳ್ಳುತ್ತಿರುವೆ. ಆದ್ದರಿಂದ ನಾನಿದನ್ನು ನಿನಗೆ ಹೇಳುತ್ತೇನೆ! ನಾಬೋತನು ಸತ್ತ ಸ್ಥಳದಲ್ಲಿಯೇ ನೀನು ಸಹ ಸಾಯುವೆ. ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನೂ ನೆಕ್ಕುತ್ತವೆ!’”


“ಮಕ್ಕಳು ಮಾಡಿದ ಪಾಪಕ್ಕಾಗಿ ಅವರ ತಂದೆತಾಯಿಗಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ತಂದೆತಾಯಿಗಳು ಮಾಡಿದ ಪಾಪಕ್ಕಾಗಿ ಮಕ್ಕಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ಪಾಪ ಮಾಡಿದವರಿಗೇ ಮರಣ ಶಿಕ್ಷೆಯಾಗಬೇಕು.


ನಾನೇ ನಿಮ್ಮ ದೇವರಾದ ಯೆಹೋವನು. ಆದ್ದರಿಂದ ನೀವು ಯಾವ ವಿಗ್ರಹವನ್ನೂ ಪೂಜಿಸಬಾರದು ಮತ್ತು ಅದರ ಸೇವೆ ಮಾಡಬಾರದು. ನನ್ನ ಜನರು ಇತರ ದೇವರುಗಳನ್ನು ಆರಾಧಿಸುವುದನ್ನು ನಾನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪ ಮಾಡಿದವರನ್ನು ನಾನು ಶಿಕ್ಷಿಸುತ್ತೇನೆ. ಅವರ ಮಕ್ಕಳು, ಮೊಮ್ಮಕ್ಕಳು ಮತ್ತು ಮರಿಮೊಮ್ಮಕ್ಕಳು ನನ್ನ ದಂಡನೆಗೆ ಗುರಿಯಾಗುವರು.


ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.


ನಾಬೋತನು ದೇವರ ವಿರುದ್ಧವಾಗಿಯೂ ರಾಜನ ವಿರುದ್ಧವಾಗಿಯೂ ಮಾತನಾಡಿದ್ದನ್ನು ತಾವು ಕೇಳಿರುವುದಾಗಿ ಇಬ್ಬರು ಅಲ್ಲಿನ ಜನರಿಗೆ ಹೇಳಿದರು. ಜನರು ನಾಬೋತನನ್ನು ನಗರದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದರು.


ಯೋರಾಮನು, “ನನ್ನ ರಥವನ್ನು ಸಿದ್ಧಗೊಳಿಸು!” ಎಂದು ಹೇಳಿದನು. ಯೋರಾಮನ ಸೇವಕನು ರಥವನ್ನು ಸಿದ್ಧಗೊಳಿಸಿದನು. ಇಸ್ರೇಲಿನ ರಾಜನಾದ ಯೋರಾಮನು ಮತ್ತು ಯೆಹೂದದ ರಾಜನಾದ ಅಹಜ್ಯನು ಯೇಹುವನ್ನು ಭೇಟಿಮಾಡಲು ತಮ್ಮ ರಥಗಳಲ್ಲಿ ಹೋದರು. ಅವರು ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಯೇಹುವನ್ನು ಸಂಧಿಸಿದರು.


ಯೇಹು ತನ್ನ ರಥದ ಸಾರಥಿಯಾದ ಬಿದ್ಕರನಿಗೆ, “ಯೋರಾಮನ ದೇಹವನ್ನು ಎತ್ತಿ ಇಜ್ರೇಲಿಯನಾದ ನಾಬೋತನ ಹೊಲದಲ್ಲಿ ಎಸೆದುಬಿಡು. ನಾನು ಮತ್ತು ನೀನು ಯೋರಾಮನ ತಂದೆಯಾದ ಅಹಾಬನ ಸಂಗಡ ಹೋಗುತ್ತಿರುವಾಗ


ಎಷ್ಟೋ ಜನರನ್ನು ನಾಶಮಾಡಲು ನೀನು ಯೋಜನೆ ಮಾಡಿರುವೆ. ಆದರೆ ಆ ಯೋಜನೆಗಳು ನಿನ್ನ ಮನೆಗೆ ನಾಚಿಕೆಯನ್ನು ತಂದೊಡ್ಡುವವು. ನೀನು ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ನೀನು ನಿನ್ನ ಪ್ರಾಣವನ್ನು ಕಳೆದುಕೊಳ್ಳುವೆ.


“ಯೆಹೋವನೇ, ನನ್ನನ್ನು ಕನಿಕರಿಸು. ಇಗೋ, ವೈರಿಗಳು ನನಗೆ ಕೇಡುಮಾಡುತ್ತಿದ್ದಾರೆ. ‘ಮರಣ ದ್ವಾರ’ದಿಂದ ತಪ್ಪಿಸಿ ಕಾಪಾಡು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು