Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:3 - ಪರಿಶುದ್ದ ಬೈಬಲ್‌

3 ಯೇಹುವಿನ ತಲೆಯ ಮೇಲೆ ಈ ಸಣ್ಣ ಸೀಸೆಯಲ್ಲಿರುವ ಎಣ್ಣೆಯನ್ನು ಸುರಿದುಬಿಡು. ನಂತರ ಅವನಿಗೆ, ‘ಯೆಹೋವನು ಹೀಗೆನ್ನುತ್ತಾನೆ: ನಾನು ನಿನ್ನನ್ನು ಇಸ್ರೇಲಿನ ನೂತನ ರಾಜನನ್ನಾಗಿ ಅಭಿಷೇಕಿಸಿದ್ದೇನೆ!’ ಎಂದು ಹೇಳು. ಆ ಬಳಿಕ ಬಾಗಿಲನ್ನು ತೆಗೆದು ಓಡಿಬಿಡು. ಅಲ್ಲಿ ಇರಬೇಡ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ತರುವಾಯ ಕುಪ್ಪಿಯಲ್ಲಿರುವ ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು, “ಯೆಹೋವನು ಹೀಗೆ ಅನ್ನುತ್ತಾನೆ, ‘ನಾನು ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ’ ಎಂಬುದಾಗಿ ಹೇಳಿದ ಕೂಡಲೆ ಬಾಗಿಲು ತೆರೆದು ಓಡಿಹೋಗು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ತರುವಾಯ ಕುಪ್ಪಿಯಲ್ಲಿರುವ ಈ ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು, ‘ನಾನು ನಿನ್ನನ್ನು ಇಸ್ರಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆಂದು ಸರ್ವೇಶ್ವರ ನುಡಿದಿದ್ದಾರೆ,’ ಎಂಬುದಾಗಿ ಹೇಳಿ ಕೂಡಲೆ ಬಾಗಿಲು ತೆರೆದು ಓಡಿಹೋಗು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ತರುವಾಯ ಕುಪ್ಪಿಯಲ್ಲಿರುವ ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು - ನಾನು ನಿನ್ನನ್ನು ಇಸ್ರಾಯೇಲ್ಯರ ಅರಸನಾಗುವದಕ್ಕೆ ಅಭಿಷೇಕಿಸಿದ್ದೇನೆಂದು ಯೆಹೋವನು ಅನ್ನುತ್ತಾನೆ ಎಂಬದಾಗಿ ಹೇಳಿ ಕೂಡಲೆ ಕದತೆರೆದು ಓಡಿಹೋಗು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಎಣ್ಣೆಯ ಪಾತ್ರೆಯನ್ನು ತೆಗೆದುಕೊಂಡು, ಅವನ ತಲೆಯ ಮೇಲೆ ಹೊಯ್ದು, ಅವನಿಗೆ, ‘ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ, ಎಂದು ಯೆಹೋವ ದೇವರು ಹೇಳುತ್ತಾರೆ,’ ಎಂಬುದಾಗಿ ಹೇಳು. ಅನಂತರ ಕದವನ್ನು ತೆರೆದು ತಡಮಾಡದೆ ಓಡಿಹೋಗು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:3
23 ತಿಳಿವುಗಳ ಹೋಲಿಕೆ  

ನಂತರ ನಿಂಷಿಯ ಮಗನಾದ ಯೇಹುವನ್ನು ಇಸ್ರೇಲಿನ ರಾಜನನ್ನಾಗಿ ಅಭಿಷೇಕಿಸು. ಅಬೇಲ್ ಮೆಹೋಲದ ಶಾಫಾಟನ ಮಗನಾದ ಎಲೀಷನನ್ನು ನಿನ್ನ ಜಾಗದಲ್ಲಿ ಪ್ರವಾದಿಯನ್ನಾಗಿ ಅಭಿಷೇಕಿಸು.


ಜ್ಞಾನಿಗಳು ಹೊರಟುಹೋದ ನಂತರ ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎದ್ದೇಳು! ಮಗುವನ್ನು ಮತ್ತು ಅದರ ತಾಯಿಯನ್ನು ಕರೆದುಕೊಂಡು ಈಜಿಪ್ಟಿಗೆ ಓಡಿಹೋಗು. ಹೆರೋದನು ಮಗುವನ್ನು ಹುಡುಕಲು ಪ್ರಾರಂಭಿಸುವನು. ಅವನು ಮಗುವನ್ನು ಕೊಲ್ಲಬೇಕೆಂದಿದ್ದಾನೆ. ‘ಅಪಾಯವಿಲ್ಲ’ ಎಂದು ನಾನು ನಿನಗೆ ಹೇಳುವ ತನಕ ನೀನು ಈಜಿಪ್ಟಿನಲ್ಲೇ ಇರು” ಎಂದು ಹೇಳಿದನು.


“ರಾಜನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನನ್ನು ಮಹಾ ದೊಡ್ಡ ರಾಜನನ್ನಾಗಿಯೂ ಬಲಿಷ್ಠನಾದ ರಾಜನನ್ನಾಗಿಯೂ ಪ್ರಮುಖನಾದ ರಾಜನನ್ನಾಗಿಯೂ ಮಾಡಿದ್ದನು.


ಭೂಮಿಯ ಜನರು ಬಹು ಮುಖ್ಯರಲ್ಲ. ದೇವರು ಪರಲೋಕ ಸಮೂಹದವರಿಗೂ ಭೂಲೋಕದ ನಿವಾಸಿಗಳಿಗೂ ತನ್ನ ಚಿತ್ತಾನುಸಾರ ಮಾಡುತ್ತಾನೆ. ಯಾರೂ ಆತನನ್ನು ತಡೆಯಲಾರರು! ಯಾರೂ ಆತನನ್ನು ಪ್ರಶ್ನಿಸಲಾರರು!


ತನ್ನ ಆಳ್ವಿಕೆಯ ಎರಡನೇ ವರ್ಷದಲ್ಲಿ ನೆಬೂಕದ್ನೆಚ್ಚರನು ಕೆಲವು ಕನಸುಗಳನ್ನು ಕಂಡನು. ಆ ಕನಸುಗಳು ಅವನನ್ನು ತತ್ತರಿಸಿಬಿಟ್ಟವು ಮತ್ತು ಅವನಿಗೆ ನಿದ್ರೆ ಬರದಂತೆ ಮಾಡಿದವು.


ಯೋರಾಮನನ್ನು ಸಂಧಿಸಲು ಹೋದಾಗ ಅಹಜ್ಯನು ಕೊಲ್ಲಲ್ಪಡುವಂತೆ ಯೆಹೋವನು ಮಾಡಿದನು. ಅಹಜ್ಯನು ಯೇಹುವನ್ನು ಭೇಟಿಯಾಗಲು ಯೋರಾಮನೊಂದಿಗೆ ಹೋದನು. ಯೇಹುವಿನ ತಂದೆ ನಿಂಷಿ. ಅಹಾಬನ ಕುಟುಂಬವನ್ನು ನಾಶಗೊಳಿಸಲು ಯೆಹೋವನು ಯೇಹುವನ್ನು ಆರಿಸಿಕೊಂಡನು.


ಹಜಾಯೇಲನು, “ನಾನು ಬಲಾಢ್ಯನಾದ ಮನುಷ್ಯನಲ್ಲ! ನಾನು ಈ ಮಹತ್ಕಾರ್ಯಗಳನ್ನು ಮಾಡಲಾಗುವುದಿಲ್ಲ!” ಎಂದು ಹೇಳಿದನು. ಎಲೀಷನು, “ನೀನು ಅರಾಮ್ಯರ ರಾಜನಾಗುವೆಯೆಂದು ಯೆಹೋವನು ನನಗೆ ತಿಳಿಸಿದ್ದಾನೆ” ಎಂದು ಹೇಳಿದನು.


ಅದಕ್ಕೆ ಸಮುವೇಲನು, “ನಾನು ಹೊರಟರೆ ಸೌಲನಿಗೆ ಈ ಸುದ್ದಿಯು ತಿಳಿಯುತ್ತದೆ. ಆಗ ಅವನು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಾನೆ” ಎಂದನು. ಯೆಹೋವನು, “ಬೆತ್ಲೆಹೇಮಿಗೆ ಹೋಗು. ನಿನ್ನೊಡನೆ ಒಂದು ಎಳೆಕರುವನ್ನು ತೆಗೆದುಕೊಂಡು ಹೋಗು. ‘ನಾನು ಯೆಹೋವನಿಗೆ ಯಜ್ಞವನ್ನರ್ಪಿಸಲು ಬಂದಿದ್ದೇನೆ’ ಎಂದು ಹೇಳು.


ಸಮುವೇಲನು, “ನೀನು ಮೊದಲು ನಿನ್ನನ್ನು ಅಲ್ಪನೆಂದು ತಿಳಿದಿದ್ದೆ. ಯೆಹೋವನು ನಿನ್ನನ್ನು ಇಸ್ರೇಲರಿಗೆ ರಾಜನನ್ನಾಗಿ ಆರಿಸಿಕೊಂಡದ್ದರಿಂದ ಇಸ್ರೇಲ್ ಕುಲಗಳಿಗೆ ನಾಯಕನಾದೆ.


ಒಂದು ದಿನ ಸಮುವೇಲನು ಸೌಲನಿಗೆ, “ಯೆಹೋವನು ಇಸ್ರೇಲರ ಮೇಲೆ ನಿನ್ನನ್ನು ರಾಜನನ್ನಾಗಿ ಅಭಿಷೇಕಿಸಲು ನನ್ನನ್ನು ಕಳುಹಿಸಿದನು. ಈಗ ಯೆಹೋವನ ಸಂದೇಶವನ್ನು ಕೇಳು.


“ನಾಳೆ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ಒಬ್ಬ ಮನುಷ್ಯನನ್ನು ಕಳುಹಿಸುತ್ತೇನೆ. ಅವನು ಬೆನ್ಯಾಮೀನ್ ಕುಟುಂಬಕ್ಕೆ ಸೇರಿದವನು. ನೀನು ಅವನನ್ನು ಅಭಿಷೇಕಿಸು. ನನ್ನ ಜನರಾದ ಇಸ್ರೇಲರಿಗೆ ಅವನು ರಾಜನಾಗುತ್ತಾನೆ. ಈ ಮನುಷ್ಯನು ನನ್ನ ಜನರನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ. ನನ್ನ ಜನರ ಸಂಕಟವನ್ನು ನಾನು ನೋಡಿದ್ದೇನೆ; ನನ್ನ ಜನರ ಗೋಳನ್ನು ನಾನು ಆಲಿಸಿದ್ದೇನೆ” ಎಂದು ತಿಳಿಸಿದ್ದನು.


ಬಳಿಕ ಮೋಶೆ ಸ್ವಲ್ಪ ಅಭಿಷೇಕತೈಲವನ್ನು ಆರೋನನ ತಲೆಗೆ ಹೊಯಿದು ಅವನನ್ನು ಪವಿತ್ರಗೊಳಿಸಿದನು.


ಅಭಿಷೇಕತೈಲವನ್ನು ತೆಗೆದುಕೊಂಡು ಆರೋನನ ತಲೆಯ ಮೇಲೆ ಸುರಿ.


“ಕೇಳಿರಿ! ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದ್ದರಿಂದ ನೀವು ಹಾವುಗಳಂತೆ ಸೂಕ್ಷ್ಮ ಬುದ್ದಿಯುಳ್ಳವರಾಗಿರಿ, ಪಾರಿವಾಳಗಳಂತೆ ಯಾವ ಹಾನಿಯನ್ನೂ ಮಾಡದಿರಿ.


ಆಗ ಸ್ತ್ರೀಯೊಬ್ಬಳು ಬಹು ಬೆಲೆಬಾಳುವ ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಬಂದು ಊಟಕ್ಕೆ ಕುಳಿತ್ತಿದ್ದ ಯೇಸುವಿನ ತಲೆಯ ಮೇಲೆ ಆ ಸುಗಂಧ ತೈಲವನ್ನು ಸುರಿದಳು.


ಸಮುವೇಲನು ವಿಶೇಷವಾದ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ಸೌಲನ ತಲೆಯ ಮೇಲೆ ಆ ಎಣ್ಣೆಯನ್ನು ಸುರಿದನು. ಸಮುವೇಲನು ಸೌಲನಿಗೆ ಮುದ್ದಿಟ್ಟು, “ಯೆಹೋವನು ತನ್ನ ಜನರನ್ನು ಮುಂದೆ ನಡೆಸಲು ನಿನ್ನನ್ನು ಅವರಿಗೆ ನಾಯಕನನ್ನಾಗಿ ಅಭಿಷೇಕಿಸಿದ್ದಾನೆ. ನೀನು ಯೆಹೋವನ ಜನರನ್ನು ಆಳುವೆ; ಅವರನ್ನು ಸುತ್ತುವರೆದಿರುವ ಶತ್ರುಗಳಿಂದ ರಕ್ಷಿಸುವೆ. ಯೆಹೋವನು ತನ್ನ ಜನರನ್ನು ಆಳುವುದಕ್ಕಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. ಇದು ನಿಜವೆಂಬುದಕ್ಕೆ ಸಾಕ್ಷಿಯೇನೆಂದರೆ:


ಅಲ್ಲಿ ಯಾಜಕನಾದ ಚಾದೋಕನು ಮತ್ತು ಪ್ರವಾದಿಯಾದ ನಾತಾನನು ಅವನನ್ನು ಇಸ್ರೇಲಿನ ನೂತನ ರಾಜನನ್ನಾಗಿ ಅಭಿಷೇಕಿಸಲಿ. ಅನಂತರ ತುತ್ತೂರಿಯನ್ನು ಊದಿರಿ; ಎಲ್ಲರೂ ‘ರಾಜನಾದ ಸೊಲೊಮೋನನು ಚಿರಂಜೀವಿಯಾಗಿರಲಿ’ ಎಂದು ಆರ್ಭಟಿಸಲಿ.


ಯೇಹು ಮೇಲೆದ್ದು ಮನೆಯೊಳಕ್ಕೆ ಹೋದನು. ಆಗ ಆ ತರುಣ ಪ್ರವಾದಿಯು ಯೇಹುವಿನ ತಲೆಯ ಮೇಲೆ ಎಣ್ಣೆಯನ್ನು ಸುರಿದು ಯೇಹುವಿಗೆ, “ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುವನು: ‘ಯೆಹೋವನ ಜನರಾದ ಇಸ್ರೇಲರಿಗೆ ನೂತನ ರಾಜನನ್ನಾಗಿ ನಾನು ನಿನ್ನನ್ನು ಅಭಿಷೇಕಿಸುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು