30 ಯೇಹುವು ಇಜ್ರೇಲಿಗೆ ಹೋದನು. ಈಜೆಬೆಲಳಿಗೆ ಈ ಸುದ್ದಿಯು ತಿಳಿಯಿತು. ಅವಳು ತಲೆಕೂದಲನ್ನು ಸುಂದರವಾಗಿ ಕಟ್ಟಿಕೊಂಡು, ಅಲಂಕರಿಸಿಕೊಂಡಳು. ನಂತರ ಅವಳು ಹೊರಗೆ ನೋಡುತ್ತಾ ಕಿಟಕಿಯ ಹತ್ತಿರ ನಿಂತುಕೊಂಡಳು.
30 ಯೇಹುವು ಇಜ್ರೆಯೇಲಿಗೆ ಬಂದನು. ಅಲ್ಲಿಗೆ ಅವನು ಬಂದಿದ್ದಾನೆಂದು ಈಜೆಬೆಲಳು ಕೇಳಿ, ಅವಳು ತನ್ನ ಕಣ್ಣುಗಳಿಗೆ ಕಾಡಿಗೆ ಹಚ್ಚಿಕೊಂಡು, ತನ್ನ ತಲೆಯನ್ನು ಶೃಂಗರಿಸಿಕೊಂಡು, ಕಿಟಕಿಯಿಂದ ಇಣಿಕಿ ನೋಡಿದಳು.
ಹಾಳಾಗಿಹೋದ ಯೆಹೂದವೇ, ನೀನು ಮಾಡುತ್ತಿರುವುದೇನು? ಅತ್ಯುತ್ತಮವಾದ ಕೆಂಪುಬಣ್ಣದ ಪೋಷಾಕನ್ನು ನೀನು ಧರಿಸಿಕೊಳ್ಳುತ್ತಿರುವುದೇಕೆ? ಸುವರ್ಣಾಭರಣಗಳಿಂದ ನಿನ್ನನ್ನು ಏಕೆ ಅಲಂಕರಿಸಿಕೊಳ್ಳುತ್ತಿರುವೆ? ಕಣ್ಣಿಗೆ ಕಾಡಿಗೆಯನ್ನು ಏಕೆ ಹಚ್ಚುತ್ತಿರುವೆ? ನೀನು ಅಲಂಕಾರ ಮಾಡಿಕೊಳ್ಳುವದೆಲ್ಲ ವ್ಯರ್ಥ. ನಿನ್ನ ಪ್ರಿಯತಮರು ನಿನ್ನನ್ನು ತಿರಸ್ಕರಿಸುತ್ತಾರೆ. ಅವರು ನಿನ್ನನ್ನು ಕೊಲೆಮಾಡುವ ಪ್ರಯತ್ನದಲ್ಲಿದ್ದಾರೆ.
“ಅವರು ದೂರ ಪ್ರಾಂತ್ಯಗಳಿಂದ ಪುರುಷರನ್ನು ಕರಿಸಿದರು. ಅವರಿಗೆ ನೀನು ಸಂದೇಶ ಕಳುಹಿಸಿದೆ. ಅವರು ನಿನ್ನನ್ನು ನೋಡಲು ಬಂದರು. ಅವರಿಗಾಗಿ ನೀನು ಸ್ನಾನ ಮಾಡಿ, ನಿನ್ನ ಕಣ್ಣುಗಳಿಗೆ ಕಾಡಿಗೆ ಹಚ್ಚಿ, ನಿನ್ನ ಆಭರಣಗಳನ್ನು ಧರಿಸಿಕೊಂಡೆ.
ಮೌನವಾಗಿ ನರಳಾಡು. ನಿನ್ನ ಸತ್ತ ಹೆಂಡತಿಗಾಗಿ ಗಟ್ಟಿಯಾಗಿ ರೋಧಿಸಬೇಡ. ನೀನು ಯಾವಾಗಲೂ ತೊಡುವ ಬಟ್ಟೆಯನ್ನು ತೊಟ್ಟುಕೋ. ಮುಂಡಾಸವನ್ನು ಕಟ್ಟಿಕೋ. ಕಾಲಿಗೆ ಕೆರವನ್ನು ಮೆಟ್ಟಿಕೋ, ನಿನ್ನ ದುಃಖವನ್ನು ತೋರಿಸಲು ಮೀಸೆಯನ್ನು ಮುಚ್ಚಿಕೊಳ್ಳಬೇಡ. ಮರಣದ ಊಟವನ್ನು ಮಾಡದಿರು.”