2 ಅರಸುಗಳು 9:34 - ಪರಿಶುದ್ದ ಬೈಬಲ್34 ಯೇಹುವು ಮನೆಯೊಳಕ್ಕೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು. ನಂತರ ಅವನು, “ಈಗ ಶಾಪಗ್ರಸ್ತಳಾದ ಆ ಸ್ತ್ರೀಯನ್ನು ನೋಡಿ. ಅವಳು ರಾಜನ ಮಗಳಾದ್ದರಿಂದ ಸಮಾಧಿ ಮಾಡಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅನಂತರ ಅವನು ಅರಮನೆಯೊಳಕ್ಕೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಸೇವಕರಿಗೆ, “ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ನೋಡಿ ಅದನ್ನು ಸಮಾಧಿಮಾಡಿರಿ, ಆಕೆಯು ರಾಜಪುತ್ರಿಯಾಗಿರುತ್ತಾಳಲ್ಲವೇ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಅನಂತರ ಅವನು ಅರಮನೆಯೊಳಗೆ ಹೋಗಿ, ಅನ್ನಪಾನಗಳನ್ನು ತೆಗೆದುಕೊಂಡು, ತನ್ನ ಸೇವಕರಿಗೆ, “ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ಸರಿಯಾಗಿ ಸಮಾಧಿಮಾಡಿರಿ; ಆಕೆ ರಾಜಪುತ್ರಿಯಾಗಿರುತ್ತಾಳಷ್ಟೆ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಅನಂತರ ಅವನು ಅರಮನೆಯೊಳಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಸೇವಕರಿಗೆ - ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ನೋಡಿಕೊಂಡು ಸಮಾಧಿಮಾಡಿರಿ; ಆಕೆಯು ರಾಜಪುತ್ರಿಯಾಗಿರುತ್ತಾಳಷ್ಟೆ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಯೇಹುವು ಒಳಗೆ ಹೋಗಿ ತಿಂದು ಕುಡಿದನು. ಆಮೇಲೆ ಅವರಿಗೆ, “ನೀವು ಹೋಗಿ ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ಕಂಡು, ಅವಳನ್ನು ಹೂಳಿಡಿರಿ. ಏಕೆಂದರೆ ಅವಳು ಅರಸನ ಮಗಳು,” ಎಂದನು. ಅಧ್ಯಾಯವನ್ನು ನೋಡಿ |