Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:4 - ಪರಿಶುದ್ದ ಬೈಬಲ್‌

4 ತರುಣ ಪ್ರವಾದಿಯು ರಾಮೋತ್‌ಗಿಲ್ಯಾದಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಯೌವನಸ್ಥನಾದ ಪ್ರವಾದಿಯು ಎಲೀಷನ ಅಪ್ಪಣೆಯಂತೆ ರಾಮೋತ್ ಗಿಲ್ಯಾದಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಗ ಪ್ರವಾದಿಯ ಸೇವಕನಾದ ಆ ಯೌವನಸ್ಥನು ರಾಮೋತ್ ಗಿಲ್ಯಾದಿಗೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಪ್ರವಾದಿಯ ಸೇವಕನಾದ ಆ ಯೌವನಸ್ಥನು ರಾಮೋತ್‍ಗಿಲ್ಯಾದಿಗೆ ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹಾಗೆಯೇ ಯೌವನಸ್ಥನಾದ ಪ್ರವಾದಿಯು ಗಿಲ್ಯಾದಿನ ರಾಮೋತಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:4
3 ತಿಳಿವುಗಳ ಹೋಲಿಕೆ  

ರಾಮೋತ್ ಗಿಲ್ಯಾದಿಗೆ ಬೆನ್‌ಗೆಬೆರನು ರಾಜ್ಯಪಾಲನಾಗಿದ್ದನು. ಗಿಲ್ಯಾದಿನ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ ಮತ್ತು ಪಟ್ಟಣಗಳೆಲ್ಲಕ್ಕೂ ಅವನು ರಾಜ್ಯಪಾಲನಾಗಿದ್ದನು. ಅವನು ಬಾಷಾನಿನ ಅರ್ಗೋಬ್ ಜಿಲ್ಲೆಗೂ ರಾಜ್ಯಪಾಲನಾಗಿದ್ದನು. ಈ ಪ್ರದೇಶದಲ್ಲಿ ಗೋಡೆಗಳಿಂದ ಸುತ್ತುವರಿದ ಅರವತ್ತು ನಗರಗಳಿದ್ದವು. ಈ ನಗರಗಳ ದ್ವಾರದಲ್ಲಿ ಹಿತ್ತಾಳೆಯ ಸಲಾಕೆಗಳುಳ್ಳ ಬಾಗಿಲುಗಳಿದ್ದವು.


ಪ್ರವಾದಿಯಾದ ಎಲೀಷನು ಪ್ರವಾದಿಗಳ ಗುಂಪಿನಿಂದ ಒಬ್ಬನನ್ನು ಕರೆದು ಅವನಿಗೆ, “ಎಣ್ಣೆಯಿರುವ ಈ ಸಣ್ಣ ಸೀಸೆಯನ್ನು ನಿನ್ನ ಕೈಗಳಲ್ಲಿ ತೆಗೆದುಕೊಂಡು ರಾಮೋತ್‌ಗಿಲ್ಯಾದಿಗೆ ಹೋಗು.


ಆ ತರುಣನು ಅಲ್ಲಿಗೆ ಬಂದಾಗ ಸೇನಾಧಿಪತಿಗಳು ಕುಳಿತಿರುವುದನ್ನು ನೋಡಿ, “ಸೇನಾಧಿಪತಿಯೇ, ನಿನಗೆ ಒಂದು ಸಂದೇಶವಿದೆ” ಎಂದು ಹೇಳಿದನು. ಯೇಹುವು, “ನಾವೆಲ್ಲರೂ ಇಲ್ಲಿದ್ದೇವೆ. ನಮ್ಮಲ್ಲಿ ಸಂದೇಶವಿರುವುದು ಯಾರಿಗೆ?” ಎಂದು ಕೇಳಿದನು. ಆ ತರುಣನು, “ಸಂದೇಶವು ಸೇನಾಧಿಪತಿಯಾದ ನಿನಗೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು