Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:6 - ಪರಿಶುದ್ದ ಬೈಬಲ್‌

6 ಯೇಹು ಮೇಲೆದ್ದು ಮನೆಯೊಳಕ್ಕೆ ಹೋದನು. ಆಗ ಆ ತರುಣ ಪ್ರವಾದಿಯು ಯೇಹುವಿನ ತಲೆಯ ಮೇಲೆ ಎಣ್ಣೆಯನ್ನು ಸುರಿದು ಯೇಹುವಿಗೆ, “ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುವನು: ‘ಯೆಹೋವನ ಜನರಾದ ಇಸ್ರೇಲರಿಗೆ ನೂತನ ರಾಜನನ್ನಾಗಿ ನಾನು ನಿನ್ನನ್ನು ಅಭಿಷೇಕಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೇಹುವು ಎದ್ದು ಒಳಗಿನ ಕೋಣೆಗೆ ಹೋಗಲು ಆ ಯೌವನಸ್ಥನು ಅವನ ತಲೆಯ ಮೇಲೆ ಎಣ್ಣೆಯನ್ನು ಹೊಯ್ದು, “ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ಕೇಳು, ಆತನು ನಿನಗೆ, ‘ನಾನು ನಿನ್ನನ್ನು ನನ್ನ ಪ್ರಜೆಯಾದ ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯೇಹುವು ಎದ್ದು ಒಳಗಿನ ಕೋಣೆಗೆ ಹೋಗಲು, ಆ ಯೌವನಸ್ಥನು ಇವನ ತಲೆಯ ಮೇಲೆ ಎಣ್ಣೆಯನ್ನು ಹೊಯ್ದು, “ಇಸ್ರಯೇಲ್ ದೇವರಾದ ಸರ್ವೇಶ್ವರನ ಮಾತನ್ನು ಕೇಳು; ಅವರು ನಿನಗೆ, ‘ನಾನು ನಿನ್ನನ್ನು ನನ್ನ ಪ್ರಜೆಯಾದ ಇಸ್ರಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೇಹುವು ಎದ್ದು ಒಳಗಿನ ಕೋಣೆಗೆ ಹೋಗಲು ಆ ಯೌವನಸ್ಥನು ಇವನ ತಲೆಯ ಮೇಲೆ ಎಣ್ಣೆಯನ್ನು ಹೊಯ್ದು - ಇಸ್ರಾಯೇಲ್‍ದೇವರಾದ ಯೆಹೋವನ ಮಾತನ್ನು ಕೇಳು - ಆತನು ನಿನಗೆ - ನಾನು ನಿನ್ನನ್ನು ನನ್ನ ಪ್ರಜೆಯಾದ ಇಸ್ರಾಯೇಲ್ಯರ ಅರಸನಾಗುವದಕ್ಕೆ ಅಭಿಷೇಕಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೇಹುವು ಎದ್ದು ಮನೆಯೊಳಕ್ಕೆ ಹೋದನು. ಆಗ ಪ್ರವಾದಿಯು ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ಯೆಹೋವ ದೇವರ ಜನರಾದ ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:6
20 ತಿಳಿವುಗಳ ಹೋಲಿಕೆ  

ಯೋರಾಮನನ್ನು ಸಂಧಿಸಲು ಹೋದಾಗ ಅಹಜ್ಯನು ಕೊಲ್ಲಲ್ಪಡುವಂತೆ ಯೆಹೋವನು ಮಾಡಿದನು. ಅಹಜ್ಯನು ಯೇಹುವನ್ನು ಭೇಟಿಯಾಗಲು ಯೋರಾಮನೊಂದಿಗೆ ಹೋದನು. ಯೇಹುವಿನ ತಂದೆ ನಿಂಷಿ. ಅಹಾಬನ ಕುಟುಂಬವನ್ನು ನಾಶಗೊಳಿಸಲು ಯೆಹೋವನು ಯೇಹುವನ್ನು ಆರಿಸಿಕೊಂಡನು.


ಯೇಹುವಿನ ತಲೆಯ ಮೇಲೆ ಈ ಸಣ್ಣ ಸೀಸೆಯಲ್ಲಿರುವ ಎಣ್ಣೆಯನ್ನು ಸುರಿದುಬಿಡು. ನಂತರ ಅವನಿಗೆ, ‘ಯೆಹೋವನು ಹೀಗೆನ್ನುತ್ತಾನೆ: ನಾನು ನಿನ್ನನ್ನು ಇಸ್ರೇಲಿನ ನೂತನ ರಾಜನನ್ನಾಗಿ ಅಭಿಷೇಕಿಸಿದ್ದೇನೆ!’ ಎಂದು ಹೇಳು. ಆ ಬಳಿಕ ಬಾಗಿಲನ್ನು ತೆಗೆದು ಓಡಿಬಿಡು. ಅಲ್ಲಿ ಇರಬೇಡ!” ಎಂದು ಹೇಳಿದನು.


ನಂತರ ನಿಂಷಿಯ ಮಗನಾದ ಯೇಹುವನ್ನು ಇಸ್ರೇಲಿನ ರಾಜನನ್ನಾಗಿ ಅಭಿಷೇಕಿಸು. ಅಬೇಲ್ ಮೆಹೋಲದ ಶಾಫಾಟನ ಮಗನಾದ ಎಲೀಷನನ್ನು ನಿನ್ನ ಜಾಗದಲ್ಲಿ ಪ್ರವಾದಿಯನ್ನಾಗಿ ಅಭಿಷೇಕಿಸು.


ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾಠ ಕಲಿಯುವದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು.


“ಈ ಶಿಕ್ಷೆಯನ್ನು ದೇವದೂತನು ಸಾರಿದನು. ಮಾನವ ಸಾಮ್ರಾಜ್ಯಗಳ ಮೇಲೆ ಮಹೋನ್ನತನಾದ ದೇವರು ಆಳುವನು. ಅವನು ಆ ಸಾಮ್ರಾಜ್ಯಗಳನ್ನು ತನಗೆ ಬೇಕಾದವರಿಗೆ ಒಪ್ಪಿಸುವನು, ಕನಿಷ್ಠರನ್ನು ನೇಮಿಸುವನು ಎಂಬುದು ಲೋಕದ ಜನರಿಗೆಲ್ಲ ತಿಳಿದುಬರಲಿ ಎಂದೇ ಅವನು ಸಾರಿದನು.


ಆತನು ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ. ಆತನು ಅರಸರನ್ನು ಬದಲಾಯಿಸುತ್ತಾನೆ. ಆತನು ಅರಸರಿಗೆ ಪ್ರಭುತ್ವವನ್ನು ಕೊಡುವನು. ಆತನು ಅವರ ಪ್ರಭುತ್ವವನ್ನು ಕಿತ್ತುಕೊಳ್ಳುವನು! ಜನರಿಗೆ ಜ್ಞಾನವನ್ನು ಕೊಟ್ಟು ಜ್ಞಾನಿಗಳನ್ನಾಗಿ ಮಾಡುವವನು ಆತನೇ. ಜನರಿಗೆ ವಿವೇಕವನ್ನು ಕೊಟ್ಟು ವಿವೇಕಿಗಳನ್ನಾಗಿ ಮಾಡುವವನು ಆತನೇ.


ತಾನು ಆರಿಸಿರುವ ಅರಸನಾದ ಸೈರಸನಿಗೆ ಯೆಹೋವನು ಹೇಳುವುದೇನೆಂದರೆ: “ನಾನು ಸೈರಸನ ಬಲಗೈಯನ್ನು ಹಿಡಿಯುವೆನು. ಅರಸರುಗಳಿಂದ ಅವರ ಅಧಿಕಾರವನ್ನು ತೆಗೆದುಬಿಡುವಂತೆ ಅವನಿಗೆ ಸಹಾಯ ಮಾಡುವೆನು. ನಗರದ್ವಾರಗಳು ಅವನ ಮುನ್ನುಗ್ಗುವಿಕೆಯನ್ನು ನಿಲ್ಲಿಸದು. ನಗರದ್ವಾರವನ್ನು ತೆರೆದು ಸೈರಸನು ಒಳಗೆ ಪ್ರವೇಶಿಸುವಂತೆ ಮಾಡುವೆನು.”


ಭೂಲೋಕದ ಯಾವ ಶಕ್ತಿಯೂ ಮನುಷ್ಯನನ್ನು ಉದ್ಧಾರ ಮಾಡಲಾರದು.


“ನಾನು ನಿನ್ನನ್ನು ಪ್ರಾಮುಖ್ಯ ವ್ಯಕ್ತಿಯನ್ನಾಗಿ ಮಾಡಿದೆ. ಇಸ್ರೇಲಿನ ಜನರಿಗೆ ನಿನ್ನನ್ನು ರಾಜನನ್ನಾಗಿ ನಾನು ಮಾಡಿದೆ. ಆದರೆ ನೀನು ಯಾರೊಬ್ಬಾಮನ ಮಾರ್ಗವನ್ನೇ ಅನುಸರಿಸಿದೆ. ಇಸ್ರೇಲಿನ ನನ್ನ ಜನರು ಪಾಪಮಾಡುವಂತೆ ನೀನು ಪ್ರೇರೇಪಿಸಿದೆ. ಅವರು ತಮ್ಮ ಪಾಪಗಳಿಂದ ನನ್ನನ್ನು ಕೋಪಗೊಳಿಸಿದರು.


ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆಂದು ನೀನು ಹಿಂದಿರುಗಿ ಹೋಗಿ ಯಾರೊಬ್ಬಾಮನಿಗೆ ತಿಳಿಸು. ಯೆಹೋವನು ಹೀಗೆನ್ನುತ್ತಾನೆ: ‘ಯಾರೊಬ್ಬಾಮನೇ, ಇಸ್ರೇಲಿನ ಜನರಲ್ಲೆಲ್ಲಾ ನಾನು ನಿನ್ನನ್ನು ಆರಿಸಿಕೊಂಡೆ. ನನ್ನ ಜನರನ್ನು ಆಳಲು ನಾನು ನಿನ್ನನ್ನು ನೇಮಿಸಿದೆ.


ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ನಿನ್ನನ್ನು ಇಸ್ರೇಲಿನ ರಾಜನಾಗಿ ಮಾಡಲು ಆತನು ಸಂತೋಷಪಟ್ಟಿರಬೇಕು. ದೇವರಾದ ಯೆಹೋವನು ಇಸ್ರೇಲನ್ನು ಸದಾ ಪ್ರೀತಿಸುತ್ತಾನೆ. ಆದ್ದರಿಂದಲೇ ಆತನು ನಿನ್ನನ್ನು ರಾಜನನ್ನಾಗಿ ನೇಮಿಸಿದನು. ನೀನು ಕಟ್ಟಳೆಗಳನ್ನು ಅನುಸರಿಸುತ್ತಿರುವೆ ಮತ್ತು ಜನರಿಗೆ ನ್ಯಾಯ ದೊರಕಿಸುತ್ತಿರುವೆ” ಎಂದು ಹೇಳಿದಳು.


ನಿನ್ನ ಸೇವಕನಾದ ನಾನು, ನೀನೇ ಆರಿಸಿಕೊಂಡಿರುವ ಜನರ ನಡುವೆ ಇದ್ದೇನೆ. ಇಲ್ಲಿ ಅನೇಕಾನೇಕ ಜನರಿದ್ದಾರೆ. ಅವರನ್ನು ಎಣಿಸಲಾಗದು, ಒಬ್ಬ ಆಡಳಿತಗಾರನು ಅವರ ಮಧ್ಯದಲ್ಲಿದ್ದು ಅನೇಕ ತೀರ್ಪುಗಳನ್ನು ಮಾಡಬೇಕಾಗುತ್ತದೆ.


ಅಲ್ಲಿ ಯಾಜಕನಾದ ಚಾದೋಕನು ಮತ್ತು ಪ್ರವಾದಿಯಾದ ನಾತಾನನು ಅವನನ್ನು ಇಸ್ರೇಲಿನ ನೂತನ ರಾಜನನ್ನಾಗಿ ಅಭಿಷೇಕಿಸಲಿ. ಅನಂತರ ತುತ್ತೂರಿಯನ್ನು ಊದಿರಿ; ಎಲ್ಲರೂ ‘ರಾಜನಾದ ಸೊಲೊಮೋನನು ಚಿರಂಜೀವಿಯಾಗಿರಲಿ’ ಎಂದು ಆರ್ಭಟಿಸಲಿ.


ಯೆಹೋವನು ಜನರನ್ನು ಬಡವರನ್ನಾಗಿಸುತ್ತಾನೆ. ಆತನು ಜನರನ್ನು ಹಣವಂತರನ್ನಾಗಿಸುತ್ತಾನೆ. ಯೆಹೋವನು ಜನರನ್ನು ದೀನರನ್ನಾಗಿಸುತ್ತಾನೆ. ಆತನು ಜನರನ್ನು ದೊಡ್ಡವರನ್ನಾಗಿಸುತ್ತಾನೆ.


ಯೆಹೋವನು ಬಡವರನ್ನು ಧೂಳಿನಿಂದ ಮೇಲಕ್ಕೆತ್ತುತ್ತಾನೆ. ಯೆಹೋವನು ದೀನರನ್ನು ತಿಪ್ಪೆಯಿಂದ ಮೇಲಕ್ಕೆತ್ತುತ್ತಾನೆ. ಯೆಹೋವನು ಬಡವರನ್ನು ರಾಜಕುಮಾರರೊಂದಿಗೆ ಕುಳ್ಳಿರಿಸುತ್ತಾನೆ. ಆತನು ಬಡವರನ್ನು ಗೌರವಪೀಠದಲ್ಲಿ ಕುಳ್ಳಿರಿಸುತ್ತಾನೆ. ಲೋಕವೂ ಅದರ ಅಡಿಪಾಯಗಳೂ ಯೆಹೋವನವೇ. ಆತನು ಆ ಕಂಬಗಳ ಮೇಲೆ ಲೋಕವನ್ನು ನಿಲ್ಲಿಸಿರುವನು.


ಸಮುವೇಲನು ವಿಶೇಷವಾದ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ಸೌಲನ ತಲೆಯ ಮೇಲೆ ಆ ಎಣ್ಣೆಯನ್ನು ಸುರಿದನು. ಸಮುವೇಲನು ಸೌಲನಿಗೆ ಮುದ್ದಿಟ್ಟು, “ಯೆಹೋವನು ತನ್ನ ಜನರನ್ನು ಮುಂದೆ ನಡೆಸಲು ನಿನ್ನನ್ನು ಅವರಿಗೆ ನಾಯಕನನ್ನಾಗಿ ಅಭಿಷೇಕಿಸಿದ್ದಾನೆ. ನೀನು ಯೆಹೋವನ ಜನರನ್ನು ಆಳುವೆ; ಅವರನ್ನು ಸುತ್ತುವರೆದಿರುವ ಶತ್ರುಗಳಿಂದ ರಕ್ಷಿಸುವೆ. ಯೆಹೋವನು ತನ್ನ ಜನರನ್ನು ಆಳುವುದಕ್ಕಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. ಇದು ನಿಜವೆಂಬುದಕ್ಕೆ ಸಾಕ್ಷಿಯೇನೆಂದರೆ:


ಆ ತರುಣನು ಅಲ್ಲಿಗೆ ಬಂದಾಗ ಸೇನಾಧಿಪತಿಗಳು ಕುಳಿತಿರುವುದನ್ನು ನೋಡಿ, “ಸೇನಾಧಿಪತಿಯೇ, ನಿನಗೆ ಒಂದು ಸಂದೇಶವಿದೆ” ಎಂದು ಹೇಳಿದನು. ಯೇಹುವು, “ನಾವೆಲ್ಲರೂ ಇಲ್ಲಿದ್ದೇವೆ. ನಮ್ಮಲ್ಲಿ ಸಂದೇಶವಿರುವುದು ಯಾರಿಗೆ?” ಎಂದು ಕೇಳಿದನು. ಆ ತರುಣನು, “ಸಂದೇಶವು ಸೇನಾಧಿಪತಿಯಾದ ನಿನಗೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು