2 ಅರಸುಗಳು 9:7 - ಪರಿಶುದ್ದ ಬೈಬಲ್7 ನೀನು ನಿನ್ನ ರಾಜನಾದ ಅಹಾಬನ ಕುಟುಂಬವನ್ನು ನಾಶಗೊಳಿಸಲೇಬೇಕು. ನನ್ನ ಸೇವಕರಾದ ಪ್ರವಾದಿಗಳ ಸಾವಿಗೆ ಮತ್ತು ಯೆಹೋವನ ಸೇವಕರನ್ನು ಕೊಲ್ಲಿಸಿದುದಕ್ಕೆ ಈಜೆಬೆಲಳನ್ನು ನಾನು ಈ ರೀತಿ ಶಿಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಯೆಹೋವನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿತೀರಿಸಿದಂತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಸರ್ವೇಶ್ವರನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿ ತೀರಿಸಿದಂತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಯೆಹೋವಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿತೀರಿಸಿದಂತಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾನು ಪ್ರವಾದಿಗಳಾದ ನನ್ನ ಸೇವಕರ ರಕ್ತಕ್ಕೋಸ್ಕರವೂ ಈಜೆಬೆಲಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವಂತೆ ನೀನು ನಿನ್ನ ಯಜಮಾನನಾದ ಅಹಾಬನ ಮನೆಯನ್ನು ಸಂಹರಿಸಬೇಕು. ಅಧ್ಯಾಯವನ್ನು ನೋಡಿ |
ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)
ಆದರೆ ನಿನ್ನ ವಿರುದ್ಧವಾಗಿ ಇವುಗಳನ್ನು ಹೇಳಬೇಕಾಗಿದೆ. ಯೆಜೆಬೇಲ್ ಎಂಬ ಸ್ತ್ರೀಯು ತನ್ನ ಇಷ್ಟದಂತೆ ಮಾಡಲು ಅವಕಾಶಕೊಟ್ಟಿರುವೆ. ಆಕೆಯು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ತನ್ನ ಬೋಧನೆಗಳಿಂದ ನನ್ನ ಸೇವಕರನ್ನು ನನ್ನಿಂದ ದೂರ ಸೆಳೆಯುತ್ತಿದ್ದಾಳೆ. ಲೈಂಗಿಕ ಪಾಪಗಳನ್ನು ಮಾಡುವಂತೆಯೂ ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವಂತೆಯೂ ಆಕೆಯು ನನ್ನ ಜನರನ್ನು ಪ್ರೇರೇಪಿಸುತ್ತಿದ್ದಾಳೆ.