2 ಕೊರಿಂಥದವರಿಗೆ 1:1 - ಪರಿಶುದ್ದ ಬೈಬಲ್1 ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಬರೆಯುವ ಪತ್ರ. ನಾನು ದೇವರ ಚಿತ್ತಾನುಸಾರ ಅಪೊಸ್ತಲನಾಗಿದ್ದೇನೆ. ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಇಡೀ ಅಖಾಯ ಸೀಮೆಯಲ್ಲಿರುವ ದೇವಜನರೆಲ್ಲರಿಗೂ ನಾನು ಈ ಪತ್ರವನ್ನು ಕ್ರಿಸ್ತನಲ್ಲಿ ನಮ್ಮ ಸಹೋದರನಾದ ತಿಮೊಥೆಯನೊಡನೆ ಸೇರಿ ಬರೆಯುತ್ತಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ಸಹೋದರನಾದ ತಿಮೊಥೆಯನೂ ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಅಖಾಯ ಸೀಮೆಯಲ್ಲಿ ಇರುವ ದೇವಜನರೆಲ್ಲರಿಗೂ ಬರೆಯುವುದೇನಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಕೊರಿಂಥದಲ್ಲಿರುವ ದೇವರ ಸಭೆಗೂ ಅಖಾಯ ಸೀಮೆಯಲ್ಲಿರುವ ಎಲ್ಲಾ ದೇವಜನರಿಗೂ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾದ ಪೌಲನು ಸಹೋದರ ತಿಮೊಥೇಯನೊಡನೆ ಸೇರಿ ಬರೆಯುವ ಪತ್ರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ಸಹೋದರನಾದ ತಿಮೊಥೆಯನೂ ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಅಖಾಯ ಸೀಮೆಯಲ್ಲೆಲ್ಲಾ ಇರುವ ದೇವಜನರೆಲ್ಲರಿಗೂ ಬರೆಯುವದೇನಂದರೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ, ಕೊರಿಂಥದಲ್ಲಿರುವ ದೇವರ ಸಭೆಗೆ ಮತ್ತು ಅಖಾಯ ಪ್ರಾಂತದಲ್ಲಿರುವ ಎಲ್ಲಾ ಪವಿತ್ರ ಜನರಿಗೆ ಬರೆಯುವ ಪತ್ರ: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಪಾವ್ಲುನ್ ದೆವಾಚ್ಯಾ ಮನಾನ್ ಜೆಜು ಕ್ರಿಸ್ತಾಚೊ ಅಪೊಸ್ತಲ್ ಅನಿ ಅಮ್ಚ್ಯಾ ಭಾವಾ ತಿಮೊತಿನ್ ಕೊರಿಂಥ್ ಮನ್ತಲ್ಯಾ ಶಾರಾತ್ ಹೊತ್ತ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ಅನಿ ಅಖಾಯಿಯಾ ಮನ್ತಲ್ಯಾ ಪ್ರಾಂತ್ಯಾತ್ ಹೊತ್ತ್ಯಾ ಸಗ್ಳ್ಯಾ ದೆವಾಚ್ಯಾ ಲೊಕಾಕ್ನಿ ಲಿವ್ತಲೆ. ಅಧ್ಯಾಯವನ್ನು ನೋಡಿ |
ಆದುದರಿಂದ ಅಥೆನ್ಸಿನಲ್ಲಿ ಉಳಿದುಕೊಂಡು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಲು ತೀರ್ಮಾನಿಸಿದೆವು. ತಿಮೊಥೆಯನು ನಮ್ಮ ಸಹೋದರ. ಅವನು ದೇವರಿಗೋಸ್ಕರ ನಮ್ಮೊಡನೆ ಕೆಲಸ ಮಾಡುತ್ತಿದ್ದಾನೆ. ಕ್ರಿಸ್ತನ ವಿಷಯವಾದ ಸುವಾರ್ತೆಯನ್ನು ಜನರಿಗೆ ತಿಳಿಸಲು ಅವನು ನಮಗೆ ಸಹಾಯ ಮಾಡುತ್ತಿದ್ದಾನೆ. ನಿಮ್ಮ ನಂಬಿಕೆಯನ್ನು ಬಲಗೊಳಿಸಲು ಮತ್ತು ನಿಮ್ಮನ್ನು ಸಂತೈಸಲು ತಿಮೊಥೆಯನನ್ನು ಕಳುಹಿಸಿದ್ದೇವೆ.