13-14 ನೀವು ಓದಿ ಅರ್ಥಮಾಡಿಕೊಳ್ಳಬಲ್ಲ ಸಂಗತಿಗಳನ್ನು ಮಾತ್ರ ನಾನು ನಿಮಗೆ ಬರೆಯುತ್ತೇನೆ. ನಮ್ಮ ವಿಷಯವಾದ ಕೆಲವು ಸಂಗತಿಗಳನ್ನು ನೀವು ಈಗಾಗಲೇ ಸ್ಪಲ್ಪ ಅರ್ಥಮಾಡಿಕೊಂಡಂತೆ ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುತ್ತೀರೆಂಬ ನಿರೀಕ್ಷೆ ನನಗಿದೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಮತ್ತೆ ಬಂದಾಗ ನಾವು ನಿಮ್ಮ ವಿಷಯದಲ್ಲಿ ಹೆಮ್ಮೆಪಡುವಂತೆ ನೀವೂ ನಮ್ಮ ವಿಷಯದಲ್ಲಿ ಹೆಮ್ಮೆಪಡಲಾಗುವಂತೆ ನೀವು ಅರ್ಥಮಾಡಿಕೊಳ್ಳುತ್ತೀರಿ ಎಂಬ ಭರವಸೆ ನನಗಿದೆ.
13-14 ನೀವು ಓದಿ ಗ್ರಹಿಸಿಕೊಳ್ಳಬಲ್ಲ ವಿಷಯಗಳನ್ನು ಮಾತ್ರವೇ ನಾವು ನಿಮಗೆ ಬರೆದಿದ್ದೇವೆ. ನಮ್ಮನ್ನು ನೀವಿನ್ನೂ ಭಾಗಶಃ ಅರಿತುಕೊಂಡಿದ್ದೀರಿ. ಮುಂದಕ್ಕಾದರೂ ನೀವು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುವಿರೆಂಬ ಭರವಸೆ ನನಗಿದೆ. ಹಾಗೆಯೇ ‘ಪ್ರಭುವಿನ ದಿನದಂದು ನಾವು ನಿಮ್ಮನ್ನು ಕುರಿತು ಹೆಮ್ಮೆಪಡುವಂತೆ ನೀವೂ ನಮ್ಮನ್ನು ಕುರಿತು ಹೆಮ್ಮೆಪಡುವಿರಿ.
ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.
ಪ್ರಭುವಿನ ಭಯ ಎಂದರೇನೆಂಬುದು ನಮಗೆ ತಿಳಿದಿದೆ. ಆದ್ದರಿಂದ ಸತ್ಯವನ್ನು ಸ್ವೀಕರಿಸಿಕೊಳ್ಳುವಂತೆ ಜನರಿಗೆ ಸಹಾಯ ಮಾಡಲು ನಾವು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲನು. ನೀವು ಸಹ ನಿಮ್ಮ ಹೃದಯಗಳಲ್ಲಿ ನಮ್ಮನ್ನು ತಿಳಿದುಕೊಂಡಿದ್ದೀರೆಂದು ನಂಬುತ್ತೇವೆ.
ಬೆಳಗಾದಾಗ ನಾವಿಕರು ಭೂಮಿಯನ್ನು ಕಂಡರು. ಆದರೆ ಅದು ಯಾವ ಭೂಮಿಯೆಂದು ಗೊತ್ತಿರಲಿಲ್ಲ. ಅವರು ಕಂಡದ್ದು ಉಸುಬಿನ ದಡವುಳ್ಳ ಒಂದು ಕೊಲ್ಲಿ. ಸಾಧ್ಯವಾದರೆ ಹಡಗನ್ನು ಆ ಕೊಲ್ಲಿಗೆ ನಡೆಸಬೇಕೆಂದು ನಾವಿಕರು ಬಯಸಿದರು.