Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:19 - ಪರಿಶುದ್ದ ಬೈಬಲ್‌

19 ಸೀಲನು, ತಿಮೊಥೆಯನು ಮತ್ತು ನಾನು ನಿಮಗೆ ಬೋಧಿಸಿದ ದೇವರ ಮಗನಾದ ಯೇಸುಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಎರಡು ರೀತಿಯಲ್ಲಿರಲಿಲ್ಲ. ಕ್ರಿಸ್ತನಲ್ಲಿ ಯಾವಾಗಲೂ ಇರುವಂಥದ್ದು “ಹೌದು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನೂ, ಸಿಲ್ವಾನನೂ, ತಿಮೊಥೆಯನೂ ನಿಮ್ಮಲ್ಲಿ ಪ್ರಸಿದ್ಧಿಪಡಿಸಿದ ದೇವರ ಮಗನಾದ ಯೇಸು ಕ್ರಿಸ್ತನು ಈ ಕ್ಷಣ “ಹೌದು” ಮರುಕ್ಷಣ “ಇಲ್ಲ” ಎಂದು ಹೇಳುವವನಲ್ಲ. ಆತನಲ್ಲಿ ಹೌದೆಂಬುದೇ ನೆಲೆಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಾವು, ಅಂದರೆ ಸಿಲ್ವಾನ, ತಿಮೊಥೆಯ ಮತ್ತು ನಾನು, ಪ್ರಚಾರಮಾಡಿದ ದೇವರ ಪುತ್ರರಾದ ಯೇಸುಕ್ರಿಸ್ತರು, ಈ ಕ್ಷಣ ಹೌದು, ಮರುಕ್ಷಣ ಇಲ್ಲ ಎಂದು ಹೇಳುವವರಲ್ಲ, ಅವರು ದೇವರ ತಥಾಸ್ತು ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾವು ಅಂದರೆ ನಾನೂ ಸಿಲ್ವಾನನೂ ತಿಮೊಥೆಯನೂ ನಿಮ್ಮಲ್ಲಿ ಪ್ರಸಿದ್ಧಿಪಡಿಸಿದ ದೇವರ ಮಗನಾದ ಯೇಸು ಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಎರಡು ಪ್ರಕಾರವಾಗಿರಲಿಲ್ಲ; ಆತನಲ್ಲಿ ಹೌದೆಂಬದೇ ನೆಲೆಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾನು, ಸಿಲ್ವಾನ ಮತ್ತು ತಿಮೊಥೆಯನು ನಿಮ್ಮಲ್ಲಿ ಬೋಧಿಸಿದ ದೇವರ ಪುತ್ರನಾದ ಯೇಸು ಕ್ರಿಸ್ತನು ಒಮ್ಮೆ “ಹೌದು,” ಒಮ್ಮೆ “ಅಲ್ಲ” ಎಂದಾಗಿರುವುದಿಲ್ಲ. ಯಾವಾಗಲೂ ಅದು ಕ್ರಿಸ್ತನಲ್ಲಿ ಹೌದು ಎಂದೇ ಆಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅಮಿ ಮಟ್ಲ್ಯಾರ್ ಸಿಲ್ವಾನಾನ್, ತಿಮೊತಿನ್, ಅನಿ ಮಿಯಾ ದೆವಾಚೊ ಲೆಕ್ ಮನುನ್ ಪರ್ಗಟ್ ಕರಲ್ಲೊ ಜೆಜು ಕ್ರಿಸ್ತ್ ತುಮ್ಚ್ಯಾ ಮದ್ದಿ “ಹೊಯ್” ಅನಿ ತನ್ನಾಚ್ “ನ್ಹಯ್” ಹೊವುಕ್ನಾ; ತೊ ಕನ್ನಾಬಿ ಹೊಯ್ಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:19
43 ತಿಳಿವುಗಳ ಹೋಲಿಕೆ  

ಯೇಸು ಕ್ರಿಸ್ತನು ನಿನ್ನೆ ಇದ್ದಂತೆ ಇಂದಿಗೂ ಇದ್ದಾನೆ. ಸದಾಕಾಲ ಹಾಗೆಯೇ ಇರುವನು.


ನಾನು ಆತನನ್ನು ನೋಡಿದಾಗ, ಆತನ ಪಾದಗಳ ಬಳಿ ಸತ್ತವನಂತೆ ಕುಸಿದುಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ! ನಾನೇ ಆದಿ ಮತ್ತು ಅಂತ್ಯ.


ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿಸಿ ಮುಂದಕ್ಕೆ ಹೋಗುವವನು ದೇವರನ್ನು ಹೊಂದಿಲ್ಲ. ಆದರೆ ಆ ಉಪದೇಶದಲ್ಲಿ ನೆಲೆಗೊಂಡಿರುವವನು ತಂದೆಯನ್ನೂ ಮಗನನ್ನೂ ಹೊಂದಿದ್ದಾನೆ.


“ಥುವತೈರದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ದೇವಕುಮಾರನು ಈ ಸಂಗತಿಗಳನ್ನು ಹೇಳುತ್ತಾನೆ. ಬೆಂಕಿಯ ಉರಿಯಂತೆ ಪ್ರಜ್ವಲಿಸುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳೂ ಇರುವಾತನು, ನಿನಗೆ ಇವುಗಳನ್ನು ಹೇಳುತ್ತಾನೆ.


ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಪ್ರಭುವಾದ ದೇವರು ಹೇಳುವುದೇನೆಂದರೆ: “ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನು ವರ್ತಮಾನ, ಭೂತ ಮತ್ತು ಭವಿಷ್ಯತ್ ಕಾಲಗಳಲ್ಲಿರುವಾತನು. ನಾನೇ ಸರ್ವಶಕ್ತನು.”


ಕೊರಿಂಥದಲ್ಲಿದ್ದ ಪೌಲನ ಬಳಿಗೆ ಸೀಲ ತಿಮೊಥೆಯರು ಮಕೆದೋನಿಯದಿಂದ ಬಂದರು. ಅನಂತರ, ಜನರಿಗೆ ಸುವಾರ್ತೆಯನ್ನು ತಿಳಿಸುವುದರಲ್ಲೇ ಪೌಲನು ತನ್ನ ಸಮಯವನ್ನೆಲ್ಲ ಕಳೆದನು. ಯೇಸುವೇ ಕ್ರಿಸ್ತನೆಂಬುದನ್ನು ಅವನು ಯೆಹೂದ್ಯರಿಗೆ ತೋರಿಸಿಕೊಟ್ಟನು.


ಆ ಧ್ವನಿಯು, “ನೀನು ನೋಡುವುದನ್ನೆಲ್ಲ ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಏಳು ಸಭೆಗಳಿಗೆ ಕಳುಹಿಸು” ಎಂದು ಹೇಳಿತು.


ನಾವು ನೋಡಿದವುಗಳನ್ನೂ ಕೇಳಿದವುಗಳನ್ನೂ ಈಗ ನಿಮಗೆ ಹೇಳುತ್ತೇವೆ. ಏಕೆಂದರೆ ನೀವು ನಮ್ಮ ಅನ್ಯೋನ್ಯತೆಯಲ್ಲಿ ಪಾಲುಗಾರರಾಗಬೇಕೆಂಬುದು ನಮ್ಮ ಅಪೇಕ್ಷೆ. ನಮ್ಮ ಈ ಅನ್ಯೋನ್ಯತೆಯು ತಂದೆಯಾದ ದೇವರ ಮತ್ತು ಆತನ ಮಗನಾದ ಯೇಸು ಕ್ರಿಸ್ತನ ಸಂಗಡವಿರುವಂಥದ್ದು.


ಆತನು ಅತ್ಯಂತ ಪ್ರಭಾವವುಳ್ಳ (ದೇವರ) ಸ್ವರವನ್ನು ಕೇಳಿದನು. ಆಗಲೇ ಆತನು ತಂದೆಯಾದ ದೇವರಿಂದ ಮಾನವನ್ನೂ ಪ್ರಭಾವವನ್ನೂ ಹೊಂದಿಕೊಂಡನು. ಆ ಸ್ವರವು, “ಈತನು ನನ್ನ ಪ್ರಿಯ ಮಗ. ಈತನನ್ನು ಬಹಳವಾಗಿ ಮೆಚ್ಚಿಕೊಂಡಿದ್ದೇನೆ” ಎಂದು ಹೇಳಿತು.


ಇವೆಲ್ಲವು ನಾಶವಾಗುತ್ತವೆ, ಆದರೆ ನೀನು ಶಾಶ್ವತವಾಗಿರುವೆ. ಎಲ್ಲಾ ವಸ್ತುಗಳೂ ವಸ್ತ್ರಗಳಂತೆ ಹಳೆಯವಾಗುವವು.


ಅಪೊಸ್ತಲರು, ಹಿರಿಯರು ಮತ್ತು ಇಡೀ ಸಭೆಯವರು ಪೌಲ ಬಾರ್ನಬರೊಂದಿಗೆ ಕೆಲವು ಜನರನ್ನು ಅಂತಿಯೋಕ್ಯಕ್ಕೆ ಕಳುಹಿಸಬಯಸಿದರು. ತಮ್ಮವರೇ ಆದ ಕೆಲವರನ್ನು ಆರಿಸಿಕೊಳ್ಳಲು ಸಭೆಯು ನಿರ್ಧರಿಸಿತು. ಅವರು ಯೂದನನ್ನು (ಬಾರ್ಸಬನೆಂದೂ ಕರೆಯುತ್ತಿದ್ದರು) ಮತ್ತು ಸೀಲನನ್ನು ಆರಿಸಿಕೊಂಡರು. ಇವರು ಜೆರುಸಲೇಮಿನ ಸಭೆಯವರಲ್ಲಿ ಪ್ರಮುಖರಾಗಿದ್ದರು.


ಅವನು ತಡಮಾಡದೆ ಸಭಾಮಂದಿರಗಳಿಗೆ ಹೋಗಿ “ಯೇಸುವೇ ದೇವಕುಮಾರ”ನೆಂದು ಬೋಧಿಸತೊಡಗಿದನು.


ಅವರು ಪ್ರಯಾಣ ಮಾಡುತ್ತಾ ನೀರಿದ್ದ ಒಂದು ಸ್ಥಳಕ್ಕೆ ಬಂದಾಗ ಅಧಿಕಾರಿಯು, “ಇಗೋ! ಇಲ್ಲಿ ನೀರಿದೆ! ನಾನು ದೀಕ್ಷಾಸ್ನಾನ ತೆಗೆದುಕೊಳ್ಳಲು ಏನಾದರೂ ಅಡ್ಡಿಯಿದೆಯೇ?” ಎಂದು ಫಿಲಿಪ್ಪನನ್ನು ಕೇಳಿದನು.


ಆದರೆ ಆತನೇ ಕ್ರಿಸ್ತನೆಂದೂ ದೇವರ ಮಗನೆಂದೂ ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.


ಯೆಹೂದ್ಯರು, “ನಮಗೊಂದು ನಿಯಮವಿದೆ. ಅದರ ಪ್ರಕಾರ ಇವನಿಗೆ ಮರಣದಂಡನೆ ಆಗಲೇಬೇಕು. ಯಾಕೆಂದರೆ ಇವನು ತನ್ನನ್ನು ದೇವರ ಮಗನೆಂದು ಹೇಳಿಕೊಂಡಿದ್ದಾನೆ” ಎಂದು ಉತ್ತರಕೊಟ್ಟರು.


ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಅಬ್ರಹಾಮನು ಹುಟ್ಟುವುದಕ್ಕಿಂತ ಮೊದಲಿಂದಲೂ ನಾನು ಇದ್ದೇನೆ!” ಎಂದು ಉತ್ತರಿಸಿದನು.


ನಾವು ನಿನ್ನಲ್ಲಿ ನಂಬಿಕೆ ಇಡುತ್ತೇವೆ. ನೀನು ದೇವರಿಂದ ಬಂದ ಪರಿಶುದ್ಧನೆಂದು ನಮಗೆ ಗೊತ್ತಿದೆ” ಎಂದು ಉತ್ತರಕೊಟ್ಟನು.


ಹೌದು, ದೇವರು ಲೋಕವನ್ನು ಎಷ್ಟೋ ಪ್ರೀತಿಸಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಹೊಂದಬೇಕೆಂದು ಆತನನ್ನು ಕೊಟ್ಟನು.


ಆಗ ನತಾನಿಯೇಲನು ಯೇಸುವಿಗೆ, “ಗುರುವೇ, ನೀನೇ ದೇವರ ಮಗನು. ನೀನೇ ಇಸ್ರೇಲರ ರಾಜ” ಎಂದು ಹೇಳಿದನು.


ಆದ್ದರಿಂದ ಆತನೇ (ಯೇಸುವೇ) ದೇವರ ಮಗನೆಂದು ನಾನು ಜನರಿಗೆ ತಿಳಿಸುವೆನು” ಎಂದನು.


ದೇವದೂತನು ಮರಿಯಳಿಗೆ, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸುವುದು. ಈ ಕಾರಣದಿಂದ ನಿನ್ನಲ್ಲಿ ಹುಟ್ಟುವ ಈ ಪವಿತ್ರಮಗುವು ‘ದೇವರ ಮಗ’ ಎನಿಸಿಕೊಳ್ಳುವನು.


ದೇವಕುಮಾರನಾದ ಯೇಸು ಕ್ರಿಸ್ತನನ್ನು ಕುರಿತ ಸುವಾರ್ತೆಯ ಆರಂಭವಿದು.


ಯೇಸುವನ್ನು ಕಾಯುತ್ತಿದ್ದ ಸೇನಾಧಿಪತಿ ಮತ್ತು ಸೈನಿಕರು ಭೂಕಂಪವನ್ನು ಮತ್ತು ನಡೆದದ್ದನ್ನು ಕಂಡು ಬಹಳವಾಗಿ ಹೆದರಿ, “ಈತನು ನಿಜವಾಗಿಯೂ ದೇವರ ಮಗನಾಗಿದ್ದನು!” ಎಂದು ಹೇಳಿದರು.


“ನೀನು ದೇವಾಲಯವನ್ನು ಕೆಡವಿ, ಅದನ್ನು ಮತ್ತೆ ಮೂರು ದಿನಗಳಲ್ಲಿ ನಿರ್ಮಿಸುತ್ತೇನೆಂದು ಹೇಳುತ್ತಿದ್ದೆ. ಆದರೆ ಈಗ ನಿನ್ನನ್ನು ನೀನೇ ರಕ್ಷಿಸಿಕೊ! ನೀನು ನಿಜವಾಗಿಯೂ ದೇವರ ಮಗನಾಗಿದ್ದರೆ, ಶಿಲುಬೆಯಿಂದ ಕೆಳಗಿಳಿದು ಬಾ!” ಎಂದು ಹಾಸ್ಯಮಾಡಿದರು.


ಭೂಮಿಯೂ ಆಕಾಶವೂ ನಾಶವಾಗುತ್ತವೆ, ಆದರೆ ನಾನು ಹೇಳಿದ ಮಾತುಗಳು ನಾಶವಾಗುವುದೇ ಇಲ್ಲ!


ಪೇತ್ರನು ಮಾತಾಡುತ್ತಿರುವಾಗಲೇ ಪ್ರಕಾಶಮಾನವಾದ ಒಂದು ಮೋಡವು ಅವರ ಮೇಲೆ ಕವಿಯಿತು ಮತ್ತು ಆ ಮೋಡದೊಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ನಾನು ಈತನನ್ನು ಬಹಳ ಮೆಚ್ಚಿಕೊಂಡಿದ್ದೇನೆ. ಈತನಿಗೆ ವಿಧೇಯರಾಗಿರಿ!” ಎಂದು ಹೇಳಿತು.


ಆಗ ಪರಲೋಕದಿಂದ ಧ್ವನಿಯೊಂದು ಹೊರಟು, “ಈತನೇ (ಯೇಸು) ನನ್ನ ಪ್ರಿಯ ಮಗನು. ಈತನನ್ನು ನಾನು ಬಹಳ ಮೆಚ್ಚಿದ್ದೇನೆ” ಎಂದು ಹೇಳಿತು.


ಯೆಹೋವನ ಒಡಂಬಡಿಕೆಯ ಕುರಿತು ಹೇಳುತ್ತಿರುವೆ. ಆತನು ನನಗೆ, “ಈ ಹೊತ್ತು ನಾನು ನಿನಗೆ ತಂದೆಯಾದೆ! ನೀನೇ ನನ್ನ ಮಗನು.


ಆಗ ದೇವರು ಮೋಶೆಗೆ, “ನಾನು ‘ಇರುವಾತನೇ’ ಆಗಿದ್ದೇನೆ. ನೀನು ಇಸ್ರೇಲರ ಬಳಿಗೆ ಹೋದಾಗ ‘ಇರುವಾತನೇ’ ಎಂಬವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳು” ಅಂದನು.


ತೋಮನು ಯೇಸುವಿಗೆ, “ನನ್ನ ಪ್ರಭುವೇ, ನನ್ನ ದೇವರೇ!” ಎಂದು ಹೇಳಿದನು.


ಆಗ ಆತನನ್ನು ಶೋಧಿಸಲು ಸೈತಾನನು ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳು ರೊಟ್ಟಿಗಳಾಗಲೆಂದು ಆಜ್ಞಾಪಿಸು” ಅಂದನು.


ಪೌಲನು ದರ್ಬೆ ಮತ್ತು ಲುಸ್ತ್ರ ಪಟ್ಟಣಗಳಿಗೆ ಹೋದನು. ತಿಮೊಥೆ ಎಂಬ ಕ್ರಿಸ್ತನ ಶಿಷ್ಯನೊಬ್ಬನು ಅಲ್ಲಿದ್ದನು. ತಿಮೊಥೆಯನ ತಾಯಿ ಯೆಹೂದ್ಯ ವಿಶ್ವಾಸಿಯಾಗಿದ್ದಳು. ಅವನ ತಂದೆಯು ಗ್ರೀಕನಾಗಿದ್ದನು.


ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಬರೆಯುವ ಪತ್ರ. ನಾನು ದೇವರ ಚಿತ್ತಾನುಸಾರ ಅಪೊಸ್ತಲನಾಗಿದ್ದೇನೆ. ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಇಡೀ ಅಖಾಯ ಸೀಮೆಯಲ್ಲಿರುವ ದೇವಜನರೆಲ್ಲರಿಗೂ ನಾನು ಈ ಪತ್ರವನ್ನು ಕ್ರಿಸ್ತನಲ್ಲಿ ನಮ್ಮ ಸಹೋದರನಾದ ತಿಮೊಥೆಯನೊಡನೆ ಸೇರಿ ಬರೆಯುತ್ತಿದ್ದೇನೆ.


ತಂದೆಯಾದ ದೇವರಲ್ಲಿಯೂ ಮತ್ತು ಪ್ರಭುವಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ ಮತ್ತು ತಿಮೊಥೆ ಬರೆಯುವ ಪತ್ರ. ದೇವರ ಕೃಪೆಯೂ ಶಾಂತಿಯೂ ನಿಮಗಿರಲಿ.


ತಂದೆಯಾದ ದೇವರಲ್ಲಿಯೂ ಮತ್ತು ಪ್ರಭುವಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲನು, ಸಿಲ್ವಾನನು ಮತ್ತು ತಿಮೊಥೆಯನು ಬರೆಯುವ ಪತ್ರ.


ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ನಾನು ಈ ಕಿರುಪತ್ರವನ್ನು ಸಿಲ್ವಾನನ ನೆರವಿನಿಂದ ಬರೆದೆನು. ಅವನು ಕ್ರಿಸ್ತನಲ್ಲಿ ನಂಬಿಗಸ್ತನಾದ ಸಹೋದರನೆಂಬುದು ನನಗೆ ತಿಳಿದಿದೆ. ನಾನು ನಿಮ್ಮನ್ನು ಸಂತೈಸಲು ಮತ್ತು ಪ್ರೋತ್ಸಾಹಿಸಲು ಈ ಪತ್ರವನ್ನು ಬರೆದೆನು. ಇದುವೇ ದೇವರ ನಿಜವಾದ ಕೃಪೆ ಎಂಬುದನ್ನು ನಿಮಗೆ ತಿಳಿಸಬೇಕೆಂಬುದೇ ನನ್ನ ಅಪೇಕ್ಷೆಯಾಗಿತ್ತು. ಆ ಕೃಪೆಯಲ್ಲಿ ಸ್ಥಿರತೆಯಿಂದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು