2 ಕೊರಿಂಥದವರಿಗೆ 1:21 - ಪರಿಶುದ್ದ ಬೈಬಲ್21 ನಿಮ್ಮನ್ನು ಮತ್ತು ನಮ್ಮನ್ನು ಕ್ರಿಸ್ತನಲ್ಲಿ ದೃಢಗೊಳಿಸುವಾತನು ದೇವರೇ. ದೇವರು ತನ್ನ ವಿಶೇಷವಾದ ಆಶೀರ್ವಾದವನ್ನು ನಮಗೆ ಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಮ್ಮನ್ನು ಅಭಿಷೇಕಿಸಿ ಕ್ರಿಸ್ತನ ಅನ್ಯೋನ್ಯತೆಯಲ್ಲಿ ಸೇರಿಸಿ ನಮ್ಮನ್ನು ನಿಮ್ಮೊಂದಿಗೆ ಸ್ಥಿರಪಡಿಸುವವನು ದೇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಿಮ್ಮನ್ನೂ ನಮ್ಮನ್ನೂ ಕ್ರಿಸ್ತಯೇಸುವಿನಲ್ಲಿ ಒಂದಾಗಿಸಿ ಸ್ಥಿರಪಡಿಸಿದವರು ದೇವರೇ. ನಮ್ಮನ್ನು ಅಭಿಷೇಕಿಸಿದವರೂ ಮೀಸಲಾಗಿಟ್ಟವರೂ ದೇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಮ್ಮನ್ನು ಅಭಿಷೇಕಿಸಿ ಕ್ರಿಸ್ತನ ಅನ್ಯೋನ್ಯತೆಯಲ್ಲಿ ಸೇರಿಸಿ ನಮ್ಮನ್ನು ನಿಮ್ಮೊಂದಿಗೆ ಸ್ಥಿರಪಡಿಸುವವನು ದೇವರೇ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನೀವೂ ನಾವೂ ಕ್ರಿಸ್ತ ಯೇಸುವಿನಲ್ಲಿ ದೃಢವಾಗಿ ನಿಲ್ಲುವಂತೆ ದೇವರು ನಮ್ಮನ್ನು ಸ್ಥಿರಪಡಿಸುತ್ತಾರೆ. ದೇವರು ನಮ್ಮನ್ನು ಅಭಿಷೇಕಿಸಿ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ದೆವುಚ್ ತುಮ್ಕಾ ಅನಿ ಅಮ್ಕಾ ಅಭಿಶೆಕ್ ಕರುನ್ ಕ್ರಿಸ್ತಾಚ್ಯಾ ಎಕ್ವಟ್ಟಾನ್ ಘಟ್ ರ್‍ಹಾಯ್ ಸಾರ್ಕೆ ಕರ್ತಾ, ತೆ ದೆವಾನುಚ್ ಅಮ್ಕಾ ಎಗ್ಳುನ್ ಕಾಡಲ್ಲೆ, ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ.
ಬೆಂಕಿಯಲ್ಲಿ ಪುಟಹಾಕಿದ ಅಪ್ಪಟ ಚಿನ್ನವನ್ನು ನೀನು ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ಸಲಹೆ ನೀಡುತ್ತೇನೆ. ಆಗ ನೀನು ನಿಜವಾಗಿಯೂ ಶ್ರೀಮಂತನಾಗಲು ಸಾಧ್ಯ. ನಾನು ನಿನಗೆ ಹೇಳುವುದೇನೆಂದರೆ: ಬಿಳಿವಸ್ತ್ರಗಳನ್ನು ಕೊಂಡುಕೊ. ಆಗ ನೀನು ನಾಚಿಕೆಕರವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಸಾಧ್ಯವಾಗುವುದು. ನೀನು ನಿನ್ನ ಕಣ್ಣುಗಳಿಗೆ ಹಚ್ಚಲು ಔಷಧಿಯನ್ನು ಕೊಂಡುಕೊಳ್ಳಬೇಕೆಂತಲೂ ನಾನು ನಿನಗೆ ಹೇಳುತ್ತೇನೆ. ಆಗ ನಿನಗೆ ನಿಜವಾಗಿಯೂ ದೃಷ್ಟಿ ಬರುವುದು.