Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:24 - ಪರಿಶುದ್ದ ಬೈಬಲ್‌

24 ನಿಮ್ಮ ನಂಬಿಕೆಯನ್ನು ಹತೋಟಿಯಲ್ಲಿಟ್ಟುಕೊಳ್ಳಲು ನಾವು ಪ್ರಯತ್ನಿಸುತ್ತಿದ್ದೇವೆಂದು ನಾನು ಹೇಳುತ್ತಿಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿದ್ದೀರಿ. ಆದರೆ ನಾವು ನಿಮ್ಮ ಸಂತೋಷಕ್ಕಾಗಿ ನಿಮ್ಮ ಜೊತೆಕೆಲಸದವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಿಮ್ಮ ನಂಬಿಕೆಯ ವಿಷಯದಲ್ಲಿಯೂ ನಾವು ನಿಮ್ಮ ಮೇಲೆ ದೊರೆತನಮಾಡುವವರೆಂಬುದಾಗಿ ಅಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿರುವಂತೆ ನಿಮ್ಮ ಸಂತೋಷಕ್ಕೆ ನಾವು ಸಹಾಭಾಗಿಗಳಾಗಿದೇವಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಿಮ್ಮ ವಿಶ್ವಾಸದ ಬಗ್ಗೆ ನಾವು ದಬ್ಬಾಳಿಕೆ ನಡೆಸುತ್ತಿದ್ದೇವೆಂದು ತಿಳಿಯಬೇಡಿ; ವಿಶ್ವಾಸದಲ್ಲಿ ನೀವು ದೃಢರಾಗಿಯೇ ಇದ್ದೀರಿ. ನಿಮ್ಮ ಸಂತೋಷಕ್ಕಾಗಿ ನಾವು ನಿಮ್ಮೊಡನೆ ಸಹಕರಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಾವು ನಂಬಿಕೆಯ ವಿಷಯದಲ್ಲಿಯೂ ನಿಮ್ಮ ಮೇಲೆ ದೊರೆತನಮಾಡುವವರೆಂದು ನನ್ನ ತಾತ್ಪರ್ಯವಲ್ಲ; ನಿಮ್ಮ ಸಂತೋಷಕ್ಕೆ ನಾವು ಸಹಾಯಕರಾಗಿದ್ದೇವೆ; ನಂಬಿಕೆಯ ವಿಷಯದಲ್ಲಿ ದೃಢ ನಿಂತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಿಮ್ಮ ವಿಶ್ವಾಸದ ಬಗ್ಗೆ ನಾವು ದಬ್ಬಾಳಿಕೆ ನಡೆಸುತ್ತೇವೆಂದು ತಿಳಿಯಬೇಡಿರಿ. ಆದರೆ ನಿಮ್ಮ ಆನಂದಕ್ಕಾಗಿ ಕೆಲಸಮಾಡಿ, ನಾವೂ ಭಾಗಿಗಳಾಗಿರಲು ಬಯಸುತ್ತೇವೆ. ಏಕೆಂದರೆ, ನೀವು ವಿಶ್ವಾಸದಲ್ಲಿ ದೃಢವಾಗಿ ನಿಂತಿದ್ದೀರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತುಮ್ಚ್ಯಾ ವಿಶ್ವಾಸಾಚ್ಯಾ ವೈರ್ ಅಧಿಕಾರ್ ಚಾಲ್ವುಚೆ ಮನ್ತಲಿ ಅಮ್ಚಿ ಆಶಾ ನ್ಹಯ್, ಕಶ್ಯಾಕ್ ಮಟ್ಲ್ಯಾರ್, ತುಮ್ಚ್ಯಾ ವಿಶ್ವಾಸಾತ್ ತುಮಿ ಘಟ್ ಹಾಸಿ, ತುಮ್ಚಿ ಕುಶಿ ಜಾಸ್ತಿ ಕರುಸಾಟ್ನಿ ತುಮ್ಚ್ಯಾ ವಾಂಗ್ಡಾ ಕಾಮ್ ಕರುಕ್ ಅಮ್ಕಾ ಲೈ ಮನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:24
16 ತಿಳಿವುಗಳ ಹೋಲಿಕೆ  

ನೀವು ಜವಾಬ್ದಾರರಾಗಿರುವ ಆ ಮಂದೆಯ ಮೇಲೆ ದಬ್ಬಾಳಿಕೆ ಮಾಡಬೇಡಿ. ನೀವು ಅವರಿಗೆ ಉತ್ತಮ ಮಾದರಿಯಾಗಿರಿ.


ಸಹೋದರ ಸಹೋದರಿಯರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನೀವು ಜ್ಞಾಪಿಸಿಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿಕೊಂಡಿರಿ ಮತ್ತು ಅದರಲ್ಲಿ ದೃಢವಾಗಿದ್ದೀರಿ.


ನಾವು ಯಾವುದನ್ನು ನೋಡುತ್ತಿದ್ದೇವೋ ಅದರಿಂದ ಜೀವಿಸುತ್ತಿಲ್ಲ. ಆದರೆ ಯಾವುದನ್ನು ನಂಬಿದ್ದೇವೋ ಅದರಿಂದ ಜೀವಿಸುತ್ತಿದ್ದೇವೆ.


ನಾವು ನಮ್ಮ ಬಗ್ಗೆ ಬೋಧಿಸುವುದಿಲ್ಲ. ಆದರೆ ಯೇಸು ಕ್ರಿಸ್ತನೇ ಪ್ರಭುವೆಂದು ಮತ್ತು ಯೇಸುವಿಗೋಸ್ಕರ ನಿಮ್ಮ ಸೇವಕರಾಗಿದ್ದೇವೆಂದು ಬೋಧಿಸುತ್ತೇವೆ.


ಅದು ಸತ್ಯ. ಆ ಕೊಂಬೆಗಳು ಮುರಿಯಲ್ಪಟ್ಟವು. ಅದಕ್ಕೆ ಅಪನಂಬಿಕೆಯೇ ಕಾರಣ. ನೀವು ಆ ಮರದ ಒಂದು ಭಾಗವಾದದ್ದು ನಿಮ್ಮ ನಂಬಿಕೆಯಿಂದಲೇ. ಆದ್ದರಿಂದ ಗರ್ವಪಡಬೇಡ, ಭಯದಿಂದಿರು.


ಈಗ ನಾವು ಆನಂದಿಸುತ್ತಿರುವ ದೇವರ ಕೃಪಾಶ್ರಯಕ್ಕೆ ಕ್ರಿಸ್ತನೇ ನಮ್ಮನ್ನು ನಮ್ಮ ನಂಬಿಕೆಯ ಮೂಲಕ ತಂದಿದ್ದಾನೆ. ದೇವರ ಮಹಿಮೆಯನ್ನು ಹೊಂದುವೆವು ಎಂಬ ನಿರೀಕ್ಷೆಯು ನಮಗಿರುವುದರಿಂದ ನಾವು ಬಹು ಸಂತೋಷವಾಗಿದ್ದೇವೆ.


ಆ ಸೇವಕನು ಇತರ ಸೇವಕರನ್ನು ಹೊಡೆಯುತ್ತಾ ತನ್ನಂಥ ಜನರೊಂದಿಗೆ ಸೇರಿಕೊಂಡು ತಿನ್ನುತ್ತಾ ಕುಡಿಯುತ್ತಾ ಇರುವನು.


ಅಪೊಲ್ಲೋಸನು ಮುಖ್ಯವಾದವನೇ? ಇಲ್ಲ! ಪೌಲನು ಮುಖ್ಯವಾದವನೇ? ಇಲ್ಲ! ನೀವು ನಂಬಿಕೊಳ್ಳಲು ಸಹಾಯ ಮಾಡುವ ನಾವು ಕೇವಲ ದೇವರ ಸೇವಕರಾಗಿದ್ದೇವೆ. ದೇವರು ನಮಗೆ ಕೊಟ್ಟ ಕೆಲಸವನ್ನು ನಮ್ಮಲ್ಲಿ ಪ್ರತಿಯೊಬ್ಬರೂ ಮಾಡಿದೆವು.


ಅಂದರೆ ನಾವು ಹೊಂದಿರುವ ನಂಬಿಕೆಯಿಂದ ನಾವು ಒಬ್ಬರಿಗೊಬ್ಬರು ಸಹಾಯ ಮಾಡಬೇಕೆಂಬುದು ನನ್ನ ಅಪೇಕ್ಷೆ. ನಿಮ್ಮ ನಂಬಿಕೆ ನನಗೆ ಸಹಾಯ ಮಾಡುತ್ತದೆ ಮತ್ತು ನನ್ನ ನಂಬಿಕೆ ನಿಮಗೆ ಸಹಾಯ ಮಾಡುತ್ತದೆ.


ಏಕೆಂದರೆ ನಿಮ್ಮಿಂದ ಬಲವಂತವಾಗಿ ಕೆಲಸ ಮಾಡಿಸಿಕೊಳ್ಳುವವನ ಮತ್ತು ನಿಮ್ಮನ್ನು ಉಪಯೋಗಿಸಿಕೊಳ್ಳುವವನ ವಿಷಯದಲ್ಲಿಯೂ ಸಹ ತಾಳ್ಮೆಯಿಂದಿರುತ್ತೀರಿ. ನಿಮ್ಮನ್ನು ಮೋಸಗೊಳಿಸುವವರ, ತಮ್ಮನ್ನು ನಿಮಗಿಂಥ ಉತ್ತಮರೆಂದು ಭಾವಿಸಿಕೊಂಡಿರುವವರ ಮತ್ತು ನಿಮ್ಮ ಮುಖದ ಮೇಲೆ ಹೊಡೆಯುವವರ ವಿಷಯದಲ್ಲಿಯೂ ನೀವು ತಾಳ್ಮೆಯಿಂದಿರುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು