2 ಕೊರಿಂಥದವರಿಗೆ 1:3 - ಪರಿಶುದ್ದ ಬೈಬಲ್3 ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ. ದೇವರು ಕನಿಕರದಿಂದ ತುಂಬಿರುವ ತಂದೆಯಾಗಿದ್ದಾನೆ. ಆತನು ಸಕಲ ವಿಧವಾಗಿ ಸಂತೈಸುವ ದೇವರಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವ ದೇವರೂ ಆಗಿದ್ದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ಅವರು ಕರುಣಾಭರಿತ ತಂದೆ; ಸಕಲ ಸಾಂತ್ವನವನ್ನೀಯುವ ದೇವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ; ಆತನು ಕನಿಕರವುಳ್ಳ ತಂದೆಯೂ ಸಕಲವಿಧವಾಗಿ ಸಂತೈಸುವ ದೇವರೂ ಆಗಿದ್ದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ಅವರು ಕರುಣೆಯುಳ್ಳ ತಂದೆಯೂ ಎಲ್ಲರನ್ನೂ ಆದರಿಸುವ ದೇವರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ದೆವಾಕ್ ಅನಿ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ಬಾಬಾಕ್ ಹೊಗ್ಳಾಪ್, ತೊ ದಯಾ ದಾಕ್ವುತಲೊ ಬಾಬಾ, ಸಗ್ಳಿ ಮಜತ್ ತ್ಯಾಚ್ ದೆವಾಕ್ನಾ ಯೆತಾ. ಅಧ್ಯಾಯವನ್ನು ನೋಡಿ |
ಆ ಬಳಿಕ, ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ ಮತ್ತು ಪೆತಹ್ಯ ಎಂಬವರು, “ಎದ್ದುನಿಂತುಕೊಂಡು ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಿದರು. “ದೇವರು ಯಾವಾಗಲೂ ಇದ್ದಾತನಾಗಿದ್ದಾನೆ ಮತ್ತು ಯಾವಾಗಲೂ ಇರುವಾತನಾಗಿದ್ದಾನೆ. ನಿನ್ನ ಮಹಿಮಾಪೂರ್ಣವಾದ ಹೆಸರನ್ನು ಜನರು ಕೊಂಡಾಡಲಿ; ನಿನ್ನ ಹೆಸರು ಎಲ್ಲಾ ಸ್ತುತಿಕೀರ್ತನೆಗಳಿಗೆ ಮಿಗಿಲಾಗಿ ಎತ್ತಲ್ಪಡಲಿ.