2 ಕೊರಿಂಥದವರಿಗೆ 1:4 - ಪರಿಶುದ್ದ ಬೈಬಲ್4 ನಮಗೆ ಸಂಕಷ್ಟವಿರುವಾಗಲೆಲ್ಲಾ ಆತನು ನಮ್ಮನ್ನು ಸಂತೈಸುತ್ತಾನೆ; ಸಂಕಷ್ಟಗಳಲ್ಲಿರುವ ಇತರ ಜನರನ್ನು ಸಂತೈಸಲು ಇದರ ಮೂಲಕ ನಾವು ಸಹ ಶಕ್ತರಾಗುತ್ತೇವೆ. ದೇವರು ನಮ್ಮನ್ನು ಸಂತೈಸುವಂತೆಯೇ ನಾವು ಸಹ ಅವರನ್ನು ಸಂತೈಸಬಲ್ಲವರಾಗುತ್ತೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುವವನಾಗಿದ್ದಾನೆ. ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವುದಕ್ಕೆ ಶಕ್ತರಾಗುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಮಗೆ ಒದಗುವ ಎಲ್ಲಾ ಸಂಕಷ್ಟಗಳಲ್ಲಿ ಅವರು ನಮ್ಮನ್ನು ಸಂತೈಸುತ್ತಾರೆ. ಹೀಗೆ ದೇವರಿಂದ ದೊರೆತ ಆದರಣೆಯಿಂದ ವಿವಿಧ ಸಂಕಷ್ಟಗಳಲ್ಲಿ ನರಳುತ್ತಿರುವವರನ್ನು ಸಂತೈಸುವುದಕ್ಕೆ ನಾವು ಶಕ್ತರಾಗುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವದಕ್ಕೆ ಶಕ್ತರಾಗುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದೇವರು ನಮಗಾಗುವ ಎಲ್ಲಾ ಬಾಧೆಗಳಲ್ಲಿ ನಮ್ಮನ್ನು ಸಂತೈಸುವವರಾಗಿದ್ದಾರೆ. ಇತರರು ಬಾಧೆಗಳನ್ನು ಅನುಭವಿಸುತ್ತಿರುವಾಗ, ನಾವು ಸಹ ದೇವರಿಂದ ಹೊಂದಿರುವ ಸಂತೈಸುವಿಕೆಯಿಂದ ಅವರನ್ನು ಸಂತೈಸಲು ನಮ್ಮನ್ನು ಶಕ್ತರನ್ನಾಗಿ ಮಾಡಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತೊ ಅಮ್ಚ್ಯಾ ಸಗ್ಳ್ಯಾ ತರಾಸಾಕ್ನಿ ಅಮ್ಕಾ ಮಜತ್ ದಿತಾ; ತಸೆ ಮನುನ್ ತೆಚ್ಯಾ ವೈನಾ ಅಮ್ಕಾ ಗಾವಲ್ಲ್ಯಾ ಮಜತಿಚ್ಯಾ ವೈನಾ ಸಗ್ಳ್ಯಾ ಕಸ್ಟಾತ್ನಿ ಪಡಲ್ಲ್ಯಾ ದುಸ್ರ್ಯಾಕ್ನಿ ಮಜತ್ ಕರುಕ್ ಅಮಿ ಪಾವ್ತಾವ್. ಅಧ್ಯಾಯವನ್ನು ನೋಡಿ |
ಅದೇ ರೀತಿಯಲ್ಲಿ ಯೆಹೋವನು ಚೀಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಏದೆನ್ ಉದ್ಯಾನವನದಂತೆ ಮಾಡುವನು. ಆ ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು.