2 ಕೊರಿಂಥದವರಿಗೆ 1:6 - ಪರಿಶುದ್ದ ಬೈಬಲ್6 ನಮಗೆ ಸಂಕಷ್ಟಗಳಿರುವುದಾದರೆ, ಆ ಸಂಕಷ್ಟಗಳು ನಿಮ್ಮ ಆದರಣೆಗಾಗಿಯೇ ಮತ್ತು ರಕ್ಷಣೆಗಾಗಿಯೇ. ನಮಗೆ ಆದರಣೆ ಇರುವುದಾದರೆ, ಅದು ನಿಮ್ಮ ಆದರಣೆಗಾಗಿಯೇ. ನಮಗಿರುವಂಥ ಬಾಧೆಗಳನ್ನು ನೀವು ತಾಳ್ಮೆಯಿಂದ ಸ್ವೀಕರಿಸಿಕೊಳ್ಳಲು ಇದು ನಿಮಗೆ ಸಹಾಯವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಾವು ಕಷ್ಟಗಳನ್ನನುಭವಿಸುವುದರಿಂದ ನಿಮಗೆ ಆದರಣೆಯೂ, ರಕ್ಷಣೆಯೂ ಉಂಟಾಗುತ್ತದೆ. ನಾವು ಸಮಾಧಾನದಿಂದಿರುವುದಾದರೆ ಅದರಿಂದ ನಿಮಗೆ ಆದರಣೆ ಆಗುತ್ತದೆ. ನಾವು ಅನುಭವಿಸುವಂಥ ಬಾಧೆಗಳನ್ನು ನೀವೂ ತಾಳ್ಮೆಯಿಂದ ಸಹಿಸಿಕೊಳ್ಳುವಂತೆ ಅದು ನಿಮ್ಮನ್ನು ಧೈರ್ಯಗೊಳಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಾವು ಕಷ್ಟಸಂಕಟಗಳನ್ನು ಸಹಿಸಬೇಕಾಗುವುದು ಸಹ ನಿಮ್ಮ ಉಪಶಮನ ಹಾಗೂ ಸಾಂತ್ವನಕ್ಕಾಗಿಯೇ. ನಮ್ಮ ಕಷ್ಟಸಂಕಟಗಳು ನಿವಾರಣೆಯಾದರೆ ಅದೂ ನಿಮ್ಮ ಆದರಣೆಗಾಗಿಯೇ. ನಾವು ಪಡುವ ಯಾತನೆಯನ್ನು ನೀವು ಸಹನೆಯಿಂದ ಅನುಭವಿಸುವಂತೆ ಅದು ಹುರಿದುಂಬಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಮಗೆ ಸಂಕಟಬರುತ್ತದೋ ಅದರಿಂದ ನಿಮಗೆ ಧೈರ್ಯವೂ ರಕ್ಷಣೆಯೂ ಉಂಟಾಗುತ್ತದೆ; ನಮಗೆ ಸಂಕಟ ಪರಿಹಾರವಾಗುತ್ತದೋ ಅದರಿಂದ ನಿಮಗೆ ಆದರಣೆ ಆಗುತ್ತದೆ. ನಾವು ಅನುಭವಿಸುವಂಥ ಬಾಧೆಗಳನ್ನು ನೀವೂ ತಾಳ್ಮೆಯಿಂದ ಸಹಿಸಿಕೊಳ್ಳುವಂತೆ ಅದು ನಿಮ್ಮನ್ನು ಧೈರ್ಯಗೊಳಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಮಗೆ ಕಷ್ಟಸಂಕಟಗಳು ಬಂದರೆ, ಅದು ನಿಮ್ಮ ಆದರಣೆ ಮತ್ತು ರಕ್ಷಣೆಗೋಸ್ಕರವೇ ಇರುತ್ತದೆ. ನಾವು ಸಂತೈಸುವಿಕೆಯನ್ನು ಹೊಂದಿರುವುದಾದರೆ, ಅದು ನಿಮ್ಮ ಆದರಣೆಗಾಗಿಯೇ. ಆ ಆದರಣೆಯು ನಮ್ಮಂತೆ ನೀವು ಅನುಭವಿಸುವ ಕಷ್ಟಸಂಕಟಗಳನ್ನು ಸಹನೆಯಿಂದ ಅನುಭವಿಸುವಂತೆ ಮಾಡುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಅಮಿ ಕಸ್ಟಾತ್ನಿ ಶಿರಕ್ತಾವ್ ಹೆ ತುಮ್ಚ್ಯಾ ಮಜತಿ ಅನಿ ಸುಟ್ಕಾಸಾಟ್ನಿ; ಅಮ್ಕಾ ಮಜತ್ ಗಾವ್ತಾ ಜಾಲ್ಯಾರ್ಬಿ ತಿ ತುಮ್ಚ್ಯಾ ಮಜತಿಸಾಟ್ನಿ ಅನಿ ಆಮ್ಕಾ ಗಾವಲ್ಲೊ ಕಸ್ಟ್ ತುಮ್ಕಾಬಿ ಗಾವಲ್ಯಾ ತನ್ನಾ ತೆ ಸೊಸುಕ್ ಧೈರೊ ಅನಿ ಬಳ್ ಗಾವ್ಕ್ ಸಾಟ್ನಿ. ಅಧ್ಯಾಯವನ್ನು ನೋಡಿ |