2 ಕೊರಿಂಥದವರಿಗೆ 1:9 - ಪರಿಶುದ್ದ ಬೈಬಲ್9 ನಿಜವಾಗಿಯೂ ನಾವು ಸಾಯುತ್ತೇವೆಂದು ನಮ್ಮ ಹೃದಯಗಳಲ್ಲಿ ನಂಬಿಕೊಂಡೆವು. ನಾವು ನಮ್ಮಲ್ಲಿ ಭರವಸೆ ಇಡದಂತೆಯೂ ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸುವ ದೇವರಲ್ಲಿ ಭರವಸೆ ಇಡಬೇಕೆಂತಲೂ ಇದಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಸಾಯುವುದು ನಿಶ್ಚಯವೆಂದೆನಿಸಿದಾಗ ನಾವು ನಮ್ಮ ಮೇಲೆ ಭರವಸವನ್ನಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವರಾಗಬೇಕೆಂದು ಇದೆಲ್ಲಾ ಸಂಭವಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಿಜವಾಗಿಯೂ ನಮಗೆ ಮರಣದಂಡನೆ ವಿಧಿಸಲಾಗಿದೆಯೆಂದು ಭಾವಿಸಿದೆವು. ಇದರಿಂದ ನಾವು ನಮ್ಮ ಸ್ವಂತ ಶಕ್ತಿಯನ್ನೇ ನಂಬಿಕೊಳ್ಳದೆ, ಸತ್ತವರನ್ನು ಪುನರುತ್ಥಾನಗೊಳಿಸುವ ದೇವರಲ್ಲಿ ಭರವಸೆಯಿಡುವಂತೆ ಹೀಗಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮರಣವಾಗುತ್ತದೆಂಬ ನಿಶ್ಚಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವರಾಗಬೇಕೆಂದು ಹೀಗಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಮರಣದ ಶಿಕ್ಷೆಯನ್ನು ನಾವು ಅನುಭವಿಸುತ್ತೇವೋ ಎಂಬಂತೆ ನಮಗಾಯಿತು. ನಾವು ನಮ್ಮ ಮೇಲೆ ಭರವಸೆಯಿಡದೆ, ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸೆ ಇಡುವವರಾಗಬೇಕೆಂದು ಇದೆಲ್ಲಾ ಸಂಭವಿಸಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಖರೆ ಮಟ್ಲ್ಯಾರ್ ಅಮ್ಕಾ ಮರನಾಚಿ ಶಿಕ್ಷಾ ಲಿವಲ್ಲಿ ಹಾಯ್ ಸರ್ಕೆ ಅಮ್ಕಾ ದಿಸ್ಲೆ, ಅಮಿ ಅಮ್ಚ್ಯಾ ವರ್ತಿ ನ್ಹಯ್, ಮರಲ್ಲ್ಯಾಕ್ನಿ ಝಿತ್ತೆ ಕರುನ್ ಉಟ್ವುತಲ್ಯಾ ದೆವಾಚ್ಯಾ ವರ್‍ತಿ ವಿಶ್ವಾಸ್ ಥವ್ಕ್ ಅಮಿ ಶಿಕ್ತಲ್ಯಾಸಾಟಿ ಅಶೆ ಹೊಲೆ. ಅಧ್ಯಾಯವನ್ನು ನೋಡಿ |