2 ಕೊರಿಂಥದವರಿಗೆ 10:13 - ಪರಿಶುದ್ದ ಬೈಬಲ್13 ಆದರೆ ನಾವು ನಮಗೆ ಕೊಡಲ್ಪಟ್ಟಿರುವ ಕೆಲಸದ ಮೇರೆಯನ್ನು ಮೀರಿ ನಮ್ಮನ್ನು ಹೊಗಳಿಕೊಳ್ಳದೆ ದೇವರು ನಮಗೆ ಕೊಟ್ಟಿರುವ ಕೆಲಸದ ಮೇರೆಯೊಳಗೆ ಹೆಮ್ಮೆಪಡುತ್ತೇವೆ. ಆದರೆ ನಮ್ಮ ಈ ಕೆಲಸವು ನಿಮ್ಮ ಮಧ್ಯ ನಾವು ಮಾಡುವ ಈ ಸೇವೆಯನ್ನು ಒಳಗೊಂಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾವಾದರೋ ನಮ್ಮ ಯೋಗ್ಯತೆಗೆ ಮೀರಿ ಹೊಗಳಿಕೊಳ್ಳದೇ ದೇವರು ನಮಗೆ ನೇಮಿಸಿರುವಂಥ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ. ಈ ಮೇರೆಯೊಳಗಿದ್ದು ನಿಮ್ಮ ತನಕ ಬಂದಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಾವಾದರೋ ಹಾಗೆ ಮಿತಿಮೀರಿ ಹೊಗಳಿಕೊಳ್ಳುವುದಿಲ್ಲ. ನಮಗೆ ದೇವರು ತಾವೇ ನಿಯಮಿಸಿದ ಕಾರ್ಯಕ್ಷೇತ್ರದ ಸರಹದ್ದನ್ನು ನಾವು ಮೀರುವುದಿಲ್ಲ. ಈ ಸರಹದ್ದಿಗೆ ನೀವೂ ಒಳಪಟ್ಟಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾವಾದರೋ ಮೇರೆದಪ್ಪಿ ಹೊಗಳಿಕೊಳ್ಳದೆ ದೇವರು ನಮಗೆ ನೇವಿುಸಿದಂಥ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ. ಈ ಮೇರೆಯೊಳಗಿದ್ದು ನಿಮ್ಮ ಪರ್ಯಂತರಕ್ಕೂ ಬಂದಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಾವಾದರೋ ಮೇರೆ ತಪ್ಪಿ ಹೊಗಳಿಕೊಳ್ಳುವುದಿಲ್ಲ; ದೇವರು ತಾವೇ ನಮಗೆ ನೇಮಿಸಿದ ಸೇವಾಕ್ಷೇತ್ರದ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ. ಆ ಮೇರೆಯೊಳಗೆ ನೀವೂ ಒಳಪಟ್ಟಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಖರೆ ಅಮಿ ಅಮ್ಚಿ ಗಡ್ ಉತ್ರುನ್ ಅಮ್ಚೆಚ್ ಮೊಟೆಪಾನ್ ಬೊಲಿನಾವ್. ದೆವಾನುಚ್ ಅಮ್ಚ್ಯಾ ಕಾಮಾಕ್ ಘಾಟಲ್ಲಿ ಗಡ್ ಹಾಯ್ ಅನಿ ತುಮಿ ಹ್ಯಾ ಗಡಿಚ್ಯಾ ಭುತ್ತುರ್‍ಲೆ . ಅಧ್ಯಾಯವನ್ನು ನೋಡಿ |
ದೇವರು ನನಗೆ ವಿಶೇಷವಾದ ಒಂದು ವರವನ್ನು ಕೊಟ್ಟಿದ್ದಾನೆ. ಆದಕಾರಣವೇ, ನಿಮ್ಮಲ್ಲಿರುವ ಪ್ರತಿಯೊಬ್ಬರಿಗೂ ಈ ಸಂಗತಿಗಳನ್ನು ತಿಳಿಸುತ್ತಿದ್ದೇನೆ. ನೀವು ನಿಮ್ಮ ನಿಜವಾದ ಯೋಗ್ಯತೆಗಿಂತಲೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಬೇಡಿ. ನೀವು ನಿಮ್ಮ ವಿಷಯದಲ್ಲಿ ಏನು ಭಾವಿಸಿಕೊಂಡರೂ ಆ ಭಾವನೆಯು ನಿಮ್ಮ ನಿಜವಾದ ಯೋಗ್ಯತೆಗೆ ಸರಿಸಮಾನವಾಗಿರಬೇಕು. ದೇವರು ನಿಮಗೆ ಎಂಥ ನಂಬಿಕೆಯನ್ನು ಕೊಟ್ಟಿದ್ದಾನೋ ಆ ನಂಬಿಕೆಗೆ ತಕ್ಕಂತೆ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಿರಿ.
“ಗೋಡೆಯು ನೆಟ್ಟಗಿದೆಯೆಂದು ನೋಡಲು ಜನರು ಗುಂಡನ್ನೂ ನೂಲನ್ನೂ ಉಪಯೋಗಿಸುತ್ತಾರೆ. ಅದೇ ರೀತಿಯಲ್ಲಿ ನಾನು ನ್ಯಾಯವನ್ನು ನೂಲನ್ನಾಗಿಯೂ ಕರುಣೆಯನ್ನು ಗುಂಡನ್ನಾಗಿಯೂ ಉಪಯೋಗಿಸುವೆನು. ನೀವು ದುಷ್ಟಜನರು. ನೀವು ನಿಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತಿದ್ದೀರಿ. ಆದರೆ ನೀವು ಶಿಕ್ಷಿಸಲ್ಪಡುವಿರಿ. ನೀವು ಅಡಗಿಕೊಂಡಿರುವ ಸ್ಥಳವನ್ನು ನಾಶಮಾಡುವ ಬಿರುಗಾಳಿಯಂತೆಯೂ ಪ್ರವಾಹದಂತೆಯೂ ಅದಿರುವುದು.