Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 10:14 - ಪರಿಶುದ್ದ ಬೈಬಲ್‌

14 ನಾವು ಬಹಳವಾಗಿ ಹೊಗಳಿಕೊಳ್ಳುವುದಿಲ್ಲ. ನಾವು ನಿಮ್ಮಲ್ಲಿಗೆ ಈಗಾಗಲೇ ಬಂದಿಲ್ಲದಿದ್ದರೆ ಬಹಳವಾಗಿ ಹೊಗಳಿಕೊಳ್ಳುತ್ತಿದ್ದೆವು. ಆದರೆ ನಾವು ನಿಮ್ಮಲ್ಲಿಗೆ ಬಂದಿದ್ದೇವೆ. ಕ್ರಿಸ್ತನ ಸುವಾರ್ತೆಯೊಂದಿಗೆ ನಾವು ಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾವು ಕ್ರಿಸ್ತನ ಸುವಾರ್ತೆಯನ್ನು ಸಾರುತ್ತಾ ಇತರರಿಗಿಂತ ಮೊದಲು ನಿಮ್ಮ ಬಳಿಗೆ ಬಂದದ್ದರಿಂದ ನಿಮ್ಮ ಮೇಲೆ ಅಧಿಕಾರವಿಲ್ಲದವರಂತೆ ಮೇರೆಯನ್ನು ಅತಿಕ್ರಮಿಸಿಹೋಗುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇತರರಿಗಿಂತಲೂ ಮೊದಲೇ ನಿಮಗೆ ಯೇಸುಕ್ರಿಸ್ತರ ಶುಭಸಂದೇಶವನ್ನು ತಂದವರು ನಾವು. ಹೀಗಿರುವಲ್ಲಿ ನಿಮ್ಮ ವಿಷಯದಲ್ಲಿ ನಾವು ಈಗ ಹೊಗಳಿಕೊಳ್ಳುವಾಗ ನಮ್ಮ ಸರಹದ್ದನ್ನು ಉಲ್ಲಂಘಿಸುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾವು ಕ್ರಿಸ್ತನ ಸುವಾರ್ತೆಯನ್ನು ಸಾರುತ್ತಾ ಇತರರಿಗಿಂತ ಮೊದಲು ನಿಮ್ಮ ಬಳಿಗೆ ಬಂದದರಿಂದ ನಿಮ್ಮ ಮೇಲೆ ಅಧಿಕಾರವಿಲ್ಲದವರಂತೆ ಮೇರೆಯನ್ನು ಅತಿಕ್ರವಿುಸಿದವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾವು ಮೊದಲು ನಿಮ್ಮ ಬಳಿಗೆ ಬಾರದಿದ್ದರೆ, ನಮ್ಮ ಹೊಗಳಿಕೊಳ್ಳುವಿಕೆಯು ಮೇರೆಯನ್ನು ಉಲ್ಲಂಘಿಸುವುದಾಗಿರುತ್ತಿತ್ತು; ಆದರೆ ನಾವು ನಿಮಗೆ ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ಸಾರುವುದಕ್ಕಾಗಿ ನಿಮ್ಮ ಬಳಿಗೆ ಬಂದೇವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅನಿ ಅಮಿ ಹ್ಯಾ ಗಡಿಚ್ಯಾ ಭುತ್ತುರ್‍ಲೆ ತಸೆ ಮನುನ್ ಅಮಿ ಕ್ರಿಸ್ತಾಚಿ ಬರಿ ಖಬರ್ ಘೆವ್ನ್ ತುಮ್ಚ್ಯಾ ಮದ್ದಿ ಅದ್ದಿ ಯೆಲ್ಲಾವ್. ಅನಿ ತುಮಿ ಭಾಯ್ಲೆ ಹೊಲ್ಲ್ಯಾಶಿ ಜಾಲ್ಯಾರ್ ಬಿ ತುಮ್ಚ್ಯಾ ಕಡೆ ಯೆಲ್ಲ್ಯಾ ವೈನಾ ನಿರ್ದಾರ್ ಕರಲ್ಲಿ ಗಡ್ ಮಿಯಾ ಉತರಲ್ಲ್ಯಾ ಸಾರ್ಕೆ ಹೊಯ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 10:14
17 ತಿಳಿವುಗಳ ಹೋಲಿಕೆ  

ಈ ಉಪದೇಶವು ಜನರಿಗೆ ತಿಳಿಸುವುದಕ್ಕಾಗಿ ದೇವರು ನನಗೆ ಕೊಟ್ಟ ಸುವಾರ್ತೆಯ ಒಂದು ಭಾಗವಾಗಿದೆ. ಭಾಗ್ಯವಂತನಾದ ದೇವರಿಂದಲೇ ಈ ಮಹಿಮೆಯ ಸುವಾರ್ತೆಯು ಬಂದಿತು.


ನಿಮಗೆ ಕ್ರಿಸ್ತನಲ್ಲಿ ಹತ್ತುಸಾವಿರ ಮಂದಿ ಉಪದೇಶಕರಿರಬಹುದು, ಆದರೆ ಬಹು ಮಂದಿ ತಂದೆಗಳು ಇಲ್ಲ. ಸುವಾರ್ತೆಯ ಮೂಲಕವಾಗಿ ಕ್ರಿಸ್ತ ಯೇಸುವಿನಲ್ಲಿ ನಾನೇ ನಿಮಗೆ ಆತ್ಮಿಕ ತಂದೆಯಾಗಿದ್ದೇನೆ.


ನಾನು ಸುವಾರ್ತೆಯ ವಿಷಯದಲ್ಲಿ ಹೆಮ್ಮೆಪಡುತ್ತೇನೆ. ನಂಬುವ ಪ್ರತಿಯೊಬ್ಬರನ್ನು ರಕ್ಷಿಸುವುದಕ್ಕಾಗಿ ಅಂದರೆ ಮೊದಲನೆಯದಾಗಿ, ಯೆಹೂದ್ಯರನ್ನು ಅನಂತರ ಯೆಹೂದ್ಯರಲ್ಲದವರನ್ನು ಸಹ ರಕ್ಷಿಸುವುದಕ್ಕಾಗಿ ದೇವರು ಸುವಾರ್ತೆ ಎಂಬ ಶಕ್ತಿಯನ್ನು ಉಪಯೋಗಿಸುತ್ತಾನೆ.


ನಿಮಗೆ ನಿರೀಕ್ಷೆ ಇರುವುದರಿಂದಲೇ ಕ್ರಿಸ್ತನಲ್ಲಿ ನಂಬಿಕೆ ಇಟ್ಟಿದ್ದೀರಿ ಮತ್ತು ದೇವಜನರನ್ನು ಪ್ರೀತಿಸುತ್ತೀರಿ. ನೀವು ನಿರೀಕ್ಷಿಸುವಂಥವುಗಳು ನಿಮಗೋಸ್ಕರ ಪರಲೋಕದಲ್ಲಿ ಸಿದ್ಧ ಮಾಡಲ್ಪಟ್ಟಿವೆ ಎಂಬುದು ನಿಮಗೆ ತಿಳಿದಿದೆ. ನಿಮಗೆ ತಿಳಿಸಲಾದ ಸತ್ಯವಾಕ್ಯವನ್ನು ಅಂದರೆ ಸುವಾರ್ತೆಯನ್ನು ನೀವು ಕೇಳಿದಾಗ ಈ ನಿರೀಕ್ಷೆಯ ಬಗ್ಗೆ ತಿಳಿದುಕೊಂಡಿರಿ. ನೀವು ಸುವಾರ್ತೆಯನ್ನು ಕೇಳಿ ದೇವರ ಕೃಪೆಯ ಸತ್ಯಾರ್ಥವನ್ನು ತಿಳಿದುಕೊಂಡಂದಿನಿಂದ ಸುವಾರ್ತೆಯು ನಿಮ್ಮಲ್ಲಿ ವೃದ್ಧಿಯಾಗುತ್ತಿದೆ ಮತ್ತು ಜನರಿಗೆ ಆಶೀರ್ವಾದಕರವಾಗಿದೆ. ಅದೇ ರೀತಿ ಪ್ರಪಂಚದ ಎಲ್ಲಾ ಕಡೆಗಳಲ್ಲೂ ಸುವಾರ್ತೆಯು ವೃದ್ಧಿಯಾಗುತ್ತಿದೆ ಮತ್ತು ಆಶೀರ್ವಾದಕರವಾಗಿದೆ.


ಈ ಲೋಕದ ಅಧಿಪತಿಯು (ಸೈತಾನನು) ನಂಬದವರ ಮನಸ್ಸುಗಳನ್ನು ಕುರುಡುಗೊಳಿಸಿದ್ದಾನೆ. ಕ್ರಿಸ್ತನ ಮಹಿಮೆಯ ವಿಷಯವಾದ ಸುವಾರ್ತೆಯ ಬೆಳಕನ್ನು (ಸತ್ಯವನ್ನು) ಅವರು ಕಾಣಲಾರರು. ಕ್ರಿಸ್ತನೊಬ್ಬನೇ ದೇವರಿಗೆ ಪ್ರತಿರೂಪವಾಗಿದ್ದಾನೆ.


ನಾನು ಕ್ರಿಸ್ತನ ಸುವಾರ್ತೆಯನ್ನು ತಿಳಿಸುವುದಕ್ಕಾಗಿ ತ್ರೋವಕ್ಕೆ ಹೋದೆನು. ಪ್ರಭುವು ಅಲ್ಲಿ ನನಗೆ ಒಳ್ಳೆಯ ಅವಕಾಶವನ್ನು ಕೊಟ್ಟನು.


ಆದರೆ ದೇವರು ತನ್ನ ಪವಿತ್ರಾತ್ಮನ ಮೂಲಕ ನಮಗೆ ಈ ಸಂಗತಿಗಳನ್ನು ಪ್ರಕಟಿಸಿದನು. ಪವಿತ್ರಾತ್ಮನು ಸಕಲವನ್ನೂ ದೇವರ ಅಗಾಧವಾದ ರಹಸ್ಯಗಳನ್ನೂ ತಿಳಿದಿದ್ದಾನೆ.


ಮನುಷ್ಯರ ಅಂತರಂಗದಲ್ಲಿರುವ ರಹಸ್ಯ ಸಂಗತಿಗಳಿಗೆ ದೇವರು ತೀರ್ಪುಮಾಡುವ ದಿನದಂದು ಇವುಗಳೆಲ್ಲಾ ನೆರವೇರುವವು. ದೇವರು ಯೇಸು ಕ್ರಿಸ್ತನ ಮೂಲಕ ಜನರಿಗೆ ತೀರ್ಪು ಮಾಡುತ್ತಾನೆ ಎಂಬುದಾಗಿ ಸುವಾರ್ತೆಯು ತಿಳಿಸುತ್ತದೆ. ನಾನು ಜನರಿಗೆ ತಿಳಿಸುವುದು ಆ ಸುವಾರ್ತೆಯನ್ನೇ.


ನಾನು ನನ್ನ ಸ್ವಂತ ಪ್ರಾಣದ ಬಗ್ಗೆ ಚಿಂತಿಸುವುದಿಲ್ಲ. ಪ್ರಭುವಾದ ಯೇಸು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಅತ್ಯಂತ ಮುಖ್ಯವಾಗಿದೆ. ದೇವರ ಕೃಪೆಯ ವಿಷಯವಾದ ಸುವಾರ್ತೆಯ ಬಗ್ಗೆ ಸಾಕ್ಷಿ ನೀಡುವುದೇ ನನ್ನ ಕೆಲಸವಾಗಿದೆ. ಆ ಕೆಲಸವನ್ನು ಮಾಡಿ ಪೂರೈಸುವುದೇ ನನ್ನ ಅಪೇಕ್ಷೆಯಾಗಿದೆ.


ದೇವಕುಮಾರನಾದ ಯೇಸು ಕ್ರಿಸ್ತನನ್ನು ಕುರಿತ ಸುವಾರ್ತೆಯ ಆರಂಭವಿದು.


ದೇವರು ನನಗೆ ಕೊಟ್ಟ ವರದಾನಗಳನ್ನು ಉಪಯೋಗಿಸಿ ಚತುರ ಶಿಲ್ಪಿಯಂತೆ ನಾನು ಆ ಮನೆಗೆ ಅಸ್ತಿವಾರವನ್ನು ಹಾಕಿದೆನು. ಇತರ ಜನರು ಆ ಅಸ್ತಿವಾರದ ಮೇಲೆ ಕಟ್ಟುತ್ತಿದ್ದಾರೆ. ಆದರೆ ಪ್ರತಿಯೊಬ್ಬ ವ್ಯಕ್ತಿಯು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಬೇಕು.


ದೇವರಿಗೆ ಮಹಿಮೆಯಾಗಲಿ. ನಿಮ್ಮನ್ನು ನಂಬಿಕೆಯಲ್ಲಿ ಬಲಗೊಳಿಸಬಲ್ಲಾತನು ದೇವರೊಬ್ಬನೇ. ನಾನು ಉಪದೇಶಿಸುವ ಸುವಾರ್ತೆಯ ಮೂಲಕ ದೇವರು ನಿಮ್ಮನ್ನು ಬಲಗೊಳಿಸಬಲ್ಲನು. ನಾನು ಯೇಸು ಕ್ರಿಸ್ತನ ಬಗ್ಗೆ ಜನರಿಗೆ ತಿಳಿಸುತ್ತಿರುವುದೇ ಆ ಸುವಾರ್ತೆ. ದೇವರು ತಿಳಿಯಪಡಿಸಿದ ಆ ಸುವಾರ್ತೆಯು ರಹಸ್ಯವಾದ ಸತ್ಯವಾಗಿತ್ತು ಮತ್ತು ಆರಂಭದಿಂದಲೂ ಮರೆಯಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು