2 ಕೊರಿಂಥದವರಿಗೆ 10:18 - ಪರಿಶುದ್ದ ಬೈಬಲ್18 ಒಬ್ಬನು ತನ್ನನ್ನು ಒಳ್ಳೆಯವನೆಂದು ಹೇಳಿಕೊಂಡ ಮಾತ್ರಕ್ಕೆ ಅವನು ಸ್ವೀಕೃತನೆಂದಲ್ಲ. ಪ್ರಭುವು ಯಾರನ್ನು ಒಳ್ಳೆಯವನೆಂದು ಯೋಚಿಸುತ್ತಾನೊ ಅವನೇ ಸ್ವೀಕೃತನಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯನಲ್ಲ. ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅಂತೆಯೇ, ತನ್ನನ್ನು ತಾನೇ ಹೊಗಳಿಕೊಳ್ಳುವವನು ಅಲ್ಲ, ಪ್ರಭು ಯಾರನ್ನು ಹೊಗಳುತ್ತಾರೋ, ಅವನೇ ಧನ್ಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯನಲ್ಲ; ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ತನ್ನನ್ನು ತಾನೇ ಹೊಗಳಿಕೊಳ್ಳುವವನಲ್ಲ, ಕರ್ತ ಯೇಸು ಯಾರನ್ನು ಹೊಗಳುತ್ತಾರೋ ಅವನೇ ಯೋಗ್ಯನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಕಶ್ಯಾಕ್ ಮಟ್ಲ್ಯಾರ್ ಅಪ್ನಾಚಿಚ್ ಬಡಾಯ್ ಬೊಲ್ತಾ ತೊ ನ್ಹಯ್, ಕೊನಾಚೆ ಮೊಟೆಪಾನ್ ಧನಿ ಸಾಂಗ್ತಾ ತೊ ಮಾನುಸ್ ಯೊಗ್ಯ್. ಅಧ್ಯಾಯವನ್ನು ನೋಡಿ |
ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.
ನಾವು ನಮ್ಮನ್ನು ನಿಮ್ಮ ಮುಂದೆ ಮತ್ತೊಮ್ಮೆ ನಿರೂಪಿಸಿಕೊಳ್ಳುತ್ತಿಲ್ಲ. ಆದರೆ ನಮ್ಮ ಬಗ್ಗೆ ನಿಮಗೆ ಹೇಳುತ್ತಿದ್ದೇವೆಯಷ್ಟೆ. ನೀವು ನಮ್ಮ ವಿಷಯದಲ್ಲಿ ಹೆಮ್ಮೆಪಡುವುದಕ್ಕೆ ನಿಮಗೆ ಕಾರಣಗಳನ್ನು ಕೊಡುತ್ತಿದ್ದೇವೆ. ಆಗ, ಕಣ್ಣಿಗೆ ಕಾಣುವ ಸಂಗತಿಗಳ ಬಗ್ಗೆ ಹೆಮ್ಮೆಪಡುವ ಜನರಿಗೆ ಕೊಡತಕ್ಕ ಉತ್ತರವು ನಿಮ್ಮಲಿರುವುದು. ಆ ಜನರು ಒಬ್ಬ ವ್ಯಕ್ತಿಯ ಹೃದಯದ ಸ್ಥಿತಿಯ ಬಗ್ಗೆ ಚಿಂತಿಸುವುದಿಲ್ಲ.