7 ನಿಮ್ಮ ಮುಂದಿರುವ ನಿಜಾಂಶಗಳನ್ನು ನೀವು ಗಮನಿಸಬೇಕು. ಒಬ್ಬ ವ್ಯಕ್ತಿಯು ತಾನು ನಿಜವಾಗಿಯೂ ಕ್ರಿಸ್ತನವನೆಂದು ತಿಳಿದುಕೊಂಡಿದ್ದರೆ ಅವನಂತೆಯೇ ನಾವೂ ಕ್ರಿಸ್ತನವರೆಂಬುದನ್ನು ಅವನು ತಿಳಿದುಕೊಳ್ಳಬೇಕು.
7 ನೀವು ಬಾಹ್ಯವಾದುದ್ದುನ್ನು ಮಾತ್ರ ನೋಡುತ್ತೀರಿ. ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ಒಪ್ಪಿಕೊಂಡರೆ ಅವನು ಆಲೋಚನೆಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ತಿಳಿದುಕೊಳ್ಳಲಿ.
7 ನೀವು ಹೊರಗಿನ ತೋರಿಕೆಗಳನ್ನು ಗಮನಿಸುವಂತವರು. ಯಾರಾದರೂ ತಾನು ಕ್ರಿಸ್ತಯೇಸುವಿಗೆ ಸೇರಿದವನು ಎಂದು ದೃಢವಾಗಿ ನಂಬುವುದಾದರೆ, ಅವನು ಮತ್ತೆ ತನ್ನನ್ನೇ ಪರೀಕ್ಷಿಸಿ ನೋಡಲಿ. ಏಕೆಂದರೆ, ಅವನಂತೆಯೇ ನಾವೂ ಕ್ರಿಸ್ತಯೇಸುವಿಗೆ ಸೇರಿದವರು.
7 ನೀವು ಮುಖದ ಮುಂದೆ ಇರುವಂಥದನ್ನು ನೋಡಿರಿ. ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ನಂಬಿಕೊಂಡರೆ ಅವನು ತಿರಿಗಿ ಆಲೋಚನೆ ಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ತಿಳುಕೊಳ್ಳಲಿ.
7 ನೀವು ಹೊರಗಿನ ತೋರಿಕೆಗಳನ್ನು ಮಾತ್ರ ತೀರ್ಪುಮಾಡುವವರಾಗಿದ್ದೀರಿ. ಯಾರಾದರೂ ತಾನು ಯೇಸುವಿಗೆ ಸೇರಿದವನು ಎಂದು ದೃಢವಾಗಿ ನಂಬುವುದಾದರೆ, ತಾನು ಹೇಗೆ ಕ್ರಿಸ್ತ ಯೇಸುವಿನವನೋ, ಹಾಗೆಯೇ ನಾವೂ ಕ್ರಿಸ್ತ ಯೇಸುವಿನವರು ಎಂದು ಅವನು ತಿಳಿದುಕೊಳ್ಳಲಿ.
ನಾವು ನಮ್ಮನ್ನು ನಿಮ್ಮ ಮುಂದೆ ಮತ್ತೊಮ್ಮೆ ನಿರೂಪಿಸಿಕೊಳ್ಳುತ್ತಿಲ್ಲ. ಆದರೆ ನಮ್ಮ ಬಗ್ಗೆ ನಿಮಗೆ ಹೇಳುತ್ತಿದ್ದೇವೆಯಷ್ಟೆ. ನೀವು ನಮ್ಮ ವಿಷಯದಲ್ಲಿ ಹೆಮ್ಮೆಪಡುವುದಕ್ಕೆ ನಿಮಗೆ ಕಾರಣಗಳನ್ನು ಕೊಡುತ್ತಿದ್ದೇವೆ. ಆಗ, ಕಣ್ಣಿಗೆ ಕಾಣುವ ಸಂಗತಿಗಳ ಬಗ್ಗೆ ಹೆಮ್ಮೆಪಡುವ ಜನರಿಗೆ ಕೊಡತಕ್ಕ ಉತ್ತರವು ನಿಮ್ಮಲಿರುವುದು. ಆ ಜನರು ಒಬ್ಬ ವ್ಯಕ್ತಿಯ ಹೃದಯದ ಸ್ಥಿತಿಯ ಬಗ್ಗೆ ಚಿಂತಿಸುವುದಿಲ್ಲ.
ಅವರು ಕ್ರಿಸ್ತನ ಸೇವೆಮಾಡುತ್ತಿದ್ದಾರೋ? ನಾನು ಸಹ ಅವರಿಗಿಂತಲೂ ಹೆಚ್ಚಾಗಿ ಸೇವೆಮಾಡುತ್ತಿದ್ದೇನೆ. (ನಾನು ಹುಚ್ಚನಂತೆ ಹೀಗೆ ಮಾತಾಡುತ್ತಿದ್ದೇನೆ.) ನಾನು ಅವರಿಗಿಂತಲೂ ಹೆಚ್ಚು ಕಷ್ಟಪಟ್ಟು ದುಡಿದಿದ್ದೇನೆ; ಹೆಚ್ಚು ಸಲ ಸೆರೆಮನೆಯಲ್ಲಿದ್ದೆನು. ಹೆಚ್ಚು ಏಟುಗಳನ್ನು ತಿಂದಿದ್ದೇನೆ, ನಾನು ಅನೇಕ ಸಲ ಮರಣದ ಸಮೀಪದಲ್ಲಿದ್ದೆನು.
ನಾವಾದರೋ ದೇವರಿಂದ ಬಂದವರು. ಆದ್ದರಿಂದ ದೇವರನ್ನು ಬಲ್ಲ ಜನರು ನಮಗೆ ಕಿವಿಗೊಡುತ್ತಾರೆ, ಆದರೆ ದೇವರಿಂದ ಬಂದಿಲ್ಲದ ಜನರು ನಮ್ಮ ಮಾತುಗಳನ್ನು ಕೇಳುವುದಿಲ್ಲ. ಯಾವುದು ಸತ್ಯವನ್ನು ಬೋಧಿಸುವ ಆತ್ಮ, ಯಾವುದು ಸುಳ್ಳನ್ನು ಬೋಧಿಸುವ ಆತ್ಮ ಎಂಬುದನ್ನು ಹೀಗೆ ತಿಳಿದುಕೊಳ್ಳುತ್ತೇವೆ.
ಪೌಲನಾದ ನಾನು ಕ್ರಿಸ್ತನ ಮೃದುಸ್ವಭಾವದಿಂದಲೂ ಕನಿಕರದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ. ನಾನು ನಿಮ್ಮೊಂದಿಗಿರುವಾಗ ದೀನನಾಗಿರುತ್ತೇನೆಂದೂ, ನಿಮ್ಮಿಂದ ದೂರದಲ್ಲಿರುವಾಗ ಧೀರನಾಗಿರುತ್ತೇನೆಂದೂ ಕೆಲವರು ಹೇಳುತ್ತಾರೆ.
ಅಂದರೆ, ನಿಮ್ಮಲ್ಲಿ ಒಬ್ಬನು, “ನಾನು ಪೌಲನನ್ನು ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ; ಮತ್ತೊಬ್ಬನು, “ನಾನು ಅಪೊಲ್ಲೋಸನನ್ನು ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ. ಇನ್ನೊಬ್ಬನು, “ನಾನು ಕೇಫನನ್ನು (ಪೇತ್ರನನ್ನು) ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ. ಮತ್ತೊಬ್ಬನು, “ನಾನು ಕ್ರಿಸ್ತನನ್ನು ಹಿಂಬಾಲಿಸುತ್ತೇನೆ.” ಎಂದು ಹೇಳುತ್ತಾನೆ.
ಕ್ರಿಸ್ತನು ನನ್ನ ಮೂಲಕ ಮಾತಾಡುತ್ತಿದ್ದಾನೆ ಎಂಬುದಕ್ಕೆ ನಿಮಗೆ ಸಾಕ್ಷಿಬೇಕು. ನನಗಿರುವ ಸಾಕ್ಷಿ ಏನೆಂದರೆ, ಕ್ರಿಸ್ತನು ನಿಮ್ಮನ್ನು ದಂಡಿಸುವುದರಲ್ಲಿ ಬಲಹೀನನಲ್ಲ. ಕ್ರಿಸ್ತನು ನಿಮ್ಮ ಮಧ್ಯದಲ್ಲಿ ಬಲಿಷ್ಠನಾಗಿದ್ದಾನೆ.
ನಾನು ಬದ್ಧಿಹೀನನಂತೆ ಮಾತಾಡುತ್ತಿದ್ದೇನೆ. ಅದಕ್ಕೆ ನೀವೇ ಕಾರಣರು. ನೀವೇ ನನ್ನ ಬಗ್ಗೆ ಒಳ್ಳೆಯ ಸಂಗತಿಗಳನ್ನು ಹೇಳಬೇಕು. ನನಗೆ ಯಾವ ಬೆಲೆಯೂ ಇಲ್ಲ. ನಾನು ಕೇವಲ ಅಲ್ಪನಾಗಿದ್ದೇನೆ, ಆದರೆ ಆ “ಮಹಾಅಪೊಸ್ತಲರು” ನನಗಿಂತ ಯಾವುದರಲ್ಲಿಯೂ ಮಿಗಿಲಾಗಿಲ್ಲ.
ಯೇಸುವಿನ ಬಗ್ಗೆ ನಾವು ಬೋಧಿಸಿದ ಸಂಗತಿಗಳಿಗೆ ಭಿನ್ನವಾದಂಥ ಸಂಗತಿಗಳನ್ನು ಬೋಧಿಸುವ ಬೋಧಕರು ನಿಮ್ಮ ಬಳಿಗೆ ಬಂದು ಬೋಧಿಸಿದರೂ ನೀವು ತಾಳ್ಮೆಯಿಂದಿರುತ್ತೀರಿ. ನೀವು ನಮ್ಮಿಂದ ಸ್ವೀಕರಿಸಿಕೊಂಡ ಪವಿತ್ರಾತ್ಮನಿಗೂ ಸುವಾರ್ತೆಗೂ ಭಿನ್ನವಾದ ಆತ್ಮವನ್ನೂ ಸುವಾರ್ತೆಯನ್ನೂ ಸ್ವೀಕರಿಸಿಕೊಳ್ಳಲು ಬಹು ಇಷ್ಟವುಳ್ಳವರಾಗಿದ್ದೀರಿ. ಆದ್ದರಿಂದ ನೀವು ನಮ್ಮ ವಿಷಯದಲ್ಲಿ ತಾಳ್ಮೆಯಿಂದಿರಬೇಕು.
ಆದರೆ ಪ್ರತಿಯೊಬ್ಬನು ಕ್ರಮಬದ್ಧ ರೀತಿಯಲ್ಲಿ ಜೀವಂತವಾಗಿ ಎದ್ದುಬರುವನು. ಮೊಟ್ಟಮೊದಲನೆಯದಾಗಿ ಕ್ರಿಸ್ತನೇ ಎದ್ದುಬಂದನು. ಕ್ರಿಸ್ತನು ಮತ್ತೆ ಬರುವಾಗ ಕ್ರಿಸ್ತನಿಗೆ ಸೇರಿದ ಜನರು ಜೀವಂತವಾಗಿ ಎದ್ದುಬರುವರು.
ಯೇಸು ಫರಿಸಾಯರಿಗೆ ಹೀಗೆಂದನು, “ನೀವು ಜನರ ಮುಂದೆ ನಿಮ್ಮನ್ನು ಒಳ್ಳೆಯವರೆಂದು ತೋರಿಸಿಕೊಳ್ಳುತ್ತೀರಿ. ಆದರೆ ನಿಜವಾಗಿಯೂ ನಿಮ್ಮ ಹೃದಯದಲ್ಲಿರುವುದು ದೇವರಿಗೆ ಗೊತ್ತು. ಜನರ ದೃಷ್ಟಿಯಲ್ಲಿ ಅಮೂಲ್ಯವಾದುವುಗಳು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿವೆ.
“ತಮ್ಮನ್ನು ಬೇರೆ ಜನರು ನೋಡಲಿ ಎಂಬ ಒಂದೇ ಉದ್ದೇಶದಿಂದ ಅವರು ಒಳ್ಳೆಯ ಕಾರ್ಯಗಳನ್ನು ಮಾಡುತ್ತಾರೆ. ಪವಿತ್ರ ಗ್ರಂಥಗಳು ತುಂಬಿರುವ ವಿಶೇಷವಾದ ಚರ್ಮದ ಚೀಲಗಳನ್ನು ಅವರು ಕಟ್ಟಿಕೊಂಡಿರುತ್ತಾರೆ. ಅವರು ಈ ಚೀಲಗಳನ್ನು ಇನ್ನೂ ಹೆಚ್ಚುಹೆಚ್ಚು ದೊಡ್ಡದನ್ನಾಗಿ ಮಾಡುತ್ತಾರೆ. ಜನರು ನೋಡಲಿ ಎಂದು ಅವರು ತಮ್ಮ ವಿಶೇಷ ಪ್ರಾರ್ಥನೆಯ ಉಡುಪುಗಳನ್ನು ಮತ್ತಷ್ಟು ಉದ್ದ ಮಾಡುತ್ತಾರೆ.
ಆದರೆ ಯೆಹೋವನು ಸಮುವೇಲನಿಗೆ, “ಎಲೀಯಾಬನ ಎತ್ತರವನ್ನಾಗಲಿ ರೂಪವನ್ನಾಗಲಿ ಪರಿಗಣಿಸಬೇಡ. ಯಾಕೆಂದರೆ ನಾನು ಅವನನ್ನು ತಿರಸ್ಕರಿಸಿದ್ದೇನೆ. ಮನುಷ್ಯರಾದರೋ ಹೊರತೋರಿಕೆಯನ್ನು ಪರಿಗಣಿಸುತ್ತಾರೆ; ಯೆಹೋವನಾದರೋ ಹೊರತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ” ಎಂದು ಹೇಳಿದನು.