2 ಕೊರಿಂಥದವರಿಗೆ 10:8 - ಪರಿಶುದ್ದ ಬೈಬಲ್8 ಪ್ರಭುವು ನಮಗೆ ಕೊಟ್ಟಿರುವ ಅಧಿಕಾರದ ಬಗ್ಗೆ ನಾವು ಹೆಚ್ಚು ಹೆಮ್ಮೆಪಡುತ್ತೇವೆ ಎಂಬುದೇನೋ ಸತ್ಯ. ಆದರೆ ಆತನು ನಮಗೆ ಈ ಅಧಿಕಾರವನ್ನು ಕೊಟ್ಟಿರುವುದು ನಿಮ್ಮನ್ನು ಬಲಪಡಿಸುವುದಕ್ಕಾಗಿಯೇ ಹೊರತು ನಿಮಗೆ ನೋವನ್ನು ಉಂಟುಮಾಡುವುದಕ್ಕಾಗಿಯಲ್ಲ. ಆದ್ದರಿಂದ ಅದರ ಬಗ್ಗೆ ಹೆಮ್ಮೆಪಡುವುದರಲ್ಲಿ ನಾನು ನಾಚಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವುದರಲ್ಲಿ ನಾಚಿಕೆಪಡಬೇಕಾಗಿರುವುದಿಲ್ಲ. ಆದರೆ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಕಟ್ಟುವುದಕ್ಕಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟಿರುವವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಪ್ರಭು ನಮಗೆ ಅಧಿಕಾರವನ್ನು ಕೊಟ್ಟಿರುವುದು ನಿಮ್ಮನ್ನು ಕೆಡವಿ ಹಾಳುಮಾಡುವುದಕ್ಕಲ್ಲ, ಕಟ್ಟಿ ಎಬ್ಬಿಸುವುದಕ್ಕಾಗಿ. ಈ ಅಧಿಕಾರವನ್ನು ಕುರಿತು ಒಂದು ವೇಳೆ, ನಾವು ಕೊಂಚ ಹೆಚ್ಚಾಗಿ ಹೊಗಳಿಕೊಂಡಿದ್ದರೂ ಅದಕ್ಕಾಗಿ ಸಂಕೋಚಪಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾಚಿಕೆಪಡುವದಕ್ಕೆ ಕಾರಣವಾಗುವದಿಲ್ಲ. ಆದರೆ ನಿಮ್ಮನ್ನು ಕೆಡವಿಹಾಕುವದಕ್ಕಲ್ಲ ಕಟ್ಟುವದಕ್ಕಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಿಮ್ಮನ್ನು ಕೆಡವಿ ಹಾಕುವುದಕ್ಕಲ್ಲ. ನಿಮ್ಮ ಭಕ್ತಿವೃದ್ಧಿಮಾಡಲಿಕ್ಕೆ ಕರ್ತ ಯೇಸು ನಮಗೆ ಅಧಿಕಾರವನ್ನು ಕೊಟ್ಟಿದ್ದಾರೆ. ಈ ಅಧಿಕಾರದ ಬಗ್ಗೆ ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವುದರಲ್ಲಿ ನಾನು ನಾಚಿಕೆಪಡುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತುಮ್ಚ್ಯಾಸಾಟ್ನಿ ನ್ಹಯ್, ತುಮ್ಚ್ಯಾ ವಾಡಾವಳಿಸಾಟ್ನಿ ಧನಿಯಾನ್ ಮಾಕಾ ದಿಲ್ಲ್ಯಾ ಅಧಿಕಾರಾಚ್ಯಾ ವಿಶಯಾತ್ ಮಿಯಾ ಉಲ್ಲಿ ಬಡಾಯ್ ಚಿಂತ್ಲಾ ರ್‍ಹಾವ್ಕ್ ಫಿರೆ ; ಖರೆ ಅಶೆ ಯವಜಲ್ಲ್ಯಾ ವೈನಾ ಮಾಕಾ ಕಾಯ್ ಲಜ್ಜಾ ದಿಸಿನಾ . ಅಧ್ಯಾಯವನ್ನು ನೋಡಿ |